ಹುಣಸೂರು: ಶುಂಠಿ ಬೆಳೆ ಮಧ್ಯೆ ಬೆಳೆಸಿದ್ದ ಗಾಂಜಾ ಗಿಡವನ್ನು ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ ವಶಪಡಿಸಿಕೊಂಡ ಘಟನೆ ನಾಗರಹೊಳೆ ಉದ್ಯಾನದಂಚಿನ ಗ್ರಾಮದಲ್ಲಿ ನಡೆದಿದೆ.
ಹನಗೋಡು ಹೋಬಳಿಯ ಕೋಣನಹೊಸಳ್ಳಿ ಗ್ರಾಮದ ಹೊಲದಲ್ಲಿ ಕದ್ದುಮುಚ್ಚಿ ಗಾಂಜಾ ಗಿಡ ಬೆಳೆಸಲಾಗಿತ್ತು. ಇದರ ಬಗ್ಗೆ ಖಚಿತ ಮಾಹಿತಿ ಪಡೆದ ಅಬಕಾರಿ ಅಧಿಕಾರಿಗಳ ತಂಡ ದಾಳಿ ನಡೆಸಿ ಗಾಂಜಾ ಗಿಡವನ್ನು ವಶಪಡಿಸಿಕೊಂಡಿದ್ದಾರೆ.
ಅಬಕಾರಿ ಡಿವೈಎಸ್‌ಪಿ ಕೆ.ಟಿ ವಿಜಯಕುಮಾರ್ ಮಾರ್ಗದರ್ಶನದಲ್ಲಿ ಸಿಬ್ಬಂದಿ ದಾಳಿ ನಡೆಸಿದ್ದು, ಈವೇಳೆ 5 ಅಡಿ ಎತ್ತರದ ಸುಮಾರು 2.190 ಗ್ರಾಂ.ನ ಹಸಿ ಗಾಂಜಾ ಗಿಡವನ್ನು ವಶಕ್ಕೆ ಪಡೆಯಲಾಗಿದೆ.
ಜಮೀನಿನ ಮಾಲೀಕ ನಾಪತ್ತೆಯಾಗಿದ್ದು, ಬಂಧನಕ್ಕೆ ಕ್ರಮ ವಹಿಸಲಾಗಿದೆ ಎಂದು ಅಬಕಾರಿ ಅಧಿಕಾರಿ ನಾಗಲಿಂಗಸ್ವಾಮಿ ತಿಳಿಸಿದ್ದಾರೆ.
ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…
ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…
ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್‌ಮಸ್ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…
ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…
ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…
ಬೆಂಗಳೂರು : ರಾಜ್ಯದಲ್ಲಿ ತೀವ್ರ ಚಳಿ, ಶೀತಗಾಳಿಯ ಜೊತೆಗೆ ಬೆಳಗಿನ ವೇಳೆ ಕೆಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಬೆಳಗಿನ ವೇಳೆಯಲ್ಲಿ…