ಮೈಸೂರು: ಎಂಎಲ್‌ಸಿ ಸ್ಥಾನಕ್ಕಾಗಿ ರಕ್ತದಲ್ಲಿ ಸಹಿ ಮಾಡಿ ಮನವಿ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಕಾಂಗ್ರೆಸ್ ಪಕ್ಷದ ಕಾರ್ಯಕರ್ತನೊಬ್ಬರು ತಮ್ಮ ರಕ್ತದಲ್ಲಿ ಸಹಿ ಹಾಕಿ ಪಕ್ಷದ ವರಿಷ್ಠರಿಗೆ ಪತ್ರ ಬರೆದಿದ್ದಾರೆ.
ಮೈಸೂರಿನ ಬಸವಣ್ಣ ಎಂಬ ಕಾಂಗ್ರೆಸ್ ಕಾರ್ಯಕರ್ತನು, ಎಂಎಲ್‌ಸಿ ಸ್ಥಾನ ನೀಡುವಂತೆ ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದಿದ್ದಾರೆ. ಮೈಸೂರು ರಾಮಸ್ವಾಮಿ ವೃತ್ತದಲ್ಲಿ ನಿಂತು, ರಕ್ತದ ಮೂಲಕ ಸಹಿ ಹಾಕಿದ ಅರ್ಜಿಯನ್ನು ಸಾರ್ವಜನಿಕವಾಗಿ ಪೋಸ್ಟ್ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.
ಇದನ್ನು ಓದಿ: ಓದುಗರ ಪತ್ರ: ದೇವಾಲಯಗಳ ಬಳಿ ಪೊಲೀಸ್ ಗಸ್ತು ಹೆಚ್ಚಿಸಿ
ಈ ಹಿಂದೆ ಎರಡು ಬಾರಿ ಎಂಎಲ್‌ಸಿ ಸ್ಥಾನಕ್ಕಾಗಿ ಅರ್ಜಿ ಸಲ್ಲಿಸಿದ್ದೇನೆ. ಇದು ಮೂರನೇ ಬಾರಿ ಅರ್ಜಿ ಹಾಕುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಹೊಸ ವರ್ಷದಲ್ಲಿ ಎಂಎಲ್‌ಸಿ ಸ್ಥಾನ ಖಾಲಿಯಾಗಲಿದ್ದು, ಈ ಬಾರಿ ನನಗೆ ಅವಕಾಶ ಸಿಗಲಿದೆ ಎಂಬ ನಂಬಿಕೆ ಇದೆ ಎಂದು ಬಸವಣ್ಣ ಹೇಳಿದ್ದಾರೆ.
ರಕ್ತದ ಮೂಲಕ ಸಹಿ ಹಾಕಿ ಬರೆದ ಅರ್ಜಿಯನ್ನು ರಾಹುಲ್ ಗಾಂಧಿ ಅವರೊಂದಿಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಳುಹಿಸಿದ್ದೇನೆ ಎಂದು ತಿಳಿಸಿದ್ದಾರೆ.
ಪಕ್ಷಕ್ಕಾಗಿ ವರ್ಷಗಳಿಂದ ನಿಷ್ಠೆಯಿಂದ ದುಡಿಯುತ್ತಿದ್ದೇನೆ. ನೂರಕ್ಕೆ ನೂರು ಶೇಕಡಾ ಈ ಬಾರಿ ಎಂಎಲ್‌ಸಿ ಸ್ಥಾನ ಸಿಗುತ್ತದೆ





