Lack of coordination between BJP-JDS MLA GT Deve Gowda
ಮೈಸೂರು: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನ ಪ್ರವಾಸಿಗರ ಮೇಲೆ ಉಗ್ರರು ನಡೆಸಿರುವ ಗುಂಡಿನ ದಾಳಿ ಅತ್ಯಂತ ಖಂಡನಾರ್ಹ. ಮುಂದಿನ ದಿನಗಳಲ್ಲಿ ಉಗ್ರರ ದಾಳಿಗೆ ಭಾರತ ತಕ್ಕ ಉತ್ತರ ಕೊಡುವುದು ನಿಶ್ಚಿತ ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಮ್ಮು-ಕಾಶ್ಮೀರದಲ್ಲಿ ಹಿಂದೂಗಳ ಮೇಲೆ ಉಗ್ರರು ನಡೆಸಿರುವ ದಾಳಿಯಲ್ಲಿ ಕರ್ನಾಟಕದ ಮೂವರು ಮೃತಪಟ್ಟಿದ್ದಾರೆ. ಇದೊಂದು ಹೇಯ ಮತ್ತು ಹೀನ ಕೃತ್ಯವಾಗಿದೆ. ಇದನ್ನು ಸಹಿಸಲಾಗದು ಎಂದು ಹೇಳಿದರು.
ಜಮ್ಮು-ಕಾಶ್ಮೀರದಲ್ಲಿ ಚುನಾವಣೆ ನಡೆದು ಚುನಾಯಿತ ಸರ್ಕಾರ ಅಧಿಕಾರಕ್ಕೆ ಬಂದು ಓಮರ್ ಅಬ್ದುಲ್ಲಾ ಸಿಎಂ ಆಗಿದ್ದಾರೆ. ಲಕ್ಷಾಂತರ ಜನರು ಪ್ರತಿನಿತ್ಯ ಕಾಶ್ಮೀರಕ್ಕೆ ಭೇಟಿ ನೀಡುತ್ತಿದ್ದಾರೆ. ಗುಂಡಿನ ದಾಳಿಯನ್ನು ಇಡೀ ಪ್ರಪಂಚವೇ ಖಂಡಿಸುತ್ತದೆ ಎಂದು ಹೇಳಿದರು.
ಎಲ್ಲಾ ಕನ್ನಡಿಗರು ಈ ದಾಳಿಯನ್ನು ಖಂಡಿಸುತ್ತೇವೆ. ಪತ್ನಿ, ಪುತ್ರನ ಎದುರೇ ಶಿವಮೊಗ್ಗದ ಮಂಜುನಾಥ್ ಅವರನ್ನು ಗುಂಡಿಟ್ಟು ಹತ್ಯೆ ಮಾಡಿದ್ದಾರೆ. ಹಿಂದೂಗಳನ್ನು ಟಾರ್ಗೆಟ್ ಮಾಡಿ ದಾಳಿ ನಡೆಸಿದ್ದಾರೆ. ಪ್ರಧಾನಿ ನರೇಂದ್ರಮೋದಿ, ಅಮಿತ್ ಶಾ ಈ ದಾಳಿಗೆ ತಕ್ಕ ಉತ್ತರ ಕೊಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈಗಾಗಲೇ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಭಾರತೀಯ ಸೇನೆಗೆ ತಾಯಿ ಚಾಮುಂಡೇಶ್ವರಿ ಆಶೀರ್ವಾದ ಇರುತ್ತದೆ. ಈ ಕೃತ್ಯದಲ್ಲಿ ಯಾರೇ ಭಾಗಿಯಾಗಿದ್ದರೂ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದು. ಈ ವಿಚಾರದಲ್ಲಿ ಎಲ್ಲರೂ ಒಗ್ಗಟ್ಟಾಗಿ ಹೋರಾಟ ಮಾಡಬೇಕು ಎಂದು ಹೇಳಿದದರು.
ಮಡಿಕೇರಿ: ಮದುವೆ ಆದ ಬಳಿಕ ತವರಿಗೆ ಆಗಮಿಸಿದ ರಶ್ಮಿಕಾ ಮಂದಣ್ಣ ಕೊಡಗಿನಲ್ಲಿ ತಮ್ಮ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಂಡಿದ್ದಾರೆ. ಹುಟ್ಟುಹಬ್ಬದ ಅಂಗವಾಗಿ…
ಬೆಂಗಳೂರು: ಸಮುದಾಯವೊಂದರ ಮೀಸಲಾತಿಗಾಗಿ ರಾಜ್ಯಾದ್ಯಂತ ಹೋರಾಟ ನಡೆಸಿ ಸರ್ಕಾರಕ್ಕೆ ಸೆಡ್ಡು ಹೊಡೆದಿದ್ದ ಕೂಡಲಸಂಗಮ ಪಂಚಮಸಾಲಿ ಪೀಠದ ಶ್ರೀ ಬಸವ ಜಯಮೃತ್ಯುಂಜಯ…
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ -1 ಫಲಿತಾಂಶದ ದಿನಾಂಕ ಪ್ರಕಟಣೆ ಗೊಂದಲಕ್ಕೆ ತೆರೆ ಬಿದ್ದಿದ್ದು, ಕರ್ನಾಟಕ ಪರೀಕ್ಷಾ ಮಂಡಳಿಯು ಇದೇ…
ಮೈಸೂರು: ವರುಣ ಕ್ಷೇತ್ರದ ಕೃಷಿ ಭೂಮಿಯಲ್ಲಿ ನಿಮ್ಹಾನ್ಸ್ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ರೈತರಿಂದ ಪ್ರತಿಭಟನೆ ಜೋರಾದ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಗುಡುಮಾದನಹಳ್ಳಿಯಲ್ಲಿ…
ಬೆಂಗಳೂರು: ರಾಜ್ಯ ಸಾರಿಗೆ ನೌಕರರು ಸರ್ಕಾರದ ವಿರುದ್ಧ ಸೆಡ್ಡು ಹೊಡೆದಿದ್ದು, ಮತ್ತೆ ಪ್ರತಿಭಟನೆ, ಹೋರಾಟಕ್ಕೆ ಮುಂದಾಗಿದ್ದಾರೆ. 38 ತಿಂಗಳ ವೇತನ…
ಮೈಸೂರು: ಪಿಡಬ್ಲ್ಯೂಡಿ ಅಧಿಕಾರಿ ಜಿ.ಕೆ.ರೇವನ್ ಕುಮಾರ್ ಮನೆ ಹಾಗೂ ಕಚೇರಿಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಬಂದರು ಮತ್ತು ಒಳನಾಡಿನ…