Mysore
17
scattered clouds

Social Media

ಭಾನುವಾರ, 28 ಡಿಸೆಂಬರ್ 2025
Light
Dark

ಹುಣಸೂರಿನಲ್ಲಿ ಹಾಡಹಗಲೇ ಚಿನ್ನಭರಣ ದರೋಡೆ : ಐಜಿಪಿ ಬೋರಲಿಂಗಯ್ಯ ಹೇಳಿದ್ದೇನು?

ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್‌ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ʼ ಚಿನ್ನಂಗಡಿಗೆ ನುಗ್ಗಿದ 5ಕ್ಕೂ ಹೆಚ್ಚು ಜನರ ಗ್ಯಾಂಗ್‌, ಸಿಬ್ಬಂದಿಗೆ ಗನ್ ತೋರಿಸಿ 4 ರಿಂದ 5 ಕೋಟಿ ರೂ. ಮೌಲ್ಯದ ಚಿನ್ನ ಮತ್ತು ವಜ್ರಾಭರಣಗಳನ್ನ ದರೋಡೆ ಮಾಡಿ ಪರಾರಿಯಾಗಿದೆ.

ವಿಷಯ ತಿಳಿಯುತ್ತಿದ್ದಂತೆಯೇ ಸ್ಕೈ ಜ್ಯುವೆಲ್ಲರಿ ಶಾಪ್​ಗೆ ಗೆ ಐಜಿಪಿ ಬೋರಲಿಂಗಯ್ಯ ಹಾಗೂ ಎಸ್​ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಐಜಿಪಿ, ನಾಲ್ಕೈದು ಮುಸುಕುದಾರಿಗಳು ಏಕಾಏಕಿ ಚಿನ್ನದ ಅಂಗಡಿಗೆ ನುಗ್ಗಿ, ಸಿಬ್ಬಂದಿಗಳಿಗೆ ಬೆದರಿಸಿ ಅವರನ್ನೇ ಬಳಸಿಕೊಂಡು ಚೀಲಕ್ಕೆ ಚಿನ್ನಭರಣಗಳನ್ನು ತುಂಬಿಸಿಕೊಂಡು ಪರಾರಿಯಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ

ಇನ್ನೂ ಆರೋಪಿಗಳು 7 ರಿಂದ 8 ನಿಮಿಷದಲ್ಲಿ ಕೃತ್ಯ ಎಸಗಿ ಪರಾರಿಯಾಗಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ವೇಳೆ ಮ್ಯಾನೇಜರ್‌ಗೆ ಗುಂಡು ಸಹ ಹಾರಿಸಿದ್ದಾರೆ. ಇನ್ನೂ ಅಂಗಡಿಯಿಂದ ಹೊರಬಂದ ಆರೋಪಿಗಳು ಸಾರ್ವಜನಿಕರಲ್ಲಿ ಭಯ ಹುಟ್ಟಿಸಲು ಗಾಳಿಯಲ್ಲಿಯೂ ಗುಂಡು ಹಾರಿಸಿದ್ದಾರೆ. ಆವಾಗ ಸಾರ್ವಜನಿಕರ ಸಹ ಅವರಿಗೆ ಕಲ್ಲು ತೂರಾಟ ನಡೆಸಿದ್ದಾರೆ. ಆರೋಪಿಗಳ ಪತ್ತೆಗೆ ಸಿಸಿಟಿವಿ ಪರಿಶೀಲಿಸಿದ್ದು, ಪತ್ತೆಗೆ ತಂಡ ರಚಿಸಿದ್ದೇವೆ ಎಂದು ತಿಳಿಸಿದ್ದಾರೆ.

Tags:
error: Content is protected !!