ಮೈಸೂರು

ನಕಲಿ ಚಿನ್ನ ಅಡವಿಟ್ಟು ವಂಚಿಸುತಿದ್ದ ಅಸಾಮಿ ಬಂಧನ

ಹುಣಸೂರು : ಗಿರವಿ ಅಂಗಡಿಯಲ್ಲಿ ಸ್ನೇಹಿತರ ಹೆಸರುಗಳಲ್ಲಿ ನಕಲಿ ಚಿನ್ನದ ಉಂಗುರಗಳನ್ನು ಅಡವಿಟ್ಟು ಪಂಗನಾಮ ಹಾಕಿ ಲಕ್ಷಾಂತರ ರೂ. ಮೋಸ ಮಾಡಿದ್ದ ಆರೋಪಿಯನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಚಿಕ್ಕನಾಯಕನಹಳ್ಳಿಯ ಮಂಜುನಾಥ ಅಲಿಯಾಸ್ ಮಹೇಶ್ ಬಂಧಿತ ಆರೋಪಿ. ಮತ್ತಿಬ್ಬರು ಕಾರಿನೊಂದಿಗೆ ಪರಾರಿಯಾಗಿದ್ದಾರೆ.

ಈತ ತಾಲ್ಲೂಕಿನ ಗಾವಡಗೆರೆ ಗ್ರಾಮದ ಕಾವೇರಿ ಜ್ಯುವೆಲ್ಲರ್ಸ್ ಚಿನ್ನ, ಬೆಳ್ಳಿ ಗಿರವಿ ಅಂಗಡಿಯಲ್ಲಿ ೨೦೨೩ರ ನವೆಂಬರ್ ೨೪ರಿಂದ ೨೦೨೫ ಜು.೫ರವರೆಗೆ ಕೆಡಿಎಂ ೯೧೬ ಮಾರ್ಕ್ ಇರುವ ೧೧ ನಕಲಿ ಉಂಗುರಗಳನ್ನು ಗಿರವಿ ಇಟ್ಟು ಸುಮಾರು ೫ ಲಕ್ಷ ರೂ. ಸಾಲ ಪಡೆದಿದ್ದ.

ಪ್ರಕರಣದ ವಿವರ:
ಮಂಜುನಾಥ ಪದೇಪದೇ ಸ್ನೇಹಿತರೊಂದಿಗೆ ಬಂದು ಬೇರೆ ಬೇರೆ ಹೆಸರುಗಳಲ್ಲಿ ಉಂಗುರಗಳನ್ನು ಗಿರವಿ ಇಡುತ್ತಿರುವುದರಿಂದ ಅನುಮಾನಗೊಂಡ ಅಂಗಡಿ ಮಾಲಿಕ ಜೆಸಿಂಗ್ ಉಂಗುರಗಳನ್ನು ಪರೀಕ್ಷಿಸಿದ ವೇಳೆ ನಕಲಿ ಚಿನ್ನ ಎಂಬುದು ತಿಳಿದು ಹುಣಸೂರು ಗ್ರಾಮಾಂತರ ಠಾಣೆ ಪೊಲೀಸರಿಗೆ ದೂರು ನೀಡಿದ್ದರು.

ಶನಿವಾರ ಆರೋಪಿ ಮಂಜುನಾಥ್ ಕಾರಿನಲ್ಲಿ ತನ್ನಿಬ್ಬರು ಸ್ನೇಹಿತರೊಂದಿಗೆ ಬಂದು ಉಂಗುರ ಗಿರವಿ ಇಡಲು ಮುಂದಾದ ವೇಳೆ ಗಿರವಿ ಅಂಗಡಿ ಮಾಲಿಕ ಜೆಸಿಂಗ್ ಅಕ್ಕಪಕ್ಕದವರಿಗೆ ಮಾಹಿತಿ ನೀಡಿ ಪೊಲೀಸರಿಗೆ ತಿಳಿಸಿದ್ದಾರೆ. ಈ ವೇಳೆ ಮಂಜುನಾಥ್ ಸಿಕ್ಕಿ ಬಿದ್ದಿದ್ದು, ಕಾರಿನಲ್ಲಿದ್ದ ಇಬ್ಬರು ಪರಾರಿಯಾಗಿದ್ದಾರೆ.

ಎಸ್‌ಪಿ ವಿಷ್ಣುವರ್ಧನ್, ಡಿವೈಎಸ್‌ಪಿ ಗೋಪಾಕೃಷ್ಣರವರ ಮಾರ್ಗದರ್ಶನದಲ್ಲಿ ಇನ್‌ಸ್ಪೆಕ್ಟರ್ ಎನ್.ಮುನಿಯಪ್ಪ, ಉಪನಿರೀಕ್ಷಕರಾದ ರಾಮು, ಶ್ರೀನಿವಾಸಲು, ಎಎಸ್‌ಐ ಅಂತೋಣಿಕ್ರೂಸ್, ಸಿಬ್ಬಂದಿಗಳಾದ ವಿಜಯರಾಘು, ಇಮ್ರಾನ್‌ಷರೀಫ್, ಮಹದೇವ, ರಮೇಶ, ಮಂಜುನಾಥ, ಚಾಲಕ ಸುಂದರ್‌ರಾಜು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

17 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

17 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

24 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

24 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

24 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

24 hours ago