ಮೈಸೂರು

ಉದಯಗಿರಿ ಪೊಲೀಸ್‌ ಠಾಣೆ ಪ್ರಕರಣ: ಠಾಣೆಗೆ ಭೇಟಿ ನೀಡಿ ಮಾಹಿತಿ ಪಡೆದ ಪರಮೇಶ್ವರ್‌

ಮೈಸೂರು: ನಗರದ ಉದಯಗಿರಿ ಪೊಲೀಸ್‌ ಠಾಣೆಯ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್‌ ಠಾಣೆಗೆ ರಾಜ್ಯ ಗೃಹ ಸಚಿವ ಜಿ.ಪರಮೇಶ್ವರ್‌ ಭೇಟಿ ನೀಡಿ ಪ್ರಕರಣದ ಬಗ್ಗೆ ಸಂಪೂರ್ಣ ಮಾಹಿತಿ ಪಡೆದಿದ್ದಾರೆ.

ಡಾ.ಜಿ.ಪರಮೇಶ್ವರ್‌ ಅವರು ಇಂದು(ಫೆಬ್ರವರರಿ.14) ಉದಯಗಿರಿ ಪೊಲೀಸ್‌ ಠಾಣೆಗೆ ಭೇಟಿ ನೀಡಿದ್ದು, ಪೊಲೀಸರಿಂದ ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಈ ವೇಳೇ ಪರಮೇಶ್ವರ್‌ ಅವರೊಂದಿಗೆ ಡಿಸಿಪಿಗಳಾದ ಮುತ್ತುರಾಜ್‌ ಮತ್ತು ಜಾಹ್ನವಿ ಸೇರಿದಂತೆ ಇನ್ನಿತರ ಪೊಲೀಸ್‌ ಅಧಿಕಾರಿಗಳು ಉಪಸ್ಥಿತರಿದ್ದರು.

ಪೊಲೀಸ್‌ ಠಾಣೆಯಲ್ಲಿ ಪ್ರಕರಣದ ಬಗ್ಗೆ ಮಾಹಿತಿ ಪಡೆದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ವನಾನು ಇವತ್ತು ಘಟನೆ ಬಗ್ಗೆ ತಿಳಿದುಕೊಳ್ಳಲು ಬಂದಿದ್ದೇನೆ. ಮೊದಲು ಮಾಹಿತಿಯನ್ನು ಪಡೆದಿದ್ದೇನೆ. ಮೇಲ್ನೋಟಕ್ಕೆ ಅವರಿಗೆ ಇರುವ ಮಾಹಿತಿಯನ್ನ ಪೊಲೀಸರು ಹೇಳಿದ್ದಾರೆ. ಈ ಘಟನೆಗೆ ಕಾರಣರಾದವರಿಗೆ ಕಠಿಣ ಕ್ರಮ ತೆಗೆದುಕೊಳ್ಳಲು ಆದೇಶ ಮಾಡಿದ್ದೇವೆ. ಪೊಲೀಸ್ ವಾಹನಗಳಿಗೆ ಜಖಂ ಮಾಡಿದ್ದು, ವಾಹನಗಳಿಗೆ ಕಲ್ಲು ತೂರಿದ್ದವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಹೇಳಿದರು.

ಈ ಘಟನೆ ವಿಚಾರವಾಗಿ ಕಾನೂನನ್ನ ಕೈಗೆ ತೆಗೆದುಕೊಂಡವರನ್ನ ಯಾವುದೇ ಕಾರಣಕ್ಕೂ ಬಿಡುವ ಮಾತಿಲ್ಲ. ಯಾರೇ ತಪ್ಪು ಮಾಡಿದರೂ ಅದಕ್ಕೆ ಪೊಲೀಸ್ ವ್ಯವಸ್ಥೆ ಇದೆ. ಯಾರೇ ಆಗಲಿ ಕಾನೂನನ್ನು ಕೈಗೆ ತೆಗೆದುಕೊಳ್ಳಬಾರದು. ಪೊಲೀಸ್‌ರಿಗೆ ಪಕ್ಷ ಮುಖ್ಯ ಅಲ್ಲ, ಕಾನೂನನ್ನು ರಕ್ಷಣೆ ಮಾಡುವುದು ಮುಖ್ಯ. ಘಟನೆ ಆದ ಮೇಲೆ ಕೆಲವರು ಪರ ವಿರೋಧ ಹೇಳಿಕೆಗಳ ಕೊಡೋದು ಆಗುತ್ತಿದೆ. ಅವರಿಗೆ ಮಾತನಾಡುವ ಹಕ್ಕು ಇದೆ ಮಾತಾಡಿದ್ದಾರೆ. ಆದರೆ ಮಾತನಾಡುವಾಗ ಬೇರೆಯವರ ಭಾವನೆಗಳಿಗೆ ಧಕ್ಕೆ ಆಗದಂತೆ ಮಾತನಾಡಬೇಕು ಎಂದರು.

ಇನ್ನೂ ಉತ್ತರ ಪ್ರದೇಶದಂತೆ ನಾವು ಬುಲ್ಡೇಜರ್ ತೆಗೆದುಕೊಂಡು ಮನೆ ಕೆಡವಿ ಹಾಕುವಷ್ಟು ಮಟ್ಟಕ್ಕೆ ನಮ್ಮ ರಾಜ್ಯದಲ್ಲಿ ಆ ಮಟ್ಟದ ಪರಿಸ್ಥಿತಿ ಇಲ್ಲ. ಉದಯಗಿರಿ ಭಾಗದಲ್ಲಿ ಹೆಚ್ಚಿನ ಜನ ಸಂಖ್ಯೆ ಇದೆ. ಸುಮಾರು ನಾಲ್ಕುವರೆ ಲಕ್ಷ ಜನ ಸಂಖ್ಯೆ ಇದೆ. ಹೀಗಾಗಿ ಮತ್ತೊಂದು ಪೊಲೀಸ್ ಠಾಣೆ ತೆರೆಯುವ ಅವಶ್ಯಕತೆ ಬಿದ್ದಲ್ಲಿ ತೆಗೆಯಲಾಗುತ್ತದೆ. ಪೊಲೀಸ್ ಘಟನೆ ನಡೆದ ದಿನ ಗಲಭೆ ನಿಯಂತ್ರಣ ಮಾಡುವಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ಇದರ ಬಗ್ಗೆ ಬೇರೆ ಬೇರೆಯವರು ರಾಜಕೀಯ ಮಾಡುವುದು ತಪ್ಪು. ಮುಂದೆ ತನಿಖೆ ಮಾಡಿ ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

ಏನಿದು ಪ್ರಕರಣ?

ಉದಯಗಿರಿ ಪೊಲೀಸ್‌ ಠಾಣೆಯ ಮೇಲೆ ಕೆಲವು ಕಿಡಿಗೇಡಿಗಳು ಕಲ್ಲು ತೂರಾಟ ಮಾಡಿದ್ದರು. ಈ ಪ್ರಕರಣದ ವಿಚಾರವಾಗಿ ಹಲವರನ್ನು ಬಂಧಿಸಲಾಗಿದೆ. ಅಲ್ಲದೇ ವಿವಾದ ಪೋಸ್ಟ್‌ ಹಾಕಿದ್ದ ವ್ಯಕ್ತಿಯನ್ನು ಸಹ ಆರೆಸ್ಟ್‌ ಮಾಡಲಾಗಿದ್ದು, ಸಾವಿರಕ್ಕೂ ಹೆಚ್ಚು ಮಂದಿಯ ಮೇಲೆ ಎಫ್‌ಐ ಆರ್ ದಾಖಲಾಗಿದೆ. ಅದರಲ್ಲಿ 50 ಕ್ಕೂ ಅಧಿಕ ಮಂದಿಯ ಗುರುತು ಪತ್ತೆಯಾಗಿದೆ.

ಇನ್ನು ಪೊಲೀಸ್‌ ಠಾಣೆಯ ಮೇಲೆ ಕಲು ತೂರಾಟ ನಡೆಸಿರುವ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ದೃಶ್ಯಾವಳಿಯನ್ನು ಆಧರಿಸಿ ಗಲಭೇಕೋರರನ್ನು ಬಂಧಿಸಲಾಗಿಸಲು ಪೊಲೀಸರು ಮುಂದಾಗಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಲೋಕಾ ಪೊಲೀಸ್‌ ಕಸ್ಟಡಿಗೆ : ಕೋರ್ಟ್‌ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್‌…

7 hours ago

ಅನಾರೋಗ್ಯ ಹಿನ್ನಲೆ ದುಬಾರೆ ಸಾಕಾನೆ ʻತಕ್ಷʼ ಸಾವು

ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…

9 hours ago

ಮೈಸೂರು | ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನಿಗೇ ಚಾಕು ಇರಿತ

ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…

10 hours ago

ಮಹಿಳಾ ಉದ್ಯೋಗಿಗೆ ಕಿರುಕುಳ : ಕಾರ್ಖಾನೆ ಮಾಲೀಕನ ವಿರುದ್ದ ದೂರು

ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…

10 hours ago

ಚಾಮುಂಡೇಶ್ವರಿ ದರ್ಶನ : ಸೇವಾ ಶುಲ್ಕ ಏರಿಕೆಗೆ ಖಂಡನೆ

ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…

11 hours ago

ಮೂರು ತಿಂಗಳಲ್ಲಿ ಪಿಎಸ್‌ಐ ಖಾಲಿ ಹುದ್ದೆ ಭರ್ತಿ : ಗೃಹ ಸಚಿವ ಪರಮೇಶ್ವರ್‌

ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…

11 hours ago