ಮೈಸೂರು

ಬಹುತ್ವ ಭಾರತ ಉಳಿಸಿಕೊಳ್ಳಲು ಬಿಜೆಪಿ ಕಿತ್ತೊಗೆಯಿರಿ : ಮುಖ್ಯಮಂತ್ರಿ ಚಂದ್ರು

ಮೈಸೂರು : ಕಳೆದ ಹತ್ತು ವರ್ಷಗಳಿಂದ ದೇಶದಲ್ಲಿ ಭ್ರಷ್ಟಾಚಾರ, ನಿರುದ್ಯೋಗ, ಬೆಲೆ ಏರಿಕೆ ತಾಂಡವವಾಡುತ್ತಿದ್ದು, ಬಹುತ್ವ ಭಾರತ ಉಳಿಸಿಕೊಳ್ಳಲು ಕೇಂದ್ರದಲ್ಲಿ ಬಿಜೆಪಿ ಪಕ್ಷವನ್ನು ಕಿತ್ತೊಗೆದು ಕಾಂಗ್ರೆಸ್‌ ಬರುವಂತೆ ಮಾಡಿ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಮನವಿ ಮಾಡಿದರು.

ಜಿಲ್ಲಾ ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವಂತೆ ಮಾಡಲು ಜನರು ಮತದಾನದ ಮೂಲಕ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸಬೇಕು.

ರಾಜ್ಯದಲ್ಲಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳನ್ನು ಚುನಾವಣಾ ಕಣಕ್ಕೆ ಇಳಿಸದಿರಲು ನಿರ್ಧರಿಸಿದ್ದರಿಂದ ನಮ್ಮ ಪಕ್ಷದ ವತಿಯಿಂದ ಈ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನೇರ ಬೆಂಬಲ ನೀಡುತ್ತಿದ್ದೇವೆ ಎಂದು ತಿಳಿಸಿದರು.

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಬಂಧಿಸಿ, ಅವರಿಗೆ ಮಧುಮೇಹ ಕಾಯಿಲೆ ಇರುವುದು ಗೊತ್ತಿದ್ದರೂ ಜೈಲಿನಲ್ಲಿ ಇನ್ಸುಲಿನ್ ನೀಡದೆ ಶೋಷಣೆ ಮಾಡಿ ಈ ವಿಚಾರವನ್ನು ದೇಶಾದ್ಯಂತ ಚರ್ಚೆಯಲ್ಲಿರುವಂತೆ ಮಾಡಿದರು. ಇಂಥ ರಾಕ್ಷಸ ಪ್ರವೃತ್ತಿಯ ಪ್ರಧಾನಮಂತ್ರಿ ಮತ್ತು ಗೃಹಮಂತ್ರಿ ಇರಬೇಕಾ, ಬೇಡ್ವಾ ಎಂದು ತೀರ್ವಾನಿಸುವ ಅಗತ್ಯವಿದೆ ಎಂದರು.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಒಡೆಯರ್ ಅವರ ಮಾವನಿಗೆ ರಾಜಸ್ಥಾನದಲ್ಲಿ ಸಮಸ್ಯೆಯಾಗಿರಬಹುದು. ಇಲ್ಲೂ ಇವರ ಆಸ್ತಿ ವ್ಯಾಜ್ಯದ ಒತ್ತಡಲ್ಲಿರಬಹುದು.

ಹಾಗಾಗಿ ಬಿಜೆಪಿ ಪಕ್ಷದಿಂದ ಅಭ್ಯರ್ಥಿಯಾಗಿ ಇಳಿದಿದ್ದಾರೆ ಎನ್ನಿಸುತ್ತದೆ. ಜಿಲ್ಲೆಯ ಜನ ಇವರಿಂದ ಹೆಚ್ಚು ನಿರೀಕ್ಷೆ ಮಾಡಲು ಸಾಧ್ಯವಿಲ್ಲ. ಜನ ಸಾಮಾನ್ಯರ ಅಭ್ಯರ್ಥಿಯಾಗಿರುವ ಕಾಂಗ್ರೆಸ್ ಪಕ್ಷದ ಎಂ.ಲಕ್ಷ್ಮಣ್ ಅವರು ಜನರ ಕಷ್ಟಕ್ಕೆ ಸ್ಪಂದಿಸುತ್ತಾರೆ. ಅವರನ್ನು ಗೆಲ್ಲಿಸಿ ಇಂಡಿಯಾ ಮೈತ್ರಿಕೂಟಕ್ಕೆ ಬಲ ನೀಡಿ ಕಾಂಗ್ರೆಸ್ ಪಕ್ಷಕ್ಕೆ ಮತದಾನ ಮಾಡಿ ಎಂದು ಹೇಳಿದರು.

ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಆರ್.ಮೂರ್ತಿ, ಆಮ್ ಅದ್ಮಿ ಪಕ್ಷದ ರಾಜ್ಯ ಕಾರ್ಯದರ್ಶಿಗಳಾದ ಮಾಳವಿಕಾ ಗುಬ್ಬಿವಾಣಿ, ಸೋಸಲೆ ಸಿದ್ಧರಾಜು, ಜಿಲ್ಲಾ ಘಟಕದ ಅಧ್ಯಕ್ಷ ಎಲ್.ರಂಗಯ್ಯ, ಹಾಗೂ ಕೆ.ಆರ್.ನಗರ ತಾಲ್ಲೂಕು ಕ್ಷೇತ್ರದ ಅಧ್ಯಕ್ಷ ಮುರುಗೇಶ್ ಮತ್ತಿತರರು ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

 

 

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಮಹಾಪಂಚ್ ಕಾರ್ಟೂನ್

ಮಹಾಪಂಚ್ ಕಾರ್ಟೂನ್ | ಡಿಸೆಂಬರ್ 13 ಶನಿವಾರ  

11 mins ago

ಕಳಪೆ ಪ್ರಗತಿ ಸಾಧಿಸಿದ 5 ಪಿಡಿಒಗಳಿಗೆ ಕಾರಣ ಕೇಳಿ ನೋಟಿಸ್ ನೀಡಿದ ಸಿಇಒ ನಂದಿನಿ

ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…

13 hours ago

ಅಕ್ರಮ ನಾಟ ಸಾಗಾಟ : ಲಾರಿ ಸಮೇತ ಮೂವರ ಬಂಧನ

ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…

13 hours ago

ಡೆವಿಲ್‌ ಅಬ್ಬರ | ಮೊದಲ ದಿನದ ಗಳಿಗೆ ಎಷ್ಟು?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…

14 hours ago

ಮಳವಳ್ಳಿ | ವಿದ್ಯುತ್‌ ಸ್ಪರ್ಶ ; ಕಾರ್ಮಿಕ ಸಾವು

ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…

14 hours ago

2027ರ ಜನಗಣತಿ | 11,718 ಕೋಟಿ ನೀಡಲು ಕೇಂದ್ರ ಸಂಪುಟ ಅನುಮೋದನೆ

ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…

14 hours ago