ಮೈಸೂರು

ಮೈಸೂರು ದಸರಾ ವಸ್ತುಪ್ರದರ್ಶನಕ್ಕೆ ಜಾಗತಿಕ ಸ್ಪರ್ಶ : ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು ವರ್ಷಪೂರ್ತಿ ಕಾರ್ಯನಿರ್ವಹಿಸುವ ಅಮ್ಯೂಸ್ಮೆಂಟ್ ಪಾರ್ಕ್ ಮಾದರಿಯಲ್ಲಿ ಅಭಿವೃದ್ಧಿಪಡಿಸುವ ಯೋಜನೆ ಪ್ರಾಧಿಕಾರದ ಮುಂದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ನಗರಾಭಿವೃದ್ಧಿ ಸಚಿವರಾದ ಡಾ ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ಇಂದು ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರಕ್ಕೆ ಭೇಟಿ ನೀಡಿ, ಪರಿವೀಕ್ಷಣೆ ನಡೆಸಿ ನಂತರ ಸಭಾಂಗಣದಲ್ಲಿ 2026ರ ದಸರಾ ವಸ್ತು ಪ್ರದರ್ಶನ ಆಯೋಜನೆಯ ಕುರಿತು ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಈ ಬಾರಿಯ ವಸ್ತು ಪ್ರದರ್ಶನವು ದಸರಾ ಹಬ್ಬದಿಂದ ಆರಂಭವಾಗಿ ಒಟ್ಟು 90 ದಿನಗಳ ಕಾಲ, ಅಂದರೆ ಜನವರಿ 8 2027 ರವರೆಗೆ ಸಾರ್ವಜನಿಕರಿಗೆ ಮುಕ್ತವಾಗಿರಲಿದ್ದು, ಸಾರ್ವಜನಿಕರ ಬೇಡಿಕೆಗೆ ಅನುಗುಣವಾಗಿ ಅವಧಿಯನ್ನು ಮತ್ತಷ್ಟು ವಿಸ್ತರಿಸುವ ಮುಕ್ತ ಅವಕಾಶವನ್ನು ಕಲ್ಪಿಸಲಾಗಿದೆ ಎಂದು ಹೇಳಿದರು.

ಕಳೆದ ವರ್ಷಗಳಲ್ಲಿ 8 ಮತ್ತು 9 ಲಕ್ಷದಷ್ಟಿದ್ದ ಪ್ರವಾಸಿಗರ ಸಂಖ್ಯೆಯು ಪ್ರಸ್ತುತ ಸಾಲಿನಲ್ಲಿ ಅಧಿಕಾರಿಗಳ ಉತ್ತಮ ನಿರ್ವಹಣೆಯಿಂದಾಗಿ ಬರೋಬ್ಬರಿ 15 ಲಕ್ಷದ ಗಡಿಯನ್ನು ದಾಟಿ ದಾಖಲೆ ಬರೆದಿದೆ. ಪ್ರವಾಸಿಗರ ಭೇಟಿಯನ್ನು ಮತ್ತಷ್ಟು ಸುಲಭ ಹಾಗೂ ಆರಾಮದಾಯಕವಾಗಿಸಲು 4 ಕೋಟಿ ರೂಪಾಯಿ ವೆಚ್ಚದಲ್ಲಿ 32 ಶಾಶ್ವತ ಮಳಿಗೆಗಳನ್ನು ಹಾಗೂ ಮಳೆ-ಬಿಸಿಲಿನಿಂದ ರಕ್ಷಣೆ ನೀಡುವ ಅತ್ಯಾಧುನಿಕ ಶೆಲ್ಟರ್ ಒಳಗೊಂಡ ಶಾಶ್ವತ ಫುಡ್ ಕೋರ್ಟ್ ವ್ಯವಸ್ಥೆಯನ್ನು ಆವರಣದಲ್ಲಿ ನಿರ್ಮಿಸಲಾಗುತ್ತಿದೆ ಎಂದರು.

ಪ್ರತಿ ವರ್ಷ ತಾತ್ಕಾಲಿಕ ಮಳಿಗೆಗಳನ್ನು ನಿರ್ಮಿಸುವ ವೆಚ್ಚವನ್ನು ತಪ್ಪಿಸಲು ಸಿದ್ದರಾಮಯ್ಯ ಪ್ರದರ್ಶನ ಅಂಗಳದಲ್ಲಿ ಈಗಾಗಲೇ ಕಾಯಂ ಮಳಿಗೆಗಳನ್ನು ಕಲ್ಪಿಸಲಾಗಿದೆ. ಇದರೊಂದಿಗೆ ಸಾರ್ವಜನಿಕರ ನೆಚ್ಚಿನ ಆಕರ್ಷಣೆಗಳಾದ ಸಂಗೀತ ಕಾರಂಜಿ ಹಾಗೂ ಲೇಸರ್ ಶೋ, ಬೋಟಿಂಗ್ ಮತ್ತು ಬೆಂಕಿ ಉಗುಳುವ ಡ್ರ್ಯಾಗನ್ ಪ್ರದರ್ಶನ ಒಳಗೊಂಡ ರಾಜೀವ್ ಗಾಂಧಿ ಡ್ರ್ಯಾಗನ್ ಪಾಂಡ್ ಮನರಂಜನಾ ಕಾರ್ಯಕ್ರಮಗಳನ್ನು ಈ ಬಾರಿಯೂ ಮುಂದುವರಿಸಲಾಗುತ್ತಿದ್ದು, ಮೈದಾನದ ಒಳಭಾಗದಲ್ಲಿ ರಸ್ತೆ ಮತ್ತು ಕುಡಿಯುವ ನೀರಿನಂತಹ ಮೂಲಸೌಕರ್ಯಗಳನ್ನು ಸಂಪೂರ್ಣವಾಗಿ ಮೇಲ್ದರ್ಜೆಗೇರಿಸಲಾಗಿದೆ ಎಂದು ಹೇಳಿದರು.

ಮೈಸೂರು ನಗರದ ಮಧ್ಯಭಾಗದಲ್ಲಿರುವ ಜಾಗಗಳಲ್ಲಿ ರ್ಯಾಲಿಗಳು, ಖಾಸಗಿ ಕಾರ್ಯಕ್ರಮಗಳು ಹಾಗೂ ಸಂಗೀತ ಕಚೇರಿಗಳನ್ನು ನಡೆಸುವುದರಿಂದ ಸಂಚಾರ ದಟ್ಟಣೆ ಹೆಚ್ಚಾಗುತ್ತಿದೆ. ಇದನ್ನು ತಪ್ಪಿಸಲು ನಗರದ ಹೊರವಲಯದಲ್ಲಿ ಇಂತಹ ಸಾರ್ವಜನಿಕ ಕಾರ್ಯಕ್ರಮಗಳಿಗಾಗಿ ಪ್ರತ್ಯೇಕ ಮೈದಾನವೊಂದನ್ನು ಮೀಸಲಿಡಲು ಸರ್ಕಾರಕ್ಕೆ ಮನವಿ ಮಾಡಲಾಗಿದೆ. ರಾಜ್ಯದಲ್ಲಿ ಬರಗಾಲದ ಪರಿಸ್ಥಿತಿ ಇರುವುದರಿಂದ ದಸರಾವನ್ನು ಸರಳವಾಗಿ ಆಚರಿಸಬೇಕೆಂಬ ಅಭಿಪ್ರಾಯಗಳು ಕೇಳಿಬಂದಿದ್ದವು. ಆದರೆ ದಸರಾ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಚರ್ಚೆಯ ಬಳಿಕ, ಪ್ರತಿವರ್ಷದಂತೆ ಈ ಬಾರಿಯೂ ದಸರಾವನ್ನು ಸಡಗರ ಮತ್ತು ವಿಜೃಂಭಣೆಯಿoದಲೇ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

ಕರಾವಳಿ ಭಾಗದ ಸಾಂಸ್ಕೃತಿಕ ಕ್ರೀಡೆಯಾದ ಕಂಬಳವನ್ನು ಕೇವಲ ಆ ಭಾಗಕ್ಕೆ ಸೀಮಿತಗೊಳಿಸದೆ, ಇಡೀ ರಾಜ್ಯದ ಜನರಿಗೆ ಪರಿಚಯಿಸುವ ಉದ್ದೇಶವಿದೆ. ಈ ನಿಟ್ಟಿನಲ್ಲಿ ಮೈಸೂರು ದಸರಾದಲ್ಲಿ ಕಂಬಳವನ್ನು ಆಯೋಜಿಸಲು ದಸರಾ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಬಹುತೇಕ ಶಾಸಕರು ಮತ್ತು ಸದಸ್ಯರು ಒಲವು ವ್ಯಕ್ತಪಡಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿಗಳು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ. ದಸರಾ ಆರಂಭವಾಗುವುದಕ್ಕಿoತ ಮುಂಚಿತವಾಗಿಯೇ ಮೈಸೂರು ನಗರದ ರಸ್ತೆಗಳ ರಿಪೇರಿ ಹಾಗೂ ಹೊಸ ರಸ್ತೆ ನಿರ್ಮಾಣ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಸಂಬoಧಪಟ್ಟ ಎಂಜಿನಿಯರ್ಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಕಳೆದ ಬಾರಿಯಂತೆ ಈ ಬಾರಿಯೂ ದಸರಾ ವಸ್ತುಪ್ರದರ್ಶನಕ್ಕೆ ವಿಶೇಷ ಅನುದಾನ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು. ವಸ್ತುಪ್ರದರ್ಶನವು ಪ್ರಮುಖ ಆಕರ್ಷಣೆಯಾಗಿದ್ದು, ಲಕ್ಷಾಂತರ ಜನ ಭೇಟಿ ನೀಡುವುದರಿಂದ ಅದರ ಅಭಿವೃದ್ಧಿಗೆ ಅನುದಾನದ ಅಗತ್ಯವಿದೆ. ದಸರಾ ಶಾಶ್ವತ ಪ್ರಾಧಿಕಾರ ರಚನೆ ಮಾಡಬೇಕೆಂಬ ಬೇಡಿಕೆ ಪ್ರತಿ ವರ್ಷದಂತೆ ಈ ಬಾರಿಯೂ ಬಂದಿದ್ದು, ಮುಖ್ಯಮಂತ್ರಿಗಳು ಇದನ್ನು ಪರಿಶೀಲಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಿದ್ದಾರೆ. ಉಸ್ತುವಾರಿ ಸಚಿವರಾಗಿ ಅಧಿಕಾರ ವಹಿಸಿಕೊಂಡು ಕೇವಲ ಒಂದು ತಿಂಗಳಷ್ಟೇ ಆಗಿರುವುದರಿಂದ, ಮುಂದಿನ ತಿಂಗಳು ಕಡ್ಡಾಯವಾಗಿ ಕೆ.ಡಿ.ಪಿ ಸಭೆಯನ್ನು ಕರೆಯುವುದು ಎಂದು ತಿಳಿಸಿದರು. ದಸರಾ ಸಂದರ್ಭದಲ್ಲಿ ಉಪಸಮಿತಿಗಳನ್ನು ರಚಿಸುವಾಗ ಪಕ್ಷದ ಕಾರ್ಯಕರ್ತರನ್ನು ಸೇರಿಸುವ ವಿಷಯದಲ್ಲಿ ಉಂಟಾಗುವ ಗೊಂದಲಗಳನ್ನು ಈ ಬಾರಿ ನಿವಾರಿಸಲಾಗುವುದು. ಆದಷ್ಟು ಬೇಗ ಸಮಿತಿಗಳನ್ನು ರಚಿಸಿ ನಿಯಮಿತ ಸಂಖ್ಯೆಯಲ್ಲಿ ಕಾರ್ಯಕರ್ತರನ್ನು ಸದಸ್ಯರನ್ನಾಗಿ ನೇಮಕ ಮಾಡಲು ಕ್ರಮ ಕೈಗೊಳ್ಳಲಾಗುವುದು. ಹಿಂದಿನ ಎಲ್ಲಾ ಸರ್ಕಾರಗಳೂ ತಮ್ಮ ಪಕ್ಷದ ಕಾರ್ಯಕರ್ತರಿಗೆ ಇಂತಹ ಮಂಡಳಿ ಹಾಗೂ ಸಮಿತಿಗಳಲ್ಲಿ ಅವಕಾಶ ನೀಡುವುದು ಸಹಜ ಪ್ರಕ್ರಿಯೆಯಾಗಿದ್ದು, ಈ ಬಾರಿಯೂ ಅದನ್ನೇ ಪಾಲಿಸಲಾಗುವುದು ಎಂದು ತಿಳಿಸಿದರು.

ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗಳನ್ನು ಈ ವರ್ಷದ ನವೆಂಬರ್ನಲ್ಲಿ ನಡೆಸಲಾಗುವುದು, ಹಾಗೆಯೇ ಗ್ರಾಮ ಪಂಚಾಯಿತಿ ಚುನಾವಣೆಗಳನ್ನೂ ಇದೇ ವರ್ಷ ನಡೆಸಲು ಗ್ರಾಮೀಣಾಭಿವೃದ್ಧಿ ಸಚಿವರು ಒಲವು ತೋರಿದ್ದಾರೆ. ಮೈಸೂರು ಮಹಾನಗರ ಪಾಲಿಕೆ ಚುನಾವಣೆ ವಿಳಂಬಕ್ಕೆ ಕಾರಣ ಮೈಸೂರನ್ನು ಬೃಹತ್ ಮೈಸೂರು ಮಾಡಲು ಪ್ರಸ್ತಾವನೆ ಸಲ್ಲಿಸಲಾಗಿದೆ. ಆದರೆ ಸೆನ್ಸಸ್ ಪ್ರಕ್ರಿಯೆ ಚಾಲ್ತಿಯಲ್ಲಿರುವುದರಿಂದ ಯಾವುದೇ ಬದಲಾವಣೆ ಮಾಡಲು ಬರುವುದಿಲ್ಲ ಎಂದು ರಾಜ್ಯಪಾಲರು ತಿಳಿಸಿದ್ದರಿಂದ ಚುನಾವಣೆ ವಿಳಂಬವಾಗಿದೆ. ಈಗ ಸೆನ್ಸಸ್ ಮುಗಿಯುವವರೆಗೆ ಕಾಯುವುದು ಬೇಡ ಎಂದು ತೀರ್ಮಾನಿಸಿದ್ದು, ಶೀಘ್ರದಲ್ಲೇ ಸಿಎಂ ಹಾಗೂ ಪಕ್ಷದ ನಾಯಕರೊಂದಿಗೆ ಚರ್ಚಿಸಿ ಚುನಾವಣೆ ನಡೆಸಲಾಗುವುದು ಎಂದರು.

ಬೆಂಗಳೂರಿನಲ್ಲಿ ಫುಟ್ಪಾತ್ ಅತಿಕ್ರಮಣ ತೆರವುಗೊಳಿಸುವುದು ಸಂಚಾರ ದಟ್ಟಣೆ ನಿಯಂತ್ರಿಸಲು ಅನಿವಾರ್ಯವಾಗಿದೆ. ಆದರೆ ಇತರೆ ನಗರಗಳಲ್ಲಿ ಮಾನವೀಯತೆಯ ದೃಷ್ಟಿಯಿಂದ ಬೀದಿ ಬದಿ ವ್ಯಾಪಾರಿಗಳಿಗೆ ತೊಂದರೆಯಾಗದoತೆ ನೋಟಿಸ್ ನೀಡಿ, ಪರ್ಯಾಯ ಜಾಗ ಕಲ್ಪಿಸಿ ನಂತರ ತೆರವು ಮಾಡಲಾಗುವುದು. ಮೈಸೂರಿನಲ್ಲಿ ಫುಡ್ ಸ್ಟ್ರೀಟ್ ಮತ್ತು ಪ್ರತ್ಯೇಕ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲು ಸೂಚಿಸಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಕರ್ನಾಟಕ ಪ್ರದರ್ಶನ ಪ್ರಾಧಿಕಾರದ ಅಧಕ್ಷರಾದ ಅಯೂಬ್ ಖಾನ್ ಮತ್ತು ವಿಜಯ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಇಂದಿನಿಂದ ಮೂರು ದಿನ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ…

3 hours ago

ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ: ನಾಡದೇವಿಗೆ ಮಹಾಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಮಹಾಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಇಡೀ…

8 hours ago

ಓದುಗರ ಪತ್ರ: ದಸರಾದಲ್ಲಿ ಕಂಬಳಕ್ಕೆ ಹಠವೇಕೆ?

ಈ ವರ್ಷ ನಾಡ ಹಬ್ಬ ದಸರಾದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ. ಈಗಾಗಲೇ ಸಾರ್ವಜನಿಕರು ಹಾಗೂ…

11 hours ago

ಓದುಗರ ಪತ್ರ: ದೇವಿಯ ನೇರ ದರ್ಶನಕ್ಕೆ ಅವಕಾಶ ಕಲ್ಪಿಸಿ

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಪ್ರತಿ ವರ್ಷ ಆಷಾಢ ಮಾಸದ ಶುಕ್ರವಾರಗಳಂದು…

11 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಚಿತ್ರೋದ್ಯಮದತ್ತ ಕೇಂದ್ರದ ಗಮನ, ಅಧ್ಯಯನ ತಂಡ ರಚನೆ

ಭಾರತೀಯ ಚಿತ್ರೋದ್ಯಮದ ಉತ್ತೇಜನಕ್ಕಾಗಿ, ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಮುಂದಾಗಿರುವ ಸುದ್ದಿ. ಚಿತ್ರರಂಗಕ್ಕೆ ಸಂಬಂಧಿಸಿದಂತೆ, ಚಿತ್ರಗಳನ್ನು ವರ್ಗೀಕರಿಸಿ, ಪ್ರಮಾಣಪತ್ರ…

11 hours ago

ಕೊಡಗು ಜಿಲ್ಲೆಯಲ್ಲಿ ನಮೂನೆ ವಿತರಣೆ ಕಾರ್ಯ ಪೂರ್ಣ

ನವೀನ್ ಡಿಸೋಜ ತ್ವರಿತಗತಿಯಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ; ಒಟ್ಟು ೪,೬೮,೬೫೭ ನಮೂನೆ ವಿತರಣೆ ಮೂಲಕ ಶೇ.೧೦೦ ಪ್ರಗತಿ…

11 hours ago