ಮೈಸೂರು

ಪಂಚಾಯಿತಿ ಚುನಾವಣೆಗೆ ಸಿದ್ಧರಾಗಿ : ಮಾಜಿ ಶಾಸಕ ಹರ್ಷವರ್ಧನ್ ಕರೆ

ನಂಜನಗೂಡು : ಶೀಘ್ರದಲ್ಲೇ ಜಿಪಂ, ತಾಪಂ ಚುನಾವಣೆಗಳು ಬರಲಿದ್ದು, ಬಿಜೆಪಿ ಕಾರ್ಯಕರ್ತರು ಅದಕ್ಕೆ ಸಿದ್ಧರಾಗಬೇಕು ಎಂದು ಮಾಜಿ ಶಾಸಕ ಬಿ.ಹಷವರ್ಧನ್ ಕರೆ ನೀಡಿದರು.

ಬುಧವಾರ ತಮ್ಮ ಅವಧಿಯಲ್ಲಿ ಭೂಮಿ ಪೂಜೆ ನೆರವೇರಿಸಿದ್ದ ಮುಳ್ಳೂರು ಏತ ನೀರಾವರಿ ಪ್ರದೇಶಕ್ಕೆ ಭೇಟಿ ನೀಡಿದ್ದ ಅವರು ಸದ್ಯದಲ್ಲೇ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಬರಲಿದ್ದು, ಕಾರ್ಯಕರ್ತರು ಸಜ್ಜಾಗಬೇಕು ಎಂದರು.

ಸ್ಥಳೀಯ ಸಂಸ್ಥೆ ಚುನಾವಣೆ ನಡೆಸದ ಕುರಿತು ನ್ಯಾಯಾಲಯ ಈಗಾಗಲೇ ಸರ್ಕಾರಕ್ಕೆ ಛೀಮಾರಿ ಹಾಕಿದ್ದು ಶೀಘ್ರದಲ್ಲಿ ಚುನಾವಣೆ ನಡೆಸುವಂತೆ ಸೂಚನೆ ನೀಡಬಹುದಾಗಿದೆ. ಹಾಗಾದರೆ ಡಿಸೆಂಬರ್‌ನಲ್ಲಿ ಚುನಾವಣೆ ನಡೆಯಲಿದ್ದು, ಕಾರ್ಯಕರ್ತರು ಅದಕ್ಕೆ ಈಗಿನಿಂದಲೇ ಸಿದ್ಧರಾಗಬೇಕು ಎಂದರು.

ಈ ಭಾಗದ ಜನತೆಯ ಕನಸಾದ ಮುಳ್ಳೂರು ಏತ ನೀರಾವರಿ ಯೋಜನೆಯನ್ನು ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರ ಕಾಲದಲ್ಲಿ ಮಂಜೂರು ಮಾಡಿಸಲಾಗಿತ್ತು. ನನ್ನ ಶಾಸಕತ್ವದ ಅವಧಿಯಲ್ಲಿ ಆರಂಭವಾದ ಈ ನೀರಾವರಿ ಯೋಜನೆ ೨ ವರ್ಷಗಳಿಂದ ಸ್ಥಗಿತವಾಗಿದೆ. ಹಾಲಿ ಶಾಸಕರು ಜನತೆಗೆ ಉಪಯೋಗವಾಗುವ ಈ ಯೋಜನೆಯನ್ನು ಪುನಾರಂಭಿಸಿ ಪೂರ್ಣಗೊಳಿಸಬೇಕು ಎಂದು ಆಗ್ರಹಿಸಿದರು.

ತಾಲ್ಲೂಕು ಬಿಜೆಪಿ ಅಧ್ಯಕ್ಷ ಕೆಂಡಗಣ್ಣಪ್ಪ, ಹುರ ಚಂದ್ರು, ಕಣೇನೂರು ಪರಶಿವಮೂರ್ತಿ, ಬಸವಣ್ಣ, ಮಲ್ಲೇಶ, ಬಸವರಾಜು ಮತ್ತಿತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ದಿಲ್ಲಿ ಗಣರಾಜ್ಯೋತ್ಸವಕ್ಕೆ ಬೆದರಿಕೆ : ಗುರುಪತ್ವಂತ್‌ ಸಿಂಗ್‌ ವಿರುದ್ಧ ಎಫ್‌ಐಆರ್‌

ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…

21 mins ago

ಕಾಡಾನೆಗಳ ಲಗ್ಗೆ : ಕಬ್ಬಿನ ಫಸಲು ನಾಶ, ಪರಿಹಾರಕ್ಕಾಗಿ ಒತ್ತಾಯ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…

1 hour ago

ಕೊಡಗಿನ ತಿತಿಮತಿಯಲ್ಲಿ ಹುಲಿ ಪ್ರತ್ಯಕ್ಷ ; ಸ್ಥಳೀಯರಲ್ಲಿ ಆತಂಕ

ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…

2 hours ago

ಖಾಸಗಿ ಶಾಲೆಗಳನ್ನು ನಾಚಿಸುವ ಹೈಟೆಕ್ ಸರ್ಕಾರಿ ಶಾಲೆ : ಆದರೆ ಮಕ್ಕಳ ದಾಖಲಾತಿ ಕೇವಲ 40!

ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…

2 hours ago

ಮಂಡ್ಯದಲ್ಲಿ ಕೈಗಾರಿಕೆ ಸ್ಥಾಪನೆಗೆ ಜಾಗ ನೀಡುವಂತೆ ಸಿಎಂಗೆ ಪತ್ರ ಬರೆದಿದ್ದೇನೆ : ಎಚ್‌ಡಿಕೆ

ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್‌ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…

2 hours ago

ರಾಜ್ಯವೇ ನನ್ನ ಪರಿಮಿತಿ, ಜನ ಬಯಸಿದ ಕಡೆ ಸ್ಪರ್ಧೆ : ಎಚ್‌.ಡಿ.ಕುಮಾರಸ್ವಾಮಿ

ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…

3 hours ago