ಮೈಸೂರು: ಮೈಸೂರಿನಲ್ಲಿ ಶುಂಠಿ ಬೆಳೆಗಾರರಿಗೆ ಹೊಸ ಸಮಸ್ಯೆಯೊಂದು ಎದುರಾಗಿದೆ.
ಮೈಸೂರು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಅನ್ನದಾತರು ಶುಂಠಿ ಬೆಳೆ ಬೆಳೆದಿದ್ದು, ಕಳೆದ ಕೆಲ ದಿನಗಳಿಂದ ಸುರಿದ ಧಾರಾಕಾರ ಮಳೆಯಿಂದ ಶುಂಠಿಗೆ ಕೊಳೆರೋಗ ಕಾಣಿಸಿಕೊಂಡಿದೆ.
ಇದರ ಜೊತೆಗೆ ಈ ಬಾರಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಯತೇಚ್ಛವಾಗಿ ಶುಂಠಿ ಬೆಳೆಯಲಾಗಿದ್ದು, ಇಳುವರಿ ಕೂಡ ತೀವ್ರ ಕಡಿಮೆಯಾಗಿದೆ. ಈ ಬೆನ್ನಲ್ಲೇ ಶುಂಠಿ ಬೆಳೆಗೂ ಬೆಲೆಯೂ ಕೂಡ ಇಳಿಕೆಯಾಗಿದೆ.
ಬೇರೆ ಬೆಳೆಗಳಿಗೆ ಹೋಲಿಸಿದರೆ ಶುಂಠಿ ಬೆಳೆ ಬೆಳೆಯಲು ಕೀಟನಾಶಕ ಹಾಗೂ ಗೊಬ್ಬರಕ್ಕೆಂದೇ ಲಕ್ಷಾಂತರ ರೂಪಾಯಿ ಖರ್ಚಾಗುತ್ತಿದೆ. ಹೀಗಾಗಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿದ್ರೂ, ಶುಂಠಿಯಿಂದ ಅಧಿಕ ಲಾಭವಿದೆ ಎಂದು ರೈತರೆಲ್ಲಾ ಶುಂಠಿ ಬೆಳೆ ಬೆಳೆದಿದ್ದಾರೆ.
ಆದರೆ ವರುಣ ಈ ಬಾರಿ ಶುಂಠಿ ಬೆಳೆಗಾರರಿಗೆ ಸಂಕಷ್ಟ ತಂದೊಡ್ಡಿದ್ದಾನೆ. ಇದರ ಜೊತೆಗೆ ಕೆಲ ಭಾಗದಲ್ಲಿ ಶುಂಠಿ ಬೆಳೆ ಇಳುವರಿ ಜಾಸ್ತಿ ಕೊಟ್ಟಿದ್ದು, ರೈತರು ಕೂಡ ತುಂಬಾ ಖುಷಿಯಲ್ಲಿದ್ದರು.
ಈಗ ಶುಂಠಿ ಬೆಲೆ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳೆಗಾರರು ತೀವ್ರ ಕಂಗಾಲಾಗಿದ್ದು, ಮುಂದಿನ ದಿನಗಳಲ್ಲಾದರೂ ಬೆಳೆಗೆ ಸೂಕ್ತ ಬೆಲೆ ಸಿಗುತ್ತದೆ ಎಂದು ಎದುರು ನೋಡುತ್ತಿದ್ದಾರೆ.
ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…
ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…
ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…
ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…
ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…
ಹೈದರಾಬಾದ್ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…