Categories: ಮೈಸೂರು

ಯುಜಿಸಿ ನೆಟ್‌, ಕೆ-ಸೆಟ್ ಪರೀಕ್ಷೆಗೆ ಉಚಿತ ತರಬೇತಿ

ಮೈಸೂರು: ಯುಜಿಸಿ ನೆಟ್‌ ಮತ್ತು ಕೆಸೆಟ್‌ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ನಗರದ ಜ್ಞಾನಬುತ್ತಿ ಸಂಸ್ಥೆಯು ಉಚಿತ ತರಬೇತಿ ನೀಡಲಿದೆ.

ಈ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದ್ದು, ಆಸಕ್ತ ವಿದ್ಯಾರ್ಥಿಗಳು ಡಿ.೫ ರೊಳಗಾಗಿ ಸಂಜೆ ೫.೩೦ ರಿಂದ ೭.೩೦ರವರೆಗೆ ಮೈಸೂರಿನ ಲಕ್ಷ್ಮೀಪುರಂ ಸರ್ಕಾರಿ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜಿನಲ್ಲಿರುವ ಜ್ಞಾನಬುತ್ತಿ ಸಂಸ್ಥೆಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು.

ವಿಶ್ವವಿದ್ಯಾನಿಲಯದ ಧನ ಸಹಾಯ ಆಯೋಗದವರು ೨೦೨೫ರ ಜನವರಿ ತಿಂಗಳಲ್ಲಿ ನಡೆಸಲಿರುವ ಕಾಲೇಜು ಸಹಾಯಕ ಪ್ರಾಧ್ಯಾಪಕರ ಮತ್ತು ಕಿರಿಯ ಶಿಷ್ಯವೇತನ ಸಂಶೋಧನಾ ಸಹಾಯಕರ ಅರ್ಹತಾ(ಯುಜಿಸಿ-ನೆಟ್) ಪರೀಕ್ಷೆಗೆ ಈ ತರಬೇತಿ ನಡೆಯಲಿದೆ.

ಮಾಹಿತಿಗಾಗಿ ಸಂಸ್ಥೆಯ ಸಂಯೋಜಕರಾದ ಸಿ.ಕೆ.ಕಿರಣ್ ಕೌಶಿಕ್(ಮೊ.೯೯೭೨೮ ೩೦೮೫೭), ಕೆ.ವೈ.ನಾಗೇಂದ್ರ (ಮೊ.೮೨೯೬೭ ೮೮೨೫೧) ಸಂಪರ್ಕಿಸಬಹುದು ಎಂದು ಸಂಸ್ಥೆಯ ಕಾರ್ಯದರ್ಶಿ ಎಚ್.ಬಾಲಕೃಷ್ಣ ಪ್ರಕಟಣೆಯಲ್ಲಿ ಕೋರಿದ್ದಾರೆ.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ದಾಳಿ : ಇರಾನಿನ ಕ್ಷಿಪಣಿ ತಾಣ ನಾಶ

ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…

1 hour ago

ಮರ್ಯಾದಾ ಹತ್ಯೆ ನಿಷೇಧ ಮಸೂದೆ ಮಂಡನೆ

ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…

3 hours ago

ಮೈಸೂರು ನಗರದಲ್ಲಿ ಮಳೆ ; ತಂಪಾದ ಇಳೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…

3 hours ago

ಯುಗಾದಿ ಸಂಭ್ರಮ : ಮೈಸೂರಲ್ಲಿ ಖರೀದಿ ಜೋರು

ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…

5 hours ago

ನಾಳೆ ಧುರಂಧರ್-2 ಬಿಡುಗಡೆ : ಎಲ್ಲಾ ದಾಖಲೆ ಮುರಿಯುವ ನಿರೀಕ್ಷೆ

ಮುಂಬೈ : ಆದಿತ್ಯ ಧರ್‌ ನಿರ್ದೇಶನದ, ರಣವೀರ್‌ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.‌19) ಬಿಡುಗಡೆಯಾಗಲಿದೆ. ಕಳೆದ ವರ್ಷ…

5 hours ago

ದಳಪತಿ ವಿಜಯ್‌ಗೆ ಮುಖ್ಯಮಂತ್ರಿ ಸ್ಥಾನದ ಆಫರ್‌

ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳಿರುವಾಗ, ನಟ-ರಾಜಕಾರಣಿ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ…

6 hours ago