Mysore
28
haze

Social Media

ಭಾನುವಾರ, 21 ಡಿಸೆಂಬರ್ 2025
Light
Dark

ಲಿಂಗತ್ವ ಅಲ್ಪಸಂಖ್ಯಾತರಿಗೂ ಗೃಹಲಕ್ಷ್ಮೀ ಯೋಜನೆಯಲ್ಲಿ ಅವಕಾಶ

ಮೈಸೂರು: ಲಿಂಗತ್ವ ಅಲ್ಪಸಂಖ್ಯಾತ (ಟ್ರಾನ್ಸ್-ಜೆಂಡರ್ಸ್) ಸಮುದಾಯದವರು ಅಥವಾ ಲಿಂಗತ್ವ ಅಲ್ಪಸಂಖ್ಯಾತ ವ್ಯಕ್ತಿಗಳು “ಗೃಹಲಕ್ಷ್ಮೀ” ಯೋಜನೆಯಡಿ ಪ್ರಯೋಜನ ಪಡೆಯಲು ಅನುವಾಗುವಂತೆ ಗೃಹಲಕ್ಷ್ಮಿ ಯೋಜನೆಯ ತಂತ್ರಾoಶದಲ್ಲಿ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ನ್ಯಾಷನಲ್‌ ಪೊರ್ಟಲ್‌ ಫಾರ್‌ ಟ್ರಾನ್ಸ್‌ಜೆಂಡರ್‌ ಪರ್ಸನ್ಸ್ ವತಿಯಿಂದ ಪಡೆದಿರುವ ಲಿಂಗತ್ವ ಅಲ್ಪಸಂಖ್ಯಾತರ ಗುರುತಿನ ಚೀಟಿಯನ್ನು ಪರಿಗಣಿಸಲು ಸರ್ಕಾರವು ಅನುಮೋದನೆ ನೀಡಿ ತಂತ್ರಾoಶದಲ್ಲಿ ಮಾರ್ಪಾಡು ಮಾಡಲಾಗಿದೆ.

ಆದ್ದರಿಂದ, ಜುಲೈ 8 ರಿಂದ ಲಿಂಗತ್ವ ಅಲ್ಪಸಂಖ್ಯಾತರು ಪ್ರಸ್ತುತ ವಾಸವಾಗಿರುವ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರ ಕಚೇರಿಗೆ ತೆರಳಿ ಗೃಹಲಕ್ಷ್ಮಿ ಯೋಜನೆಯ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಟ್ರಾನ್ಸ್-ಜೆಂಡರ್ಸ್ ಗುರುತಿನ ಚೀಟಿ, ಪಾಸ್ಪೋರ್ಟ್ ಸೈಜ್ ಫೋಟೋ ಮತ್ತು ಆಧಾರ್ ಕಾರ್ಡನ್ನು ಕಡ್ಡಾಯವಾಗಿ ನೀಡಬೇಕಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ದೂ.ಸಂ: 0821-2495432/2498031 ನ್ನು ಸಂಪರ್ಕಿಸಬಹುದೆoದು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:
error: Content is protected !!