ಮೈಸೂರು

ಮುಡುಕುತೊರೆ ಜಾತ್ರಾ ಮಹೋತ್ಸವ: ಸಕಲ ಸಿದ್ಧತೆಗಾಗಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್‌ ರೆಡ್ಡಿ ಸೂಚನೆ

ಮೈಸೂರು: ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನಲ್ಲಿ ಐತಿಹಾಸಿಕ ಜಾತ್ರಾ ಮಹೋತ್ಸವ ಜನವರಿ.31 ರಿಂದ ಫೆಬ್ರವರಿ 16ರವರೆಗೆ ನಡೆಯಲಿದ್ದು, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಕ್ರಮವಹಿಸಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್‌ ರೆಡ್ಡಿ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು(ಜನವರಿ.29) ಮುಡುಕುತೊರೆ ಜಾತ್ರಾ ಮಹೋತ್ಸವದಲ್ಲಿ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಜನವರಿ 31 ರಿಂದ ಫೆಬ್ರವರಿ 16ರವರೆಗೆ ಮುಡುಕುತೊರೆ ಜಾತ್ರಾ ಮಹೋತ್ಸವ ನಡೆಯಲಿದೆ. ಫೆಬ್ರವರಿ 7 ರಂದು ರಥೋತ್ಸವ ಮತ್ತು ಫೆಬ್ರವರಿ 10 ರಂದು ತೆಪ್ಪೋತ್ಸವ ಸಮಾರಂಭ ಜರುಗಲಿದೆ. ಈ ಜಾತ್ರೆಯೂ ಒಟ್ಟು 17 ದಿನಗಳ ಕಾಲ ನಡೆಯಲಿದೆ. ಹೀಗಾಗಿ ಸಂಬಂಧ ಪಟ್ಟ ಅಧಿಕಾರಿಗಳು ಯಾವುದೇ ರೀತಿಯ ತೊಂದರೆ ಆಗದಂತೆ ಮುಂಜಾಗೃತಾ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಈ ಜಾತ್ರಾ ಮಹೋತ್ಸವದಲ್ಲಿ ಆರೋಗ್ಯ ಇಲಾಖೆ ವತಿಯಿಂದ ಆಂಬುಲೆನ್ಸ್ ವ್ಯವಸ್ಥೆ ಮತ್ತು ವೈದ್ಯರುಗಳ ತಂಡವನ್ನು ನೇಮಿಸಬೇಕು. ಚೆಸ್ಕಾಂ ಇಲಾಖೆಯಿಂದ ವಿದ್ಯುತ್ ದೀಪಾಲಂಕಾರ ಮಾಡಬೇಕು. ಅಲ್ಲದೇ ಜಾತ್ರೆಯಲ್ಲಿ ತಾತ್ಕಾಲಿಕ ಶೌಚಾಲಯ, ಮೊಬೈಲ್ ಶೌಚಾಲಯ ಹಾಗೂ ಬಟ್ಟೆ ಬದಲಿಸುವ ಕೊಠಡಿ ನಿರ್ಮಿಸಿ ಸ್ವಚ್ಚತೆಗೆ ಆದ್ಯತೆ ನೀಡಬೇಕು ಎಂದು ಸೂಚಿಸಿದರು.

ಇನ್ನೂ ಪೊಲೀಸ್ ಇಲಾಖೆ ವತಿಯಿಂದ ಬ್ಯಾರಿಕೇಡ್, ಧ್ವನಿ ವರ್ಧಕ , ಸಿಸಿ ಕ್ಯಾಮೆರಾ ಅಳವಡಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಜೊತೆಗೆ ಜಾತ್ರಾ ಮಾಳದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮತ್ತು ಜಾತ್ರಾ ಪ್ರದೇಶದಲ್ಲಿ ಸ್ವಚ್ಚತೆ ಕಾಪಾಡಬೇಕು. ನೈರ್ಮಲೀಕರಣಕ್ಕೆ ಹೆಚ್ಚು ಒತ್ತು ನೀಡಬೇಕು. ಈ ಇಲಾಖೆಗಳೊಂದಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಅರ್ಚನ ಎಸ್‌ ಎಸ್

Recent Posts

ಗುರುವಾರ ಅಮೇರಿಕಾ-ಇರಾನ್‌ ಮಧ್ಯೆ 2ನೇ ಹಂತದ ಮಾತುಕತೆ

ಇಸ್ಲಾಮಾಬಾದ್:‌ ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಇರಾನ್‌ ಮತ್ತು ಅಮೇರಿಕಾ ನಡುವೆ 2ನೇ ಸುತ್ತಿನ ಮಾತುಕತೆಗೆ…

9 mins ago

ಇಂದು ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಜಯಂತಿ: ಗಣ್ಯಾತಿಗಣ್ಯರಿಂದ ಶುಭಾಶಯ

ನವದೆಹಲಿ: ಇಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.‌ಅಂಬೇಡ್ಕರ್‌ ಅವರ 135ನೇ ಜನ್ಮ ಜಯಂತಿ. ಇದರ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ…

49 mins ago

ರೈತಾಪಿ ವರ್ಗಕ್ಕೆ ಬಿಗ್‌ ಶಾಕ್‌ ಕೊಟ್ಟ ಹವಾಮಾನ ಇಲಾಖೆ: ಏನದು ಗೊತ್ತಾ.?

ನವದೆಹಲಿ: ಈ ವರ್ಷ ದೇಶದಲ್ಲಿ ವಾಡಿಕೆಗಿಂತ ಕಡಿಮೆ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.…

1 hour ago

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನಜೀರ್‌ ಅಹಮ್ಮದ್‌ ರಾಜೀನಾಮೆ

ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ ನಜೀರ್‌ ಅಹಮ್ಮದ್‌ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್‌ ಅಹಮ್ಮದ್‌ ಅವರು ಸಿಎಂ…

2 hours ago

ಓದುಗರ ಪತ್ರ: ನದಿ ಮಾಲಿನ್ಯ ತಡೆಗಟ್ಟಿ

ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…

5 hours ago

ಓದುಗರ ಪತ್ರ: ಸಚಿವ ಸೋಮಣ್ಣ ಹೇಳಿಕೆ ಸ್ವಾಗತಾರ್ಹ

ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…

5 hours ago