ಮೈಸೂರು: ಕೆಆರ್‌ಎಸ್ (ಕೃಷ್ಣರಾಜ ಸಾಗರ) ಮಾದರಿಯಲ್ಲಿ ಕಬಿನಿ ಜಲಾಶಯದ ಬಳಿಯೂ ಸಹಾ ಉದ್ಯಾನವನ ನಿರ್ಮಿಸಲಾಗುವುದು ಎಂದು ಎಚ್‌ಡಿ ಕೋಟೆ ಶಾಸಕ ಅನಿಲ್ ಚಿಕ್ಕಮಾದು ಹೇಳಿದರು.
ಈ ವಿಚಾರವಾಗಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಬಿನಿಯಲ್ಲಿ ಉದ್ಯಾನವನ ನಿರ್ಮಾಣ ಸಂಬಂಧ 30 ಕೋಟಿ ರೂ. ಅಂದಾಜುಪಟ್ಟಿ ಸಿದ್ದಪಡಿಸಲಾಗಿದೆ. ಶೀಘ್ರದಲ್ಲೇ ಕಾರ್ಯಾರಂಭ ಮಾಡಲಾಗುವುದು ಎಂದು ತಿಳಿಸಿದರು.
ಮೂರು ಜಲಾಶಯಗಳು, ಅಭಯಾರಣ್ಯ ಮತ್ತು ಪ್ರಾಕೃತಿಕ ಸಂಪತ್ತು ಹೇರಳವಾಗಿ ಸಿಗುವ ಎಚ್‌ಡಿ ಕೋಟೆ ಪ್ರವಾಸೋದ್ಯಮಕ್ಕೆ ಪೂರಕವಾಗಿದೆ. ಹಾಗಾಗಿ ತಾಲೂಕಿನಲ್ಲಿ ಪ್ರವಾಸೋದ್ಯಮ ಬೆಳವಣಿಗೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ವಿವರಿಸಿದರು.
ಇನ್ನು ಕಬಿನಿ ಜಲಾಶಯದಲ್ಲಿ ಬಿರುಕು ಕಂಡಿರುವ ಬಗ್ಗೆ ಮಾತನಾಡಿ, ಈ ದುರಸ್ತಿ ಕಾರ್ಯಕ್ಕೆ ಜಲಸಂಪನ್ಮೂಲ ಸಚಿವರಾದ ಡಿಕೆ ಶಿವಕುಮಾರ್ ಅವರು 6 ಕೋಟಿ ರೂ ದುರಸ್ತಿ ವೆಚ್ಚ ಬಿಡುಗಡೆ ಮಾಡುವುದಾಗಿ ಭರವಸೆ ಕೊಟ್ಟಿದ್ದಾರೆ. ಶ್ರೀಘ್ರದಲ್ಲೇ ಎಲ್ಲಾ ಕಾರ್ಯಾರಂಭ ಮಾಡಲಾಗುದು ಎಂದರು.
ಮಂಡ್ಯ: ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ. ಈ ನಿಟ್ಟಿನಲ್ಲಿ 10ನೇ ತರಗತಿವರೆಗೆ ಕನ್ನಡ ಮಾಧ್ಯಮ ಕಡ್ಡಾಯವಾಗಬೇಕು. ಇಂಗ್ಲೀಷ್ ಮಾಧ್ಯಮದ ಶಾಲೆ ತೆರೆಯುವುದನ್ನು…
ಹನೂರು: ತಾಲ್ಲೂಕಿನ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಪಲ್ಟಿಯಾಗಿ ಇಬ್ಬರು ಗಾಯಗೊಂಡಿರುವ ಘಟನೆ ಜರುಗಿದೆ.…
ಕಲಬುರ್ಗಿ: ಸಂವಿಧಾನದ ವಿಧಿ 371 ( ಜೆ ) ಜಾರಿಗೆ ಬಂದ ನಂತರ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ ಹಾಗೂ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಕೆ ಪ್ರಕರಣ ವಿಚಾರವಾಗಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು…
ಬೆಂಗಳೂರು: ಬಿಜೆಪಿ ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಬಂಧನಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ ಎನ್ನುವುದು ನನ್ನ ಅನುಮಾನ ಎಂದು…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ…