ಮೈಸೂರು: ಇಲ್ಲಿನ ವಿಶ್ವೇಶ್ವರಯ್ಯನಗರದ ಅಪಾರ್ಟ್‌ಮೆಂಟ್‌ವೊಂದರಲ್ಲಿ ಡೆತ್ ನೋಟ್ ಬರೆದಿಟ್ಟು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿರುವ ಘಟನೆ ನಡೆದಿದೆ.
ಈ ಘಟನೆಯಲ್ಲಿ ಮೃತಪಟ್ಟವರು ಚೇತನ್(45), ರೂಪಾಲಿ(43), ಪ್ರಿಯಂಂವದ(65) ಮತ್ತು ಕುಶಾಲ್(15) ಎಂಬುದಾಗಿ ಗುರುತಿಸಲಾಗಿದೆ. ಮೊದಲು ಚೇತನ್ ತನ್ನ ತಾಯಿ, ಪತ್ನಿ ಮತ್ತು ಮಗನಿಗೆ ವಿಷ ಉಣಿಸಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಬಳಿಕ ತಾನು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಲ್ಲದೇ ನಮ್ಮ ಸಾವಿಗೆ ನಾವೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಮೃತಪಟ್ಟಿರುವ ಚೇತನ್ ಎಂಬಾತ ಡೆತ್‌ನೋಟ್‌ನಲ್ಲಿ ಹಣಕಾಸಿನ ಸಮಸ್ಯೆಯಿಂದಾಗಿ ನಾವು ಸಾಯುತ್ತಿದ್ದೇವೆ. ನಮ್ಮ ಸಾವಿಗೆ ಬೇರೆ ಯಾರೂ ಕಾರಣರಲ್ಲ ನನ್ನ ಸ್ನೇಹಿತರು, ಸಂಬಂಧಿಕರಿಗೆ ಯಾರೂ ತೊಂದರೆ ನೀಡಬೇಡಿ. ನಮ್ಮನ್ನು ಕ್ಷಮಿಸಿ ಐ ಆಮ್ ಸ್ಯಾರಿ ಎಂದು ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದಾರೆ.
ಈ ಘಟನೆ ತಿಳಿದ ಕೂಡಲೇ ವಿದ್ಯಾರಣ್ಯಪುರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇನ್ನು ಪ್ರಕರಣದ ಬಗ್ಗೆ ಮೈಸೂರು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಪ್ರತಿಕ್ರಿಯೆ ನೀಡಿ, ಈ ಘಟನೆಯ ಕುರಿತು ವಿದ್ಯಾರಣ್ಯಪುರಂನಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಸಲಾಗುವುದು.
ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…
ಮೈಸೂರು : ಬುಧವಾರವಷ್ಟೇ ಹೆಬ್ಬಾಳ್ನಲ್ಲಿ ಶೆಡ್ವೊಂದರ ಮೇಲೆ ದಾಳಿ ನಡೆಸಿದ್ದ ಎನ್ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…
ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…