ಸರಗೂರು: ಹಳ್ಳಿಗಾಡಿನ ಜನರಿಗೆ ಆರೋಗ್ಯ ವೃದ್ಧಿಸುವ ಸಲುವಾಗಿ ಗ್ರಾಮೀಣ ಭಾಗದಲ್ಲಿ ಆರೋಗ್ಯ ಶಿಬಿರವನ್ನು ಆಯೋಜನೆ ಮಾಡುತ್ತಿರುವ ಹಾರ್ಟ್ ಸಂಸ್ಥೆಯ ಕಾರ್ಯ ಪ್ರಶಂಸನೀಯ ಎಂದು ಅರೋಗ್ಯ ಅಧಿಕಾರಿ ಡಾ.ರವಿಕುಮಾರ್ ತಿಳಿಸಿದ್ದಾರೆ.
ಸರಗೂರು ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹಾರ್ಟ್ ಸಂಸ್ಥೆ ಮೈಸೂರು, ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಛೇರಿ ಹೆಚ್.ಡಿ.ಕೋಟೆ, ಸಮುದಾಯ ಆರೋಗ್ಯ ಕೇಂದ್ರ ಸರಗೂರು, ಪಟ್ಟಣ ಪಂಚಾಯಿತಿ ಸರಗೂರು ಇವರ ಸಂಯುಕ್ತಾಶ್ರಯದಲ್ಲಿ ನಡೆದ ಆರೋಗ್ಯ ಶಿಬಿರವನ್ನು ಉದ್ಘಾಟನೆ ಮಾಡಿ ಮಾತನಾಡಿದ ಡಾ. ರವಿಕುಮಾರ್ ಅವರು, ಗ್ರಾಮೀಣ ಪ್ರದೇಶದಲ್ಲಿ ಇಂತಹ ಆರೋಗ್ಯ ಕಾರ್ಯಕ್ರಮಗಳು ಹೆಚ್ಚು ಹೆಚ್ಚು ನಡೆಯಬೇಕು. ಇತ್ತೀಚಿನ ದಿನಗಳಲ್ಲಿ ಕ್ಯಾನ್ಸರ್ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಕ್ಯಾನ್ಸರ್ ಆರೋಗ್ಯ ಶಿಬಿರಗಳನ್ನು ಆಯೋಜಿಸುವಂತೆ ಮನವಿ ಮಾಡಿದರು.
ನಂತರ ಮಾತನಾಡಿದ ಹಾರ್ಟ್ ಸಂಸ್ಥೆ ಅಧ್ಯಕ್ಷ ಶಿವಕುಮಾರ್ ಅವರು, ಗ್ರಾಮೀಣ ಭಾಗದ ಜನರಿಗೆ ಆರೋಗ್ಯ ಶಿಕ್ಷಣ ನೀಡುವ ನಿಟ್ಟಿನಲ್ಲಿ ಈ ಸಂಸ್ಥೆಯು ಹುಟ್ಟಿದ್ದು, ನಮ್ಮ ತಾಲ್ಲೂಕಿನಲ್ಲಿ ಆರೋಗ್ಯ ಶಿಬಿರಗಳನ್ನು ಆಯೋಜಿಸುತ್ತಿದ್ದೇವೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರು ಶಿಬಿರದ ಪ್ರಯೋಜನ ಪಡೆದು ಅರೋಗ್ಯವಂತರಾಗುವಂತೆ ತಿಳಿಸಿದರು.
ನಂತರ ಸಂಧಿವಾತ ತಜ್ಞರಾದ ಮಹಾಬಲೇಶ್ವರ ಮಾಮದಪುರ ಸಂಧಿವಾತ ಲಕ್ಷಣಗಳು, ವಿಧಗಳು, ಮತ್ತು ಪರಿಹಾರಗಳ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ತಾಲ್ಲೂಕು ಆರೋಗ್ಯ ಅಧಿಕಾರಿಗಳಾದ ಡಾ.ರವಿಕುಮಾರ್, ವೈದ್ಯಾಧಿಕಾರಿ ಡಾ.ಪಾರ್ಥಸಾರಥಿ, ಹಾರ್ಟ್ ಸಂಸ್ಥೆ ಅಧ್ಯಕ್ಷ ಶಿವಕುಮಾರ್, ಸಂಧಿವಾತ ಕೀಲು ರೋಗ ತಜ್ಞರಾದ ಮಹಾಬಲೇಶ್ವರ ಮಾಮದಪುರ, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ರಾಧಿಕಾ ಶ್ರೀನಾಥ್, ಆರೋಗ್ಯ ನಿರೀಕ್ಷಕರಾದ ಅನಿತಾ, ಮೇಲ್ವಿಚಾರಕ ದಿನೇಶ್, ಎಎಸ್‌ಜಿ ಕಣ್ಣಿನ ಆಸ್ಪತ್ರೆ ಮಹೇಶ್, ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಕರಾದ ಜಗದೀಶ್, ರವಿರಾಜ್ ಸೇರಿದಂತೆ ಹಲವು ಸಾರ್ವಜನಿಕರು ಭಾಗಿಯಾಗಿದ್ದರು.
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…
ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್ ಗಿಫ್ಟ್ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…
ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದು ಭೇಟಿ ನೀಡಿ…
ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್ ಅವರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…
ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…