ಹೆಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಭರ್ಜರಿ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯ ಭರ್ತಿಯಾಗಿದೆ.
ಕೇರಳದ ವಯನಾಡು ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಹೆಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಳವಾಗಿದೆ.
ಜಲಾಶಯದ ಗರಿಷ್ಠ ನೀರಿನ ಮಟ್ಟ 84 ಅಡಿಗಳಾಗಿದ್ದು, ಪ್ರಸ್ತುತ ಜಲಾಶಯದ ನೀರಿನ ಮಟ್ಟ 83.30 ಅಡಿಗಳಾಗಿದೆ. ಜಲಾಶಯ ಭರ್ತಿಗೆ ಕೇವಲ ಒಂದು ಅಡಿ ಮಾತ್ರ ಬಾಕಿಯಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ.
ಇನ್ನೂ ಜಲಾಶಯದ ಸದ್ಯದ ಒಳಹರಿವು 19,181 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಹೊರಹರಿವನ್ನು 20,000 ಕ್ಯೂಸೆಕ್ಸ್‌ಗಳಿಗೆ ಏರಿಕೆ ಮಾಡಲಾಗಿದೆ. ಜಲಾಶಯದ ಒಳಹರಿವು ಹೆಚ್ಚಾದಂತೆ ಹೊರಹರಿವನ್ನೂ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಏರಿಕೆ ಮಾಡಲಾಗುತ್ತದೆ ಎಂದು ನೀರಾವರಿ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇನ್ನೂ ಮಳೆ ಹೀಗೆಯೇ ಮುಂದುವರಿದರೆ ಜಲಾಶಯದ ಒಳಹರಿವು ಮತ್ತಷ್ಟು ಏರಿಕೆಯಾಗುತ್ತದೆ. ಒಳಹರಿವು ಹೆಚ್ಚಾದಂತೆ ಹೊರಹರಿವನ್ನೂ ಕೂಡ ಹೆಚ್ಚಳ ಮಾಡಲಾಗುತ್ತದೆ. ಆದ್ದರಿಂದ ಕಪಿಲಾ ನದಿ ಪಾತ್ರದ ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ಬಹಳ ಎಚ್ಚರಿಕೆಯಿಂದ ಇರಬೇಕು. ಯಾವುದೇ ಕಾರಣಕ್ಕೂ ನದಿಗೆ ಇಳಿಯಬಾರದು. ಯುವಕರು ಈಜಾಡುವುದಕ್ಕೂ ಕೂಡ ನದಿಗೆ ಇಳಿಯಬಾರದು ಎಂದು ನೀರಾವರಿ ಇಲಾಖೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…