ಮೈಸೂರು

ಅರಣ್ಯಗಳಲ್ಲಿ ಬೆಂಕಿ ಅವಘಡ ತಡೆಯಲು ಮುಂಜಾಗ್ರತಾ ಕ್ರಮವಹಿಸಿ: ಜಿ.ಲಕ್ಷ್ಮೀಕಾಂತ್‌ ರೆಡ್ಡಿ

ಮೈಸೂರು: ಬೇಸಿಗೆಕಾಲ ಹತ್ತಿರವಾಗುತ್ತಿದ್ದಂತೆ ಅರಣ್ಯ ಇಲಾಖೆಗೆ ಬೆಂಕಿ ನಂದಿಸುವ ಸವಾಲು ಎದುರಾಗುತ್ತದೆ. ಈ ಸಂಬಂಧ ಅರಣ್ಯಗಳಲ್ಲಿ ಬೆಂಕಿ ಅವಘಡ ತಡೆದು, ಅದನ್ನು ರಕ್ಷಿಸಲು ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್‌ ರೆಡ್ಡಿ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು(ಮಾರ್ಚ್‌.4) ಅರಣ್ಯ ಬೆಂಕಿ ತಡೆಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಪೂರ್ವಸಿದ್ಧತೆ ಸಭೆಯಲ್ಲಿ ಮಾತನಾಡಿದ ಅವರು, ಈ ಸಂಬಂಧ ಅಗ್ನಿ ಶಾಮಕ ಇಲಾಖೆ ಮತ್ತು ಅರಣ್ಯ ಇಲಾಖೆಯ ಉತ್ತಮ ಸಮನ್ವಯತೆ ಉತ್ತಮವಾಗಿ ಯಾವುದೇ ಅವಘಡಗಳು ಸಂಭವಿಸದಂತೆ ನಿಭಾಯಿಸಲಾಗಿದೆ. ಅದರ ಜೊತೆಗೆ ಅರಣ್ಯ ರಕ್ಷಣೆಗೆ ಜನರ ಸಹಕಾರ ಹಾಗೂ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ಮಾಡಬೇಕು. ಅಲ್ಲದೇ ಅರಣ್ಯಗಳಲ್ಲಿ ಅಚನಾಕ್‌ ಆಗಿ ಬೆಂಕಿ ಕಾಣಿಸಿಕೊಂಡಾಗ ತಕ್ಷಣ ಕ್ರಮ ಕೈಗೊಂಡು ಅಗತ್ಯ ಕ್ರಮ ವಹಿಸಲು ಅಧಿಕಾರಿಗಳು ಸಿಬ್ಬಂದಿಗಳು ಸಜ್ಜಾಗಿ ಇರಬೇಕು ಎಂದರು.

ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಳ್ಳದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಅವುಗಳಲ್ಲಿ ನೀರು ಲಭ್ಯವಿರುವ ಪ್ರದೇಶಗಳನ್ನು ಗುರುತಿಸಿಕೊಳ್ಳಿ , ಅರಣ್ಯ ಬೆಂಕಿ ಕಾಣಿಸಿಕೊಂಡಾಗ ಹತ್ತಿರದಲ್ಲಿರುವ ಕಾರ್ಖಾನೆಗಳು, ಮಾಲ್ ಗಳು ಹಾಗೂ ಸಾರ್ವಜನಿಕರು ತಮ್ಮ ಬಳಿ ಲಭ್ಯವಿರುವ ನೀರು ಹಾಗೂ ಸೌಲಭ್ಯಗಳನ್ನು ಅಧಿಕಾರಿಗಳು ಕೋರಿದರೆ ತಕ್ಷಣ ಒದಗಿಸಬೇಕು. ಇಲ್ಲವಾದರೆ ಈ ವಿಚಾರವಾಗಿ ಅಸಹಕಾರ ತೋರಿದರೆ ರಾಷ್ಟೀಯ ವಿಪತ್ತು ನಿರ್ವಹಣಾ ಕಾಯ್ದೆ ಅನ್ವಯ ಕ್ರಮ ವಹಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಇನ್ನು ಜಿಲ್ಲಾ ವಿಪತ್ತು ನಿರ್ವಹಣೆಯಿಂದ ಅರಣ್ಯ ಇಲಾಖೆ ಮತ್ತು ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಬೇಕು. ಅಲ್ಲದೇ ಕಾಡಂಚಿನ ಪ್ರದೇಶಗಳ ಬಳಿ ಸಾರ್ವಜನಿಕರು ಧೂಮಪಾನ ಸೇವನೆ ಮಾಡಿ ಬೆಂಕಿ ನಂದಿಸದೆ ಎಸೆಯಬಾರದು. ಇದರಿಂದ ಬೆಂಕಿ ಕಾಣಿಸಿಕೊಳ್ಳುವ ಸಂಭವಿರುತ್ತದೆ. ಹೀಗಾಗಿ ಅರಣ್ಯ ಪ್ರದೇಶಗಳಲ್ಲಿ ಬೆಂಕಿ ಕಾಣಿಸಿಕೊಳ್ಳದ ಹಾಗೇ ತಡೆಯಲು ಸಾರ್ವಜನಿಕರು ಅಗತ್ಯ ಸಹಕಾರ ನೀಡಬೇಕು ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

25 mins ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

1 hour ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

2 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

7 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

7 hours ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

7 hours ago