ಮೈಸೂರು

ಅಸಮಾನತೆ ಇರುವವರೆಗೆ ಸ್ವಾತಂತ್ರ್ಯ ಯಶಸ್ವಿಯಾಗುವುದಿಲ್ಲ : ಸಿದ್ದರಾಮಯ್ಯ

ಮೈಸೂರು : ಎಲ್ಲಿಯೆಯವರೆಗೆ ಅಸಮಾನತೆ ಇರುತ್ತದೆಯೋ ಅಲ್ಲಿಯವರೆಗೆ ಸ್ವಾತಂತ್ರ್ಯ ಯಶಸ್ವಿಯಾಗಿದೆ ಎಂದು ಹೇಳಲಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು.

ಪ್ರಗತಿಪರ ಸಂಘಟನೆಗಳ ಒಕ್ಕೂಟ ಇವರ ವತಿಯಿಂದ ಮೈಸೂರಿನ ಕಲಾ ಮಂದಿರದಲ್ಲಿ ಆಯೋಜಿಸಲಾಗಿದ್ದ ಶ್ರೀ ಪ. ಮಲ್ಲೇಶ್ – 90 ಭಾರತ ಜನತಂತ್ರದ ಸಮಕಾಲಿನ ತಲ್ಲಣಗಳು ರಾಷ್ಟ್ರೀಯ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು,  ಮನು ಸ್ಮೃತಿಯಿಂದಾಗಿ ಶೂದ್ರರು ಅಕ್ಷರ ಸಂಸ್ಕೃತಿಯಿಂದ ವಂಚಿತರಾದರು. ಚಾತುರ್ವಣ ವ್ಯವಸ್ಥೆಯಲ್ಲಿ ಮೊದಲ ಮೂರು ವರ್ಗಗಳಿಗೆ ವಿದ್ಯೆಗೆ ಅವಕಾಶವಿತ್ತು ಎಂದರು.

ಕಾಯಕ ಜೀವಿಗಳಿಗೆ ವಿದ್ಯೆ, ಆಸ್ತಿ ಇರುವಂತಿರಲಿಲ್ಲ. ಜಾತಿ ವ್ಯವಸ್ಥೆಯ ಕಾರಣದಿಂದಲೇ ಅಸಮಾನತೆ ಸೃಷ್ಟಿ ಯಾಗಿ ಕೆಲವರ ಕೈಯಲ್ಲಿ ಆಸ್ತಿ ಶೇಖರಣೆಯಾಗಿ ವಿದ್ಯೆಯಿಂದ ವಂಚಿತರಾದರು. ಎಲ್ಲಿಯೆಯವರೆಗೆ ಅಸಮಾನತೆ ಇರುತ್ತದೆಯೋ ಅಲ್ಲಿಯವರೆಗೆ ಸ್ವಾತಂತ್ರ್ಯ ಯಶಸ್ವಿಯಾಗಿದೆ ಎಂದು ಹೇಳಲಾಗುವುದಿಲ್ಲ ಎಂದರು.

ಚಲನೆಯಿಲ್ಲದ ಜಾತಿವ್ಯವಸ್ಥೆ ತೊಲಗಲು ಸಮಾನತೆ ಬರಬೇಕು : ಚಲನೆಯಿಲ್ಲದ ಜಾತಿವ್ಯವಸ್ಥೆ ನಮ್ಮ ಸಮಾಜದಲ್ಲಿದೆ. ಜಾತಿವ್ಯವಸ್ಥೆಯನ್ನು ವರ್ಟಿಕಲ್ ಆಗಿದ್ದು, ಶ್ರೇಷ್ಠ ,ಕನಿಷ್ಠವೆಂಬ ವ್ಯವಸ್ಥೆಯಿತ್ತು. ನಿರ್ಜಿವವಾದ ವ್ಯವಸ್ಥೆಗೆ ಜೀವ ಬರಬೇಕಾದರೆ ಆರ್ಥಿಕ , ಸಾಮಾಜಿಕ ಸಮಾನತೆ ಬರಬೇಕು. ಬಸವಾದಿ ಶರಣರು ಗಾಂಧಿ ಅಂಬೇಡ್ಕರ್ ರು ಸಮಾಜದಲ್ಲಿ ಬದಲಾವಣೆ ತರಲು ಶ್ರಮಿಸಿದರು.

ಕಾಯಕ ಮತ್ತು ದಾಸೋಹ ತತ್ವವನ್ನು ಬಸವಾದಿ ಶರಣರು ಪ್ರತಿಪಾದಿಸಿದರು. ಉತ್ಪಾದಿಸಿದ ಸಂಪತ್ತನ್ನು ಎಲ್ಲರೂ ಸಮನಾಗಿ ಹಂಚಿಕೊಳ್ಳಬೇಕೆಂದು ಅನುಭವ ಮಂಟಪದಲ್ಲಿ ತಿಳಿಸಿದ್ದರು. ಬಸವಾದಿ ಶರಣರ ಕಾಲದಲ್ಲಿ ಮಹಿಳೆಯರಿಗೂ, ದುರ್ಬಲವರ್ಗದವರಿಗೂ ಶಿಕ್ಷಣ ಸೇರಿದಂತೆ ಎಲ್ಲ ರಂಗದಲ್ಲಿಯೂ ಸಮಾನ ಅವಕಾಶಗಳನ್ನು ನೀಡಲಾಗಿತ್ತು.

ತಳಸಮುದಾಯಗಳು ಮುಖ್ಯವಾಹಿನಿಗೆ ಬರಬೇಕು.850 ವರ್ಷಗಳ ಹಿಂದೆ ಸಮಾನತೆಯ ತತ್ವ ಇಂದಿಗೂ ಸಮರ್ಥವಾಗಿ ಪಾಲನೆಯಾಗುತ್ತಿಲ್ಲ. ಬಸವಾದಿ ಶರಣರು ಕರ್ಮಸಿದ್ಧಾಂತವನ್ನು ಅಲ್ಲಗೆಳೆದಿದ್ದರು.

ಆದ್ದರಿಂದ ವೈಚಾರಿಕ ಹಾಗೂ ವೈಜ್ಞಾನಿಕ ಶಿಕ್ಷಣವನ್ನು ಎಲ್ಲರೂ ಪಡೆಯಬೇಕು. ಇತಿಹಾಸ ತಿಳಿದಿದ್ದರೆ ಮಾತ್ರ ಭವಿಷ್ಯ ಬರೆಯಲು ಸಾಧ್ಯ ಎಂದು ಡಾ.ಅಂಬೇಡ್ಕರ್ ತಿಳಿಸಿದ್ದರು ಎಂದರು.

andolana

Recent Posts

ಮೈಸೂರು | ನಾಲ್ಕೇ ದಿನಕ್ಕೆ ಮುರಿದು ಬಿದ್ದ ದಸರಾ ದೀಪಾಲಂಕಾರ ಕಟೌಟ್

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…

4 hours ago

ಕಮಿಷನ್ ಆರೋಪ ಸುಳ್ಳು, ಎಸ್‌ಐಆರ್ ರದ್ದಾಗಬೇಕು: ಸಚಿವ ಪುಟ್ಟರಂಗಶೆಟ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…

5 hours ago

ಯಳಂದೂರು ತಾಲ್ಲೂಕಿನಲ್ಲಿ ವರುಣನ ಕೃಪೆ: ಭತ್ತದ ನಾಟಿಗೆ ಮುಂದಾದ ರೈತರು

ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…

5 hours ago

ಕಾವೇರಿ ತೀರ್ಥೋದ್ಭವಕ್ಕೆ ದಿನಗಣನೆ: ಕಾವೇರಿ ನೀರಾವರಿ ನಿಗಮದಿಂದ 2 ಕೋಟಿ ರೂ ಬಿಡುಗಡೆ

ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…

5 hours ago

ಮಂಡ್ಯ | ಕೇಂದ್ರದ ಬರ ಅಧ್ಯಯನ ತಂಡದಿಂದ ಕೆಆರ್‌ಎಸ್‌ ಹಾಗೂ ಬರಪೀಡಿತ ಹಳ್ಳಿಗಳ ಪರಿಶೀಲನೆ

ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…

6 hours ago

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

10 hours ago