ಮೈಸೂರು

ಸತೀಶ್‌ ಜಾರಕಿಹೊಳಿ ಸಿಎಂ ಆಗಲು ಎಚ್‌ಡಿಕೆಯನ್ನು ಭೇಟಿ ಮಾಡಿದ್ದಾರೆ: ಜಿ.ಡಿ.ದೇವೇಗೌಡ

ಮೈಸೂರು: ಸಚಿವ ಸತೀಶ್‌ ಜಾರಕಿಹೊಳಿ ಅವರು ಈ ರಾಜ್ಯದ ಸಿಎಂ ಆಗಲು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದಾರೆ ಎಂದು ಶಾಸಕ ಜಿ.ಟಿ.ದೇವೇಗೌಡ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಮೈಸೂರಿನಲ್ಲಿ ಇಂದು(ಮಾರ್ಚ್‌.27) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಸತೀಶ್ ಜಾರಕಿಹೊಳಿ ಅವರು ಮುಂದೆ ಮುಖ್ಯಮಂತ್ರಿ ಆಗುವ ಅವಕಾಶ ಸಿಕ್ಕರೆ ಜೆಡಿಎಸ್ ಬೆಂಬಲ ಕೇಳಿರಬಹುದು. ಅಥವಾ ಇರುವ 18 ಶಾಸಕರ ಬೆಂಬಲವನ್ನು ಸತೀಶ್ ಜಾರಕಿಹೊಳಿ ಕೇಳಿರಬಹುದು. ಅಲ್ಲದೇ ರಾಜಕಾರಣದಲ್ಲಿ ಏನುಬೇಕಾದರೂ ಆಗಬಹುದು. ಸದ್ಯದ ಪರಿಸ್ಥಿತಿ ನೋಡಿದರೆ ಅವರು, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹಾಗೂ ಕೇಂದ್ರ ಸಚಿವ ಎಚ್‌ಡಿಕೆಯನ್ನು ಬೇರೆ ಕಾರಣಕ್ಕೆ ಭೇಟಿ ಮಾಡಿಲ್ಲ ಎಂದು ಹೇಳಿದರು.

ನಮ್ಮ ಪಕ್ಷದಿಂದ ಒಂದು ವೇಳೆ ಜೆಡಿಎಸ್‌ ಸತೀಶ್ ಜಾರಕಿಹೊಳಿಗೆ ಬೆಂಬಲ ನೀಡಿದರೂ ನಾನು ತಟಸ್ಥನಾಗಿರುತ್ತೇನೆ. ಈ ವಿಚಾರದಲ್ಲಿ ಮಾತ್ರ ಅಲ್ಲ ನಮ್ಮ ಪಕ್ಷದ ಬೇರೆ ನಿರ್ಧಾರಗಳಿಗೂ ನಾನು ತಟಸ್ಥ ತಟಸ್ಥ ಎಂದರು.

ಅರ್ಚನ ಎಸ್‌ ಎಸ್

Recent Posts

ಬಂಡೀಪುರದಲ್ಲಿ ಏಪ್ರಿಲ್.1ರಿಂದ ಅರಣ್ಯ ಸಿಬ್ಬಂದಿ ಮುಷ್ಕರ: ಕಾರಣ ಇಷ್ಟೇ

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಏಪ್ರಿಲ್.‌1ರಿಂದ ವನ್ಯಜೀವಿ ವಿಭಾಗದ ಹಂಗಾಮಿ ನೌಕರರು ಮುಷ್ಕರಕ್ಕೆ ಮುಂದಾಗಿದ್ದಾರೆ. ಈ ಕುರಿತು ದಿನಗೂಲಿ…

23 mins ago

ಸಂಸದ ಯದುವೀರ್ ಒಡೆಯರ್ ಹುಟ್ಟುಹಬ್ಬದಂದು ‘ರಂಗೋಲಿ’ ಶುಭಾಶಯ

ಮೈಸೂರು: ಇಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರ ಹುಟ್ಟುಹಬ್ಬದ ಅಂಗವಾಗಿ ಮೈಸೂರಿನಲ್ಲಿ ಸಂಭ್ರಮ ಮನೆಮಾಡಿದೆ. ಅರಮನೆಯ…

38 mins ago

ಮಾರ್ಚ್.‌28ರಂದು ಐಪಿಎಲ್‌ ಉದ್ಘಾಟನಾ ಪಂದ್ಯ: ಆನ್‌ಲೈನ್‌ನಲ್ಲಿ ಮಾತ್ರ ಟಿಕೆಟ್‌ ಬುಕ್ಕಿಂಗ್‌

ಬೆಂಗಳೂರು: ಮಾರ್ಚ್.‌28ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್‌ ಉದ್ಘಾಟನಾ ಪಂದ್ಯ ನಡೆಯಲಿದೆ. ಈ ಬಗ್ಗೆ ಮಾತನಾಡಿದ ಕಮಿಷನರ್‌ ಸೀಮಂತ್‌ ಕುಮಾರ್‌…

44 mins ago

ಇಂದು ಐತಿಹಾಸಿಕ ಬೆಂಗಳೂರು ಕರಗ ಉತ್ಸವಕ್ಕೆ ಚಾಲನೆ

ಬೆಂಗಳೂರು: 11 ದಿನಗಳ ಕಾಲ ನಡೆಯುವ ವಿಶ್ವವಿಖ್ಯಾತ ಬೆಂಗಳೂರು ಕರಗ ಉತ್ಸವಕ್ಕೆ ಇಂದು ಚಾಲನೆ ಸಿಗಲಿದೆ. ಇಂದು ಸಂಜೆ ತಿಗಳರಪೇಟೆಯ…

2 hours ago

ವಿಧಾನಮಂಡಲ ಅಧಿವೇಶನ ಒಂದು ದಿನ ಮೊಟಕು.?

ಬೆಂಗಳೂರು: ವಿಧಾನಮಂಡಲ ಅಧಿವೇಶನವನ್ನು ಒಂದು ದಿನ ಮೊಟಕುಗೊಳಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮಾರ್ಚ್.‌27ರವರೆಗೆ ನಡೆಯಬೇಕಿದ್ದ ವಿಧಾನಮಂಡಲ ಅಧಿವೇಶನ ಮಾರ್ಚ್.‌26ರಂದು ಕೊನೆಗೊಳ್ಳಲಿದೆ.…

2 hours ago

ಕೊಲಂಬಿಯಾದಲ್ಲಿ 125 ಸೈನಿಕರಿದ್ದ ಮಿಲಿಟರಿ ವಿಮಾನ ಪತನ: 66 ಮಂದಿ ದುರ್ಮರಣ

ಬೊಗೋಟಾ: 125 ಜನರನ್ನು ಹೊತ್ತೊಯ್ಯುತ್ತಿದ್ದ ಮಿಲಿಟರಿ ವಿಮಾನವು ಟೇಕಾಫ್‌ ಕೆಲ ಸಮಯದಲ್ಲಿ ಪತನಗೊಂಡು 66 ಜನರು ಸಾವನ್ನಪ್ಪಿರುವ ಘಟನೆ ಕೊಲಂಬಿಯಾದಲ್ಲಿ…

3 hours ago