ಮೈಸೂರು : ವಂಚನೆ ಪ್ರಕರಣದಲ್ಲಿ ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾಗಿದ್ದ ವಕೀಲನನ್ನು ವಿದ್ಯಾರಣ್ಯಪುರಂ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ವಿಶ್ವಾಸ ದ್ರೋಹ ಹಾಗೂ ವಂಚನೆಯ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ತಲೆ ಮರೆಸಿಕೊಂಡಿದ್ದ ಓರಿಯಂಟಲ್ ಬ್ಯಾಂಕ್ ಆ್ ಕಾಮರ್ಸ್ ಮಾಜಿ ವ್ಯವಸ್ಥಾಪಕ, ವಕೀಲ ಬೆಂಕಿ ಚಿದಾನಂದ್ ಅವರನ್ನು ತುಮಕೂರಿನಲ್ಲಿ ಬಂಧಿಸಿದ ಪೊಲೀಸರು, ನ್ಯಾಯಾಧೀಶರ ಎದುರು ಹಾಜರು ಪಡಿಸಿ, ಶಿಕ್ಷೆ ಜಾರಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು.
ಬೆಂಕಿ ಚಿದಾನಂದ ಲಷ್ಕರ್ ಮೊಹಲ್ಲಾದ ಕೆ.ರಾಘು ಅವರಿಂದ 2012ರಲ್ಲಿ 20 ಸಾವಿರ ರೂ.ಗಳನ್ನು ಸಾಲವಾಗಿ ಪಡೆದಿದ್ದರು. ಆ ಸಾಲದ ಮರು ಪಾವತಿಗಾಗಿ ದಿವಾನ್ಸ್ ರಸ್ತೆಯ ಓರಿಯಂಟಲ್ ಬ್ಯಾಂಕ್ ಆ್ ಕಾಮರ್ಸ್‌ನ 20 ಸಾವಿರ ರೂ. ಮೊತ್ತದ ಚೆಕ್‌ವೊಂದಕ್ಕೆ ಸಹಿ ಮಾಡಿ ರಾಘು ಅವರಿಗೆ ನೀಡಿದ್ದರು. ರಾಘು ಬ್ಯಾಂಕಿಗೆ ಹಾಜರುಪಡಿಸಿದಾಗ ಚೆಕ್‌ಬೌನ್ಸ್ ಆಗಿತ್ತು. ಬೆಂಕಿ ಚಿದಾನಂದ ಅವರ ಮನೆಯ ಬಳಿ ಹೋಗಿ ವಿಚಾರ ತಿಳಿಸಿ, ಹಣ ವಾಪಸ್ ನೀಡುವಂತೆ ಕೇಳಿದ್ದರು. ಆಗ ಬೆಂಕಿ ಚಿದಾನಂದ, ‘‘ಈ ವಿಚಾರವಾಗಿ ಕೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು’’ ಎಂದು ರಾಘು ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ಪೊಲೀಸರು ಬೆಂಕಿ ಚಿದಾನಂದ್, ಪತ್ನಿ ಗಿರಿಜಾಂಬಾ ಹಾಗೂ ಪುತ್ರ ಸ್ನೇಹಿತ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ದೋಷಾ ರೋಪಣೆ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಚಿದಾನಂದ್ ಅವರಿಗೆ 3 ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಿತ್ತು. ಚಿದಾನಂದ್ ಅವರು ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಕೆಳ ನ್ಯಾಯಾಲಯದ ಆದೇಶವನ್ನು ಎತ್ತಿಹಿಡಿದು, ಚಿದಾನಂದ್ ಅವರ ಅರ್ಜಿಯನ್ನು ವಜಾಗೊಳಿಸಿ ತೀರ್ಪು ನೀಡಿದೆ.
ಅರ್ಜಿಯನ್ನು ವಜಾಗೊಳಿಸಿ ತೀರ್ಪು ನೀಡಿದ ಹಿನ್ನಲೆಯಲ್ಲಿ ನ್ಯಾಯಾಲಯದ ಆದೇಶ ಜಾರಿಗೆ ಪೊಲೀಸರು, ಚಿದಾನಂದ್ ನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.
ಟಿ.ನರಸೀಪುರ : ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆ ಬಿದ್ದ ಘಟನೆ ಟಿ.ನರಸೀಪುರ ತಾಲ್ಲೂಕಿನ ಶ್ರೀರಂಗರಾಜಪುರ ಗ್ರಾಮದಲ್ಲಿ ನಡೆದಿದೆ. ಕಳೆದ…
ಮೈಸೂರು: ಎಂಎಲ್‌ಸಿ ಸ್ಥಾನಕ್ಕಾಗಿ ರಕ್ತದಲ್ಲಿ ಸಹಿ ಮಾಡಿ ಮನವಿ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಕಾಂಗ್ರೆಸ್ ಪಕ್ಷದ ಕಾರ್ಯಕರ್ತನೊಬ್ಬರು ತಮ್ಮ…
ಧನುರ್ಮಾಸ ಆರಂಭವಾದ ಕೂಡಲೇ ಎಲ್ಲೆಡೆ ದೇವಸ್ಥಾನಗಳಲ್ಲಿ ಬ್ರಾಹ್ಮಿ ಮುಹೂರ್ತದಲ್ಲಿ ಬೆಳಗಿನ ಜಾವ ಪೂಜೆ ಆರಂಭವಾಗುತ್ತದೆ. ಮಹಿಳೆಯರು ಬೆಳಗಿನ ಚಳಿಯಲ್ಲಿಯೇ ದೇವಾಲಯಗಳಿಗೆ…
ಮೈಸೂರು : ಚಲಿಸುತ್ತಿದ್ದ ವೇಳೆಯೇ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೇರಳ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಹೊತ್ತಿ ಉರಿದಿರುವ ಘಟನೆ…
ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ನಂಜನಗೂಡು ಪಟ್ಟಣದಿಂದ ಊಟಿ ಮತ್ತು ಸುಲ್ತಾನ್ ಬತ್ತೇರಿಗೆ ಹಾದು ಹೋಗಿರುವ ರಸ್ತೆಗಳಲ್ಲಿ ಮತ್ತು…
ಮೈಸೂರು ನಗರದ ಸಬ್ ಅರ್ಬನ್ ಬಸ್ ನಿಲ್ದಾಣದ ಪ್ರವೇಶ ಹಾಗೂ ನಿರ್ಗಮನ ದ್ವಾರಗಳ ಬಳಿ ಆಟೋಗಳನ್ನು ಅಡ್ಡಾದಿಡ್ಡಿಯಾಗಿ ನಿಲುಗಡೆ ಮಾಡುತ್ತಿದ್ದು,…