ಮೈಸೂರು: ಚಾಮುಂಡಿ ಬೆಟ್ಟದ ದೇವಸ್ಥಾನದ ಆವರಣದಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಯೋಗ ಚಾರಣ ಮತ್ತು ದುರ್ಗಾನಮಸ್ಕಾರ ನೆರವೇರಿತು. ಯೋಗ ದಸರಾ ಸೇರಿದಂತೆ ಬಹುತೇಕ ಎಲ್ಲಾ ದಸರಾ ಕಾರ್ಯಕ್ರಮಗಳನ್ನು ಬಹಳ ವ್ಯವಸ್ಥಿತವಾಗಿ ಆಯೋಜಿಸಲಾಗಿದೆ. ಸಾವಿರ ಮೆಟ್ಟಿಲು ಹತ್ತಿ ಬಂದು ಯೋಗ ಮಾಡಿದ್ದಾರೆ. ಸೆ.26ರಿಂದ ಅ.3ರವರೆಗೆ ನಿತ್ಯ ಯೋಗಾಸನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಮೈಸೂರು ದಸರಾ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ ಜಿಲ್ಲಾ ಉಸ್ತುವಾರಿಯಾಗಿರುವ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್. ಎರಡು ವರ್ಷ ಕೋವಿಡ್ ನಿಂದ ಅದ್ದೂರಿ ದಸರಾ ಮಾಡಿರಲಿಲ್ಲ. ಈಗ ಉನ್ನತಮಟ್ಟದ ಸಮಿತಿ ತೀರ್ಮಾನದಂತೆ ಆಚರಣೆ ಮಾಡಲಾಗುತ್ತಿದ್ದು, ಅಧಿಕಾರಿಗಳು ಕೂಡ ಸೂಕ್ತವಾಗಿ ಸ್ಪಂದಿಸುತ್ತಿದ್ದಾರೆ ಎಂದರು.
ಈ ಬಾರಿ ಕಳೆಕಟ್ಟಿದ ದಸರಾ
ಯೋಗ ದಸರಾ ಸೇರಿದಂತೆ ಬಹುತೇಕ ಎಲ್ಲಾ ದಸರಾ ಕಾರ್ಯಕ್ರಮಗಳನ್ನು ಬಹಳ ವ್ಯವಸ್ಥಿತವಾಗಿ ಆಯೋಜಿಸಲಾಗಿದೆ. ಸಾವಿರ ಮೆಟ್ಟಿಲು ಹತ್ತಿ ಬಂದು ಯೋಗ ಮಾಡಿದ್ದಾರೆ. ಸೆ.26ರಿಂದ ಅ.3ರವರೆಗೆ ನಿತ್ಯ ಯೋಗಾಸನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಈ ಬಾರಿ ದಸರಾ ಕಳೆಕಟ್ಟಿದೆ. ಬಹುತೇಕ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದೇನೆ. ಎಲ್ಲಾ ಅಚ್ಚುಕಟ್ಟಾಗಿ ಮಾಡಲಾಗಿದ್ದು, ಪ್ರತ್ಯಕ್ಷ, ಪರೋಕ್ಷವಾಗಿ ಸಹಕಾರ ನೀಡಿದ ಎಲ್ಲರಿಗೂ ಅಭಿನಂದನೆಗಳನ್ನು ತಿಳಿಸುತ್ತೇನೆ ಎಂದರು.
ಬಹುತೇಕ ಕಾರ್ಯಕ್ರಮಗಳು ಇಂದು ಅಂತ್ಯವಾಗಲಿದೆ. ನಾಳೆ ಮೆರವಣಿಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತದೆ. ಮುಖ್ಯಮಂತ್ರಿಗಳು ಸಹ ನಾಳೆ ಸಂಜೆ ಆಗಮಿಸಲಿದ್ದಾರೆ. ಎರಡು ವರ್ಷ ಕೋವಿಡ್ ನಿಂದ ಅದ್ದೂರಿ ದಸರಾ ಮಾಡಿರಲಿಲ್ಲ. ಉನ್ನತಮಟ್ಟದ ಸಮಿತಿ ತೀರ್ಮಾನದಂತೆ ಆಚರಣೆ ಮಾಡಲಾಗುತ್ತಿದ್ದು, ಅಧಿಕಾರಿಗಳು ಕೂಡ ಸೂಕ್ತವಾಗಿ ಸ್ಪಂದಿಸುತ್ತಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರಾದ ಶಿವಣ್ಣ, ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಮಿರ್ಲೇ ಶ್ರೀನಿವಾಸ್, ಮೂಡಾ ಮಾಜಿ ಅಧ್ಯಕ್ಷರಾದ ರಾಜೀವ್, ಜಂಗಲ್ಸ್ ಲಾಡ್ಜ್ಸ್ ಅಂಡ್ ರೆಸಾರ್ಟ್ಸ್ ಮಾಜಿ ಅಧ್ಯಕ್ಷರಾದ ಅಪ್ಪಣ್ಣ ಸೇರಿದಂತೆ ನಾನಾ ನಿಗಮ ಮಂಡಳಿಗಳ ಅಧ್ಯಕ್ಷರು ಉಪಸ್ಥಿತರಿದ್ದರು.
ಚಾಮರಾಜನಗರ : ತಾಲೂಕಿನ ದೇವರಾಜಪುರ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಕೋಳಿ ಫಾರಂ ಶೆಡ್‌ಗೆ ಬೆಂಕಿ ತಗುಲಿ ಸುಮಾರು 4…
ದಾವಣಗೆರೆ : ಆಟೋ ರಿಕ್ಷಾಗಳಿಗೆ ಅನಿಲ ಪೂರೈಕೆ ಸಮಸ್ಯೆ ಇಲ್ಲ, ಆದರೂ ವಿನಾಕಾರಣ ಆತಂಕಕ್ಕೊಳಗಾಗಿ ಕ್ಯೂ ನಿಲ್ಲಲಾಗುತ್ತಿದೆ ಎಂದು ಆಹಾರ…
ಶ್ರೀರಂಗಪಟ್ಟಣ : ಪ್ರವಾಸಕ್ಕೆ ಬಂದಿದ್ದ ಇನ್ಫೋಸಿಸ್ ಉದ್ಯೋಗಿಯೊಬ್ಬರು ಕಾವೇರಿ ನದಿಯಲ್ಲಿ ಈಜಲು ಹೋಗಿ ಮುಳುಗಿ ಸಾವನ್ನಪ್ಪಿದ ಘಟನೆ ಶ್ರೀರಂಗಪಟ್ಟಣ ತಾಲೂಕಿನ…
ಬೆಂಗಳೂರು : ಕರ್ನಾಟಕ ಸರ್ಕಾರವು ದಿನಗೂಲಿ ನೌಕರರು ಮತ್ತು ಅವರ ಅವಲಂಬಿತರಿಗೆ ವಾರ್ಷಿಕ 5 ಲಕ್ಷದವರೆಗೆ ನಗದು ರಹಿತ ಆರೋಗ್ಯ…
ಬೆಂಗಳೂರು : ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿ ಹಗರಣ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್…
ಮೈಸೂರು : ಜಿಲ್ಲೆಯಲ್ಲಿ ಏ.16 ರಿಂದ ಮೇ 15ರವರೆಗೆ ನಡೆಯುವ ಜನಗಣತಿಗೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಜನಗಣತಿಗೂ ಮುನ್ನ ‘ಸ್ವಯಂ…