ಮೈಸೂರು

ವಂಚನೆ ಪ್ರಕರಣ : ಶಿಕ್ಷೆಗೆ ಗುರಿಯಾಗಿದ್ದ ವಕೀಲನ ಬಂಧನ

ಮೈಸೂರು : ವಂಚನೆ ಪ್ರಕರಣದಲ್ಲಿ ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾಗಿದ್ದ ವಕೀಲನನ್ನು ವಿದ್ಯಾರಣ್ಯಪುರಂ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ವಿಶ್ವಾಸ ದ್ರೋಹ ಹಾಗೂ ವಂಚನೆಯ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ತಲೆ ಮರೆಸಿಕೊಂಡಿದ್ದ ಓರಿಯಂಟಲ್ ಬ್ಯಾಂಕ್ ಆ್ ಕಾಮರ್ಸ್ ಮಾಜಿ ವ್ಯವಸ್ಥಾಪಕ, ವಕೀಲ ಬೆಂಕಿ ಚಿದಾನಂದ್ ಅವರನ್ನು ತುಮಕೂರಿನಲ್ಲಿ ಬಂಧಿಸಿದ ಪೊಲೀಸರು, ನ್ಯಾಯಾಧೀಶರ ಎದುರು ಹಾಜರು ಪಡಿಸಿ, ಶಿಕ್ಷೆ ಜಾರಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು.

ಬೆಂಕಿ ಚಿದಾನಂದ ಲಷ್ಕರ್ ಮೊಹಲ್ಲಾದ ಕೆ.ರಾಘು ಅವರಿಂದ 2012ರಲ್ಲಿ 20 ಸಾವಿರ ರೂ.ಗಳನ್ನು ಸಾಲವಾಗಿ ಪಡೆದಿದ್ದರು. ಆ ಸಾಲದ ಮರು ಪಾವತಿಗಾಗಿ ದಿವಾನ್ಸ್ ರಸ್ತೆಯ ಓರಿಯಂಟಲ್ ಬ್ಯಾಂಕ್ ಆ್ ಕಾಮರ್ಸ್‌ನ 20 ಸಾವಿರ ರೂ. ಮೊತ್ತದ ಚೆಕ್‌ವೊಂದಕ್ಕೆ ಸಹಿ ಮಾಡಿ ರಾಘು ಅವರಿಗೆ ನೀಡಿದ್ದರು. ರಾಘು ಬ್ಯಾಂಕಿಗೆ ಹಾಜರುಪಡಿಸಿದಾಗ ಚೆಕ್‌ಬೌನ್ಸ್ ಆಗಿತ್ತು. ಬೆಂಕಿ ಚಿದಾನಂದ ಅವರ ಮನೆಯ ಬಳಿ ಹೋಗಿ ವಿಚಾರ ತಿಳಿಸಿ, ಹಣ ವಾಪಸ್ ನೀಡುವಂತೆ ಕೇಳಿದ್ದರು. ಆಗ ಬೆಂಕಿ ಚಿದಾನಂದ, ‘‘ಈ ವಿಚಾರವಾಗಿ ಕೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು’’ ಎಂದು ರಾಘು ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

ಪೊಲೀಸರು ಬೆಂಕಿ ಚಿದಾನಂದ್, ಪತ್ನಿ ಗಿರಿಜಾಂಬಾ ಹಾಗೂ ಪುತ್ರ ಸ್ನೇಹಿತ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ದೋಷಾ ರೋಪಣೆ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಚಿದಾನಂದ್ ಅವರಿಗೆ 3 ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಿತ್ತು. ಚಿದಾನಂದ್ ಅವರು ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಕೆಳ ನ್ಯಾಯಾಲಯದ ಆದೇಶವನ್ನು ಎತ್ತಿಹಿಡಿದು, ಚಿದಾನಂದ್ ಅವರ ಅರ್ಜಿಯನ್ನು ವಜಾಗೊಳಿಸಿ ತೀರ್ಪು ನೀಡಿದೆ.

ಅರ್ಜಿಯನ್ನು ವಜಾಗೊಳಿಸಿ ತೀರ್ಪು ನೀಡಿದ ಹಿನ್ನಲೆಯಲ್ಲಿ ನ್ಯಾಯಾಲಯದ ಆದೇಶ ಜಾರಿಗೆ ಪೊಲೀಸರು, ಚಿದಾನಂದ್ ನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

ಆಂದೋಲನ ಡೆಸ್ಕ್

Recent Posts

174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ಗೆ ಇಸ್ರೇಲ್‌ನ ಶೌರ್ಯ ಪ್ರಶಸ್ತಿ!

ಜೆರುಸೇಲಂ: ಭೀಕರ ವಿಮಾನ ಅವಘಡವನ್ನು ತಪ್ಪಿಸಿ 174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರಿಗೆ…

6 mins ago

ರಾಜ್ಯ ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್‌ಗೆ ಸಂಚು?: ಶಾಸಕ ಗಣಿಗ ರವಿ ಗಂಭೀರ ಆರೋಪ!

ಮಂಡ್ಯ: ರಾಜ್ಯದ ಸಚಿವರಿಗೆ ಮುಜುಗರ ಉಂಟುಮಾಡಲು ಕೇಂದ್ರ ಸಚಿವರೊಬ್ಬರು ಹಾಗೂ ಕರ್ನಾಟಕದ ಬಿಜೆಪಿ ನಾಯಕರೊಬ್ಬರು ಸ್ಟಿಂಗ್ ಆಪರೇಷನ್‌ಗೆ ಸಂಚು ರೂಪಿಸಿದ್ದಾರೆ…

10 mins ago

ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯಲ್ಲಿ ಹುಲಿ ಪ್ರತ್ಯಕ್ಷ

ಸಿದ್ದಾಪುರ: ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯ ಘಟ್ಟತಳ ಹೇರೂರು ಎಸ್ಟೇಟ್ ಬಳಿ ಗುರುವಾರ ರಾತ್ರಿ ಹುಲಿ ಕಾಣಿಸಿಕೊಂಡಿದ್ದು ಬಳಿಕ ಸಮೀಪದ…

26 mins ago

ಓದುಗರ ಪತ್ರ: ಬಂತು ಎಟಿಎಂನಲ್ಲಿ ‘ತೇಪೆ’ ಹಾಕಿದ ನೋಟು!

ಒಂದು ಕಾಲದಲ್ಲಿ (ಒಂದಾನೊಂದು ಕಾಲದಲ್ಲಿ ಎಂಬ ಮಾತಿನಂತೆ) ಎಟಿಎಂ ಯಂತ್ರಗಳಿಂದ ಹಣ ಡ್ರಾ ಮಾಡಿದಾಗ ಸಾಮಾನ್ಯವಾಗಿ ಹೊಸ ಗರಿಗರಿನೋಟುಗಳು ಬರುತ್ತಿದ್ದವು.…

2 hours ago

ಓದುಗರ ಪತ್ರ: ಫ್ಲೆಕ್ಸ್ ಮುಕ್ತವೆಂಬುದು ಸಾಂಪ್ರದಾಯಿಕ ಮಾತಾಗಬಾರದಲ್ಲವೇ?

ಮೈಸೂರು ನಗರವನ್ನು ಫ್ಲೆಕ್ಸ್ ಮುಕ್ತವಾಗಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳೇ ಆಸಕ್ತಿ ವಹಿಸಿರುವುದು ಸ್ವಾಗತಾರ್ಹವಾಗಿದೆ. ದಸರಾ ಸಮಯದಲ್ಲಿ ಮೈಸೂರಿನಲ್ಲಿ ತಮ್ಮದೂ ಸೇರಿದಂತೆ ಯಾರ ಫ್ಲೆಕ್ಸ್ ಅಥವಾ…

2 hours ago

ಓದುಗರ ಪತ್ರ: ಅರಳುವ ಪ್ರತಿಭೆಗಳಿಗೆ ಸಮಯ ಹೆಚ್ಚು ಸಿಗಲಿ

ಖ್ಯಾತನಾಮರಿಗೆ ವೇದಿಕೆಯ ಕಾರ್ಯಕ್ರಮದಲ್ಲಿ ಸ್ವಲ್ಪ ಕಡಿಮೆ ಸಮಯ ದೊರೆತರೂ ಪರವಾಗಿಲ್ಲ. ಅರಳುವ ಪ್ರತಿಭೆಗಳಿಗೆ ಸಾಕಷ್ಟು ಸಮಯ ಸಿಗಬೇಕೆಂಬ ಆಶಯ ಇರಬೇಕೆಂದು…

6 hours ago