ಮೈಸೂರು : ಎಲ್ಲಿಯೆಯವರೆಗೆ ಅಸಮಾನತೆ ಇರುತ್ತದೆಯೋ ಅಲ್ಲಿಯವರೆಗೆ ಸ್ವಾತಂತ್ರ್ಯ ಯಶಸ್ವಿಯಾಗಿದೆ ಎಂದು ಹೇಳಲಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು.
ಪ್ರಗತಿಪರ ಸಂಘಟನೆಗಳ ಒಕ್ಕೂಟ ಇವರ ವತಿಯಿಂದ ಮೈಸೂರಿನ ಕಲಾ ಮಂದಿರದಲ್ಲಿ ಆಯೋಜಿಸಲಾಗಿದ್ದ ಶ್ರೀ ಪ. ಮಲ್ಲೇಶ್ – 90 ಭಾರತ ಜನತಂತ್ರದ ಸಮಕಾಲಿನ ತಲ್ಲಣಗಳು ರಾಷ್ಟ್ರೀಯ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮನು ಸ್ಮೃತಿಯಿಂದಾಗಿ ಶೂದ್ರರು ಅಕ್ಷರ ಸಂಸ್ಕೃತಿಯಿಂದ ವಂಚಿತರಾದರು. ಚಾತುರ್ವಣ ವ್ಯವಸ್ಥೆಯಲ್ಲಿ ಮೊದಲ ಮೂರು ವರ್ಗಗಳಿಗೆ ವಿದ್ಯೆಗೆ ಅವಕಾಶವಿತ್ತು ಎಂದರು.
ಕಾಯಕ ಜೀವಿಗಳಿಗೆ ವಿದ್ಯೆ, ಆಸ್ತಿ ಇರುವಂತಿರಲಿಲ್ಲ. ಜಾತಿ ವ್ಯವಸ್ಥೆಯ ಕಾರಣದಿಂದಲೇ ಅಸಮಾನತೆ ಸೃಷ್ಟಿ ಯಾಗಿ ಕೆಲವರ ಕೈಯಲ್ಲಿ ಆಸ್ತಿ ಶೇಖರಣೆಯಾಗಿ ವಿದ್ಯೆಯಿಂದ ವಂಚಿತರಾದರು. ಎಲ್ಲಿಯೆಯವರೆಗೆ ಅಸಮಾನತೆ ಇರುತ್ತದೆಯೋ ಅಲ್ಲಿಯವರೆಗೆ ಸ್ವಾತಂತ್ರ್ಯ ಯಶಸ್ವಿಯಾಗಿದೆ ಎಂದು ಹೇಳಲಾಗುವುದಿಲ್ಲ ಎಂದರು.
ಚಲನೆಯಿಲ್ಲದ ಜಾತಿವ್ಯವಸ್ಥೆ ತೊಲಗಲು ಸಮಾನತೆ ಬರಬೇಕು : ಚಲನೆಯಿಲ್ಲದ ಜಾತಿವ್ಯವಸ್ಥೆ ನಮ್ಮ ಸಮಾಜದಲ್ಲಿದೆ. ಜಾತಿವ್ಯವಸ್ಥೆಯನ್ನು ವರ್ಟಿಕಲ್ ಆಗಿದ್ದು, ಶ್ರೇಷ್ಠ ,ಕನಿಷ್ಠವೆಂಬ ವ್ಯವಸ್ಥೆಯಿತ್ತು. ನಿರ್ಜಿವವಾದ ವ್ಯವಸ್ಥೆಗೆ ಜೀವ ಬರಬೇಕಾದರೆ ಆರ್ಥಿಕ , ಸಾಮಾಜಿಕ ಸಮಾನತೆ ಬರಬೇಕು. ಬಸವಾದಿ ಶರಣರು ಗಾಂಧಿ ಅಂಬೇಡ್ಕರ್ ರು ಸಮಾಜದಲ್ಲಿ ಬದಲಾವಣೆ ತರಲು ಶ್ರಮಿಸಿದರು.
ಕಾಯಕ ಮತ್ತು ದಾಸೋಹ ತತ್ವವನ್ನು ಬಸವಾದಿ ಶರಣರು ಪ್ರತಿಪಾದಿಸಿದರು. ಉತ್ಪಾದಿಸಿದ ಸಂಪತ್ತನ್ನು ಎಲ್ಲರೂ ಸಮನಾಗಿ ಹಂಚಿಕೊಳ್ಳಬೇಕೆಂದು ಅನುಭವ ಮಂಟಪದಲ್ಲಿ ತಿಳಿಸಿದ್ದರು. ಬಸವಾದಿ ಶರಣರ ಕಾಲದಲ್ಲಿ ಮಹಿಳೆಯರಿಗೂ, ದುರ್ಬಲವರ್ಗದವರಿಗೂ ಶಿಕ್ಷಣ ಸೇರಿದಂತೆ ಎಲ್ಲ ರಂಗದಲ್ಲಿಯೂ ಸಮಾನ ಅವಕಾಶಗಳನ್ನು ನೀಡಲಾಗಿತ್ತು.
ತಳಸಮುದಾಯಗಳು ಮುಖ್ಯವಾಹಿನಿಗೆ ಬರಬೇಕು.850 ವರ್ಷಗಳ ಹಿಂದೆ ಸಮಾನತೆಯ ತತ್ವ ಇಂದಿಗೂ ಸಮರ್ಥವಾಗಿ ಪಾಲನೆಯಾಗುತ್ತಿಲ್ಲ. ಬಸವಾದಿ ಶರಣರು ಕರ್ಮಸಿದ್ಧಾಂತವನ್ನು ಅಲ್ಲಗೆಳೆದಿದ್ದರು.
ಆದ್ದರಿಂದ ವೈಚಾರಿಕ ಹಾಗೂ ವೈಜ್ಞಾನಿಕ ಶಿಕ್ಷಣವನ್ನು ಎಲ್ಲರೂ ಪಡೆಯಬೇಕು. ಇತಿಹಾಸ ತಿಳಿದಿದ್ದರೆ ಮಾತ್ರ ಭವಿಷ್ಯ ಬರೆಯಲು ಸಾಧ್ಯ ಎಂದು ಡಾ.ಅಂಬೇಡ್ಕರ್ ತಿಳಿಸಿದ್ದರು ಎಂದರು.
ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ಬಸ್ ಟಿಕೆಟ್ ದರವನ್ನು ಏರಿಕೆ ಮಾಡುವುದಿಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು…
ಹಾಸನ: ಜೂಜಾಡುವ ವೇಲೆ ಪೊಲೀಸರು ದಾಳಿ ನಡೆಸಿದ ಪರಿಣಾಮ ತಪ್ಪಿಸಿಕೊಂಡು ಓಡುವ ವೇಳೆ ಆಯತಪ್ಪಿ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ…
ಮೈಸೂರು: ನಾಡಿನಾದ್ಯಂತ ರಂಜಾನ್ ಹಬ್ಬದ ಸಂಭ್ರಮ ಮನೆಮಾಡಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ…
ಬೆಂಗಳೂರು: ಧುರಂಧರ್-2 ಚಿತ್ರವನ್ನು ಹಾಡಿ ಹೊಗಳಿರುವ ತೆಲುಗು ಚಿತ್ರರಂಗದ ಖ್ಯಾತ ನಟರ ವಿರುದ್ಧ ಪ್ರಕಾಶ್ ರಾಜ್ ಕಿಡಿಕಾರಿದ್ದಾರೆ. ತೆಲುಗಿನ ಖ್ಯಾತ…
ಬೆಂಗಳೂರು: ರಾಜ್ಯದಲ್ಲಿ ಇದಕ್ಕಿದ್ದಂತೆ ಆಲಿಕಲ್ಲು ಸಹಿತ ವ್ಯಾಪಕ ಮಳೆ ದಾಖಲಾಗಿದ್ದರಿಂದ ಮತ್ತೆ ಅಪಾರ ಪ್ರಮಾಣದ ಬೆಳೆ ಹಾನಿ ಉಂಟಾಗಿದೆ. ಕೂಡಲೇ…
ಕುಶಾಲನಗರ: ಒಂಟಿಸಲಗವೊಂದು ಮನೆ ಬಳಿ ನಿಲ್ಲಿಸಿದ್ದ ಆಟೋ ರಿಕ್ಷಾದ ಮೇಲೆ ದಾಳಿ ನಡೆಸಿ ಜಖಂಗೊಳಿಸಿರುವ ಘಟನೆ ಕುಶಾಲನಗರದ ನೆಲ್ಲಿ ಹುದಿಕೇರಿ…