Mysore
26
overcast clouds

Social Media

ಭಾನುವಾರ, 16 ಆಗಸ್ಟ್ 2026
Light
Dark

ಮಾರ್ಚ್.‌25ರಂದು ಸಾಲಿಗ್ರಾಮದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

ಸಾಲಿಗ್ರಾಮ: ಮೈಸೂರು ಜಿಲ್ಲೆಯ ಸಾಲಿಗ್ರಾಮ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಾರ್ಚ್.25ರಂದು ಉಚಿತ ನೇತ್ರ ತಪಾಸಣಾ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರವನ್ನು ಆಯೋಜನೆ ಮಾಡಲಾಗಿದೆ ಎಂದು ಕರುನಾಡ ದೀಪ ಸೇವಾ ಟ್ರಸ್ಟ್ ಅಧ್ಯಕ್ಷ ಕೆ.ಟಿ.ಮೋಹನ್ ಕುಮಾರ್ ತಿಳಿಸಿದ್ದಾರೆ.

ಮೈಸೂರು ಜಿಲ್ಲಾ ಅಂಧತ್ವ ನಿಯಂತ್ರಣ ವಿಭಾಗ, ಬೆಂಗಳೂರಿನ ಶಂಕರ ಕಣ್ಣಿನ ಆಸ್ಪತ್ರೆ, ಕರುನಾಡ ದೀಪ ಸೇವಾ ಟ್ರಸ್ಟ್, ಗ್ರಾಮೀಣ ನಿಧಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ, ತಾಲೂಕು ಆರೋಗ್ಯ ಅಧಿಕಾರಿಗಳು, ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು, ನೇತ್ರಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರ ಸಹಯೋಗದಲ್ಲಿ ಮಾರ್ಚ್.25ರ ಬುಧವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಸಾಲಿಗ್ರಾಮ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಉಚಿತ ಕಣ್ಣಿನ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಈ ಶಿಬಿರದ ಸದುಪಯೋಗವನ್ನು ಪಡಿಸಿಕೊಳ್ಳಬೇಕೆಂದು ಕರುನಾಡ ದೀಪ ಸೇವಾ ಟ್ರಸ್ಟ್ ಅಧ್ಯಕ್ಷ ಕೆ.ಟಿ.ಮೋಹನ್ ಕುಮಾರ್ ಮನವಿ ಮಾಡಿದ್ದಾರೆ.

 

Tags:
error: Content is protected !!