ಮೈಸೂರು: ಬೇಸಿಗೆಕಾಲ ಹತ್ತಿರವಾಗುತ್ತಿದ್ದಂತೆ ಅರಣ್ಯ ಇಲಾಖೆಗೆ ಬೆಂಕಿ ನಂದಿಸುವ ಸವಾಲು ಎದುರಾಗುತ್ತದೆ. ಈ ಸಂಬಂಧ ಅರಣ್ಯಗಳಲ್ಲಿ ಬೆಂಕಿ ಅವಘಡ ತಡೆದು, ಅದನ್ನು ರಕ್ಷಿಸಲು ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್ ರೆಡ್ಡಿ ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು(ಮಾರ್ಚ್.4) ಅರಣ್ಯ ಬೆಂಕಿ ತಡೆಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಪೂರ್ವಸಿದ್ಧತೆ ಸಭೆಯಲ್ಲಿ ಮಾತನಾಡಿದ ಅವರು, ಈ ಸಂಬಂಧ ಅಗ್ನಿ ಶಾಮಕ ಇಲಾಖೆ ಮತ್ತು ಅರಣ್ಯ ಇಲಾಖೆಯ ಉತ್ತಮ ಸಮನ್ವಯತೆ ಉತ್ತಮವಾಗಿ ಯಾವುದೇ ಅವಘಡಗಳು ಸಂಭವಿಸದಂತೆ ನಿಭಾಯಿಸಲಾಗಿದೆ. ಅದರ ಜೊತೆಗೆ ಅರಣ್ಯ ರಕ್ಷಣೆಗೆ ಜನರ ಸಹಕಾರ ಹಾಗೂ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ಮಾಡಬೇಕು. ಅಲ್ಲದೇ ಅರಣ್ಯಗಳಲ್ಲಿ ಅಚನಾಕ್ ಆಗಿ ಬೆಂಕಿ ಕಾಣಿಸಿಕೊಂಡಾಗ ತಕ್ಷಣ ಕ್ರಮ ಕೈಗೊಂಡು ಅಗತ್ಯ ಕ್ರಮ ವಹಿಸಲು ಅಧಿಕಾರಿಗಳು ಸಿಬ್ಬಂದಿಗಳು ಸಜ್ಜಾಗಿ ಇರಬೇಕು ಎಂದರು.
ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಳ್ಳದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಅವುಗಳಲ್ಲಿ ನೀರು ಲಭ್ಯವಿರುವ ಪ್ರದೇಶಗಳನ್ನು ಗುರುತಿಸಿಕೊಳ್ಳಿ , ಅರಣ್ಯ ಬೆಂಕಿ ಕಾಣಿಸಿಕೊಂಡಾಗ ಹತ್ತಿರದಲ್ಲಿರುವ ಕಾರ್ಖಾನೆಗಳು, ಮಾಲ್ ಗಳು ಹಾಗೂ ಸಾರ್ವಜನಿಕರು ತಮ್ಮ ಬಳಿ ಲಭ್ಯವಿರುವ ನೀರು ಹಾಗೂ ಸೌಲಭ್ಯಗಳನ್ನು ಅಧಿಕಾರಿಗಳು ಕೋರಿದರೆ ತಕ್ಷಣ ಒದಗಿಸಬೇಕು. ಇಲ್ಲವಾದರೆ ಈ ವಿಚಾರವಾಗಿ ಅಸಹಕಾರ ತೋರಿದರೆ ರಾಷ್ಟೀಯ ವಿಪತ್ತು ನಿರ್ವಹಣಾ ಕಾಯ್ದೆ ಅನ್ವಯ ಕ್ರಮ ವಹಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಇನ್ನು ಜಿಲ್ಲಾ ವಿಪತ್ತು ನಿರ್ವಹಣೆಯಿಂದ ಅರಣ್ಯ ಇಲಾಖೆ ಮತ್ತು ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಬೇಕು. ಅಲ್ಲದೇ ಕಾಡಂಚಿನ ಪ್ರದೇಶಗಳ ಬಳಿ ಸಾರ್ವಜನಿಕರು ಧೂಮಪಾನ ಸೇವನೆ ಮಾಡಿ ಬೆಂಕಿ ನಂದಿಸದೆ ಎಸೆಯಬಾರದು. ಇದರಿಂದ ಬೆಂಕಿ ಕಾಣಿಸಿಕೊಳ್ಳುವ ಸಂಭವಿರುತ್ತದೆ. ಹೀಗಾಗಿ ಅರಣ್ಯ ಪ್ರದೇಶಗಳಲ್ಲಿ ಬೆಂಕಿ ಕಾಣಿಸಿಕೊಳ್ಳದ ಹಾಗೇ ತಡೆಯಲು ಸಾರ್ವಜನಿಕರು ಅಗತ್ಯ ಸಹಕಾರ ನೀಡಬೇಕು ಎಂದು ಹೇಳಿದರು.
ಬೆಂಗಳೂರು: ಗಾಯಕಿ ಮಂಗ್ಲಿ ಮತ್ತು ಅವರ ಸಹೋದರನ ವಿರುದ್ಧ ೧೦ ಕೋಟಿ ರೂ. ಮೋಸದ ಆರೋಪದಡಿ ಪಂಜಗುಟ್ಟ ಪೊಲೀಸರು ಪ್ರಕರಣ…
ಬೆಂಗಳೂರು: ರಾಜ್ಯದ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಒಂದು ವಾರ ಭಾರೀ ಮಳೆಯಾಗಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಬಿಸಿ ಗಾಳಿ ಬೀಸುವ ಸಾಧ್ಯತೆಯಿದೆ…
ದಾವಣಗೆರೆ: ಉಪಚುನಾವಣೆ ಮುಗಿದ ಬೆನ್ನಲ್ಲೇ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಎಂಎಲ್‌ಸಿ ಅಬ್ದುಲ್ ಜಬ್ಬಾರ್ ರಾಜೀನಾಮೆ ನೀಡಿದ್ದಾರೆ. ಎಐಸಿಸಿ ಉಸ್ತುವಾರಿ…
ಬೆಂಗಳೂರು: ಸಾಂಸ್ಕೃತಿಕ ನಗರ ಮೈಸೂರಿನ ಅಶೋಕಪುರಂ ರೈಲು ನಿಲ್ದಾಣದ ಹೆಸರನ್ನು ಬದಲಾವಣೆ ಮಾಡಲಾಗುತ್ತದೆ ಎಂಬ ವದಂತಿಯನ್ನು ಕೇಂದ್ರ ರೈಲ್ವೆ ಸಚಿವ…
ಬೀದರ್: ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ನೋಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.…
ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕು ದೊಡ್ಡಕವಲಂದೆ ಹೋಬಳಿಯ ದೊಡ್ಡಕವಲಂದೆ ಗ್ರಾಮದ ಕಾಂತರಾಜು ಮತ್ತು ಮಹೇಶ್ವರಿ ದಂಪತಿಗಳ ಪುತ್ರ ಮಹದೇವ…