ಮೈಸೂರು

ದೇಶದ ಅಭಿವೃದ್ಧಿ ಗ್ಯಾರಂಟಿಗೆ ಮತ ನೀಡಿ: ಎಂ ಲಕ್ಷ್ಮಣ್‌

ಮೈಸೂರು: ರಾಜ್ಯ ಕಾಂಗ್ರೆಸ್‌ನ ಗ್ಯಾರಂಟಿಯಷ್ಟೆ ನಿಮ್ಮ ಸೇವಕನಾಗಿ ಕೆಲಸ ಮಾಡಿಕೊಡುತ್ತೇನೆ, ನನಗೊಂದು ಅವಕಾಶ ಕೊಡಿ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಎಂ. ಲಕ್ಷ್ಮಣ್‌ ಮನವಿ ಮಾಡಿದರು.

ಚಾಮುಂಡೇಶ್ವರಿ ಕ್ಷೇತ್ರದ ನಾಗನಹಳ್ಳಿ, ಸಿದ್ದಲಿಂಗಪುರ, ಕೆ.ಆರ್.ಮಿಲ್ ಕಾಲೋನಿ, ರಮ್ಮನಹಳ್ಳಿ, ಕಾಳಿಸಿದ್ದನಹುಂಡಿ, ಹಂಚ್ಯಾ, ಆಲನಹಳ್ಳಿ ಹಾಗೂ ಹೊಸುಂಡಿ ಗ್ರಾಮಗಳಲ್ಲಿ ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಜತೆಗೂಡಿ ಮತಯಾಚನೆ ಮಾಡಿದರು.

ಬಳಿಕ ಮಾತನಾಡಿ, ಜನಪರ ಯೋಜನೆಗಳನ್ನು ನೀಡುವ ವ್ಯವಸ್ಥೆ ಇರುವುದು ಕಾಂಗ್ರೆಸ್ ಪಕ್ಷದಲ್ಲಿ ಮಾತ್ರ. ರಾಜ್ಯದಲ್ಲಿ ಬರಗಾಲ ಇದ್ದರೂ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಯಾಪೈಸೆ ಕೊಡಲಿಲ್ಲ. ಸೆಪ್ಟಂಬರ್‌ನಲ್ಲೇ ವರದಿ ಕೊಟ್ಟು ಮನವಿ ಮಾಡಿದರೂ ಸ್ಪಂದನೆ ಮಾಡಲಿಲ್ಲ. ಅವರು ಪುಕ್ಕಟ್ಟೆ ಕೊಡದಿದ್ದರೂ ನಮ್ಮ ರಾಜ್ಯದ ತೆರಿಗೆ ಹಣದಲ್ಲಿ ನ್ಯಾಯಯುತವಾಗಿ ನೀಡಬೇಕಾದ ಅನುದಾನ ನೀಡಲಿಲ್ಲ. ಬರೀ ಸುಳ್ಳು ಹೇಳಿಕೊಂಡೆ ತಿರುಗಾಡುವ ಕೆಲಸ ಮಾಡುತ್ತಾರೆ. ಆದುದರಿಂದ ಜನತೆ ಅರ್ಥ ಮಾಡಿಕೊಳ್ಳಬೇಕಿದೆ, ನಿಮ್ಮ ಮತ ಸುಳ್ಳು ಹೇಳುವವರ ವಿರುದ್ಧವಿರಬೇಕು. ಸದಾ ಜನಸೇವೆಯನ್ನೇ ಮಾಡುತ್ತಾ ಬಂದಿರುವ ಕಾಂಗ್ರೆಸ್‌ಗೆ ಮತ ನೀಡಿ ಎಂದು ಮನವಿ ಮಾಡಿದರು.

ಪ್ರತಾಪ್ ಸಿಂಹ ಮಾಧ್ಯಮಗಳ ಮುಂದೆ ಬಂದೂ ಕೋಮುವಾದದ ಮಾತುಗಳನಷ್ಟೇ ಆಡಿದ್ದು ಬಿಟ್ಟರೆ ಬೇರೆ ಎನೂ ಮಾಡಿಲ್ಲ. ಆದರೆ, ನಾನು ನಿಮಗೆ ಭರವಸೆ ನೀಡುತ್ತೇನೆ. ನನಗೆ ನೀವು ಹಾಕುವ ಮತಕ್ಕೆ ಐದು ವರ್ಷವೂ ನಿಮ್ಮ ಸೇವಕನಾಗಿ ನಿಮ್ಮ ಕೆಲಸ ಮಾಡುತ್ತೇನೆ. ದಯಾಮಾಡಿ ಒಂದು ಅವಕಾಶ ಕೊಡಿ ಎಂದು ಕೇಳಿಕೊಳ್ಳುತ್ತೇನೆ ಎಂದು ಹೇಳಿದರು.

22 ಸಾವಿರ ಕೋಟಿ ರೂ.ಗಳನ್ನು ಸಿದ್ದರಾಮಯ್ಯ ಅವರ ಮೊದಲ ಅವಧಿಯಲ್ಲಿ ಮೈಸೂರು ಜಿಲ್ಲೆಗೆ ನೀಡಿದ್ದಾರೆ. ಜಿಲ್ಲೆಯ ಉತ್ತಮ ರಸ್ತೆಗಳಿಗೆ ಎಚ್.ಸಿ.ಮಹದೇವಪ್ಪ ಹಾಗೂ ಸಿಎಂ ಸಿದ್ದರಾಮಯ್ಯ ಅವರ ಕೊಡುಗೆಯೇ ಕಾರಣವಾಗಿದೆ ಎಂದರು.

 

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಪೊಲೀಸರ ಮೇಲೆ ಹಲ್ಲೆ: 20 ಜನರ ವಿರುದ್ಧ ಕೇಸ್‌ ದಾಖಲು

ನವದೆಹಲಿ: ಮುಖ್ಯ ಚುನಾವಾಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ನಿನ್ನೆ ಬೃಹತ್‌ ಪ್ರತಿಭಟನೆಗೆ ಕರೆ ನೀಡಿತ್ತು. ಈ…

18 hours ago

ದೇವಿ ಕೃಪೆ ಜನರ ಮೇಲಿರಲಿ, ಜನರ ಕೃಪೆ ನಮ್ಮ ಸರ್ಕಾರದ ಮೇಲಿರಲಿ: ಸಿಎಂ ಡಿಕೆಶಿ

ಮೈಸೂರು:  ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಮಾತನಾಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ದೇವಿಯ ಕೃಪೆ…

19 hours ago

ದಸರಾ ಉದ್ಘಾಟಿಸುವಷ್ಟು ದೊಡ್ಡವನು ನಾನಲ್ಲ: ಗವಿಸಿದ್ದೇಶ್ವರ ಶ್ರೀ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೊಪ್ಪಳದ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ವಿನಮ್ರ ಮಾತುಗಳನ್ನಾಡಿದ್ದಾರೆ. “ದಸರಾ…

19 hours ago

ಮನಸೆಳೆವ ಫಲ ಪುಷ್ಪ ಪ್ರದರ್ಶನ

ಪ್ರಕೃತಿಯೊಂದಿಗೆ ನಂಟನ್ನು ನೆನಪಿಸುವ ಒಂದು ಸುಂದರ ಪಯಣ. 15 ಎಕರೆ ವಿಸ್ತೀರ್ಣ, 70 ಸಸ್ಯಶಾಸ್ತ್ರೀಯ ಜಾತಿಯ 327ಕ್ಕೂ ಹೆಚ್ಚಿನ ವೈವಿಧ್ಯಮಯ…

20 hours ago

ಮೈಸೂರು ದಸರಾ ಮಹೋತ್ಸವಕ್ಕೆ ಅಧಿಕೃತ ಚಾಲನೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ 416ನೇ ನಾಡಹಬ್ಬ ದಸರಾ…

22 hours ago