Mysore
21
broken clouds

Social Media

ಮಂಗಳವಾರ, 07 ಏಪ್ರಿಲ 2026
Light
Dark

Pahalgam Attack | ಉಗ್ರರ ದಾಳಿಗೆ ತಕ್ಕ ಉತ್ತರ ಸಿಗಲಿದೆ : ಶಾಸಕ ಜಿಟಿ ದೇವೇಗೌಡ

Lack of coordination between BJP-JDS MLA GT Deve Gowda

ಮೈಸೂರು: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನ ಪ್ರವಾಸಿಗರ ಮೇಲೆ ಉಗ್ರರು ನಡೆಸಿರುವ ಗುಂಡಿನ ದಾಳಿ ಅತ್ಯಂತ ಖಂಡನಾರ್ಹ. ಮುಂದಿನ ದಿನಗಳಲ್ಲಿ ಉಗ್ರರ ದಾಳಿಗೆ ಭಾರತ ತಕ್ಕ ಉತ್ತರ ಕೊಡುವುದು ನಿಶ್ಚಿತ ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಮ್ಮು-ಕಾಶ್ಮೀರದಲ್ಲಿ ಹಿಂದೂಗಳ ಮೇಲೆ ಉಗ್ರರು ನಡೆಸಿರುವ ದಾಳಿಯಲ್ಲಿ ಕರ್ನಾಟಕದ ಮೂವರು ಮೃತಪಟ್ಟಿದ್ದಾರೆ. ಇದೊಂದು ಹೇಯ ಮತ್ತು ಹೀನ ಕೃತ್ಯವಾಗಿದೆ. ಇದನ್ನು ಸಹಿಸಲಾಗದು ಎಂದು ಹೇಳಿದರು.

ಜಮ್ಮು-ಕಾಶ್ಮೀರದಲ್ಲಿ ಚುನಾವಣೆ ನಡೆದು ಚುನಾಯಿತ ಸರ್ಕಾರ ಅಧಿಕಾರಕ್ಕೆ ಬಂದು ಓಮರ್ ಅಬ್ದುಲ್ಲಾ ಸಿಎಂ ಆಗಿದ್ದಾರೆ. ಲಕ್ಷಾಂತರ ಜನರು ಪ್ರತಿನಿತ್ಯ ಕಾಶ್ಮೀರಕ್ಕೆ ಭೇಟಿ ನೀಡುತ್ತಿದ್ದಾರೆ. ಗುಂಡಿನ ದಾಳಿಯನ್ನು ಇಡೀ ಪ್ರಪಂಚವೇ ಖಂಡಿಸುತ್ತದೆ ಎಂದು ಹೇಳಿದರು.

ಎಲ್ಲಾ ಕನ್ನಡಿಗರು ಈ ದಾಳಿಯನ್ನು ಖಂಡಿಸುತ್ತೇವೆ. ಪತ್ನಿ, ಪುತ್ರನ ಎದುರೇ ಶಿವಮೊಗ್ಗದ ಮಂಜುನಾಥ್ ಅವರನ್ನು ಗುಂಡಿಟ್ಟು ಹತ್ಯೆ ಮಾಡಿದ್ದಾರೆ. ಹಿಂದೂಗಳನ್ನು ಟಾರ್ಗೆಟ್ ಮಾಡಿ ದಾಳಿ ನಡೆಸಿದ್ದಾರೆ. ಪ್ರಧಾನಿ ನರೇಂದ್ರಮೋದಿ, ಅಮಿತ್ ಶಾ ಈ ದಾಳಿಗೆ ತಕ್ಕ ಉತ್ತರ ಕೊಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈಗಾಗಲೇ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಭಾರತೀಯ ಸೇನೆಗೆ ತಾಯಿ ಚಾಮುಂಡೇಶ್ವರಿ ಆಶೀರ್ವಾದ ಇರುತ್ತದೆ. ಈ ಕೃತ್ಯದಲ್ಲಿ ಯಾರೇ ಭಾಗಿಯಾಗಿದ್ದರೂ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದು. ಈ ವಿಚಾರದಲ್ಲಿ ಎಲ್ಲರೂ ಒಗ್ಗಟ್ಟಾಗಿ ಹೋರಾಟ ಮಾಡಬೇಕು ಎಂದು ಹೇಳಿದದರು.

Tags:
error: Content is protected !!