ಮೈಸೂರು: ರಾಜ್ಯಾದ್ಯಂತ ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿತ್ತಿದ್ದು, ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿಯೂ ಅಧಿಕಾರಿಗಳು ಎಲ್ಲಾ ರೀತಿಯ ಅಂತಿಮ ಹಂತದ ಸಿದ್ಧತೆ ಮಾಡಿಕೊಂಡು ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಬೇಕು ಎಂದು ಅಧಿಕಾರಿಗಳಿಗೆ ಜಿ.ಲಕ್ಷ್ಮೀಕಾಂತ್ ರೆಡ್ಡಿ ಸೂಚನೆ ನೀಡಿದ್ದಾರೆ.
ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರ್ ಸಭಾಂಗಣದಲ್ಲಿ ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಅಂಗವಾಗಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಮೈಸೂರು ಜಿಲ್ಲೆಯಲ್ಲಿ ಮಾರ್ಚ್.1 ರಿಂದ ಮಾರ್ಚ್.20 ರವರೆಗೂ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಒಟ್ಟು 50 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಅವುಗಳಲ್ಲಿ ಮೈಸೂರು ನಗರದಲ್ಲಿ 27 ಪರೀಕ್ಷಾ ಕೇಂದ್ರಗಳು ಮತ್ತು ಗ್ರಾಮಾಂತರ ವ್ಯಾಪ್ತಿಯ 23 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತದೆ ಎಂದು ಮಾಹಿತಿ ನೀಡಿದರು.
ಈ ಪರೀಕ್ಷೆಗೆ ಸಂಬಂಧಿಸಿದಂತೆ 10 ರೂಟ್‌ಗಳನ್ನು ಮಾಡಲಾಗಿದ್ದು, ಆ ರೂಟ್‌ಗೀಗೆ ರೂಟ್ ಆಫೀಸರ್‌ಗಳನ್ನು ನೇಮಕ ಮಾಡಲಾಗಿದೆ. ಅಲ್ಲದೇ ಜಿಲ್ಲಾ ಖಜಾನೆಯಿಂದ ಪ್ರಶ್ನೆ ಪತ್ರಿಕೆಗಳನ್ನು ರವಾನೆ ಮಾಡಲು ತಹಶೀಲ್ದಾರ್, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಪ್ರಾಂಶುಪಾಲರನ್ನು ಒಳಗೊಂಡ ಮಾರ್ಗಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಪ್ರಶ್ನೆ ಪತ್ರಿಕೆಗಳನ್ನು ಜಿಲ್ಲಾ ಖಜಾನೆಯಿಂದ ತೆಗೆದುಕೊಂಡು ಹೋಗುವ ವಾಹನಗಳಿಗೆ ಜಿಪಿಎಸ್ ಅಳವಡಿಸಲಾಗಿದೆ ಎಂದು ಹೇಳಿದರು.
ಇನ್ನು ದ್ವಿತೀಯ ಪಿಯುಸಿ ಪರೀಕ್ಷೆಗೆ ನಿಯೋಜಿಸಿರುವ ಅಧಿಕಾರಿಗಳು ಶಿಕ್ಷಕರು ಹಾಗೂ ಸಿಬ್ಬಂದಿಗಳು ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಕ್ರಮವಹಿಸಬೇಕು. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಟಿವಿಗಳನ್ನು ಅಳವಡಿಸಲಾಗಿದೆ. ಯಾವುದೇ ಮೋಸ ಮತ್ತು ಮಾಲ್ ಪ್ರಾಕ್ಟೀಸ್‌ಗೆ ಅವಕಾಶ ಕೊಡಬಾರದು. ಜೊತೆಗೆ ನಾಳೆ ನಡೆಯುವ ಪರೀಕ್ಷೆಯಲ್ಲಿ ವೆಬ್ ಕ್ಯಾಸ್ಟಿಂಗ್ ಅಳವಡಿಕೆ ಮಾಡಲಾಗಿರುವುದರಿಂದ ಪರೀಕ್ಷಾ ಕೊಠಡಿಯಲ್ಲಿ ಮೊಬೈಲ್ ಬಳಕೆ ಮಾಡುವಂತಿಲ್ಲ.
ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…
ನವದೆಹಲಿ: ಮದರ್ ಆಫ್ ಆಲ್ ಡೀಲ್ಸ್ ಎಂದೇ ಕರೆಯಲ್ಪಡುವ ಭಾರತ-ಯುರೋಪ್ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…
ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…
ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…