ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್ ಅಂಡ್ ಡೈಮಂಡ್ಸ್ʼ ಚಿನ್ನಂಗಡಿಗೆ ನುಗ್ಗಿದ 5ಕ್ಕೂ ಹೆಚ್ಚು ಜನರ ಗ್ಯಾಂಗ್, ಸಿಬ್ಬಂದಿಗೆ ಗನ್ ತೋರಿಸಿ 4 ರಿಂದ 5 ಕೋಟಿ ರೂ. ಮೌಲ್ಯದ ಚಿನ್ನ ಮತ್ತು ವಜ್ರಾಭರಣಗಳನ್ನ ದರೋಡೆ ಮಾಡಿ ಪರಾರಿಯಾಗಿದೆ.
ವಿಷಯ ತಿಳಿಯುತ್ತಿದ್ದಂತೆಯೇ ಸ್ಕೈ ಜ್ಯುವೆಲ್ಲರಿ ಶಾಪ್ಗೆ ಗೆ ಐಜಿಪಿ ಬೋರಲಿಂಗಯ್ಯ ಹಾಗೂ ಎಸ್ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಐಜಿಪಿ, ನಾಲ್ಕೈದು ಮುಸುಕುದಾರಿಗಳು ಏಕಾಏಕಿ ಚಿನ್ನದ ಅಂಗಡಿಗೆ ನುಗ್ಗಿ, ಸಿಬ್ಬಂದಿಗಳಿಗೆ ಬೆದರಿಸಿ ಅವರನ್ನೇ ಬಳಸಿಕೊಂಡು ಚೀಲಕ್ಕೆ ಚಿನ್ನಭರಣಗಳನ್ನು ತುಂಬಿಸಿಕೊಂಡು ಪರಾರಿಯಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ
ಇನ್ನೂ ಆರೋಪಿಗಳು 7 ರಿಂದ 8 ನಿಮಿಷದಲ್ಲಿ ಕೃತ್ಯ ಎಸಗಿ ಪರಾರಿಯಾಗಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ವೇಳೆ ಮ್ಯಾನೇಜರ್‌ಗೆ ಗುಂಡು ಸಹ ಹಾರಿಸಿದ್ದಾರೆ. ಇನ್ನೂ ಅಂಗಡಿಯಿಂದ ಹೊರಬಂದ ಆರೋಪಿಗಳು ಸಾರ್ವಜನಿಕರಲ್ಲಿ ಭಯ ಹುಟ್ಟಿಸಲು ಗಾಳಿಯಲ್ಲಿಯೂ ಗುಂಡು ಹಾರಿಸಿದ್ದಾರೆ. ಆವಾಗ ಸಾರ್ವಜನಿಕರ ಸಹ ಅವರಿಗೆ ಕಲ್ಲು ತೂರಾಟ ನಡೆಸಿದ್ದಾರೆ. ಆರೋಪಿಗಳ ಪತ್ತೆಗೆ ಸಿಸಿಟಿವಿ ಪರಿಶೀಲಿಸಿದ್ದು, ಪತ್ತೆಗೆ ತಂಡ ರಚಿಸಿದ್ದೇವೆ ಎಂದು ತಿಳಿಸಿದ್ದಾರೆ.
ಬೆಂಗಳೂರು : ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಆರಂಭಿಸಲು ಮತ್ತು ಧಾರಣಾ ಶಕ್ತಿ ಮತ್ತು ಹುಲಿಗಳು ನಾಡಿನತ್ತ…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತವರು ಜಿಲ್ಲೆ ಮೈಸೂರಿನಲ್ಲಿ ಎರಡು ದಿನಗಳ ಕಾಲ ಪ್ರವಾಸ ಹಮ್ಮಿಕೊಂಡಿದ್ದಾರೆ. ಜ.5ರಂದು ಬೆಳಿಗ್ಗೆ…
ಮೈಸೂರು : ಅರಮನೆ ನಗರಿ ಮೈಸೂರಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಚಾಮುಂಡಿಬೆಟ್ಟದ ಸಂರಕ್ಷಣೆ ಮತ್ತು ಉಳಿವಿಗಾಗಿ ಜ.4ರಂದು(ಭಾನುವಾರ) ಜಾಗೃತಿ ಆಂದೋಲನವನ್ನು…
ಭೋಪಾಲ್ : ಇಂದೋರ್‌ನ ಭಗೀರಥಪುರದಲ್ಲಿ ಕಲುಷಿತ ಕುಡಿಯುವ ನೀರು ಸೇವನೆಯಿಂದ 11 ಜೀವಗಳು ಬಲಿಯಾಗಿವೆ. ಮತ್ತು 1400ಕ್ಕೂ ಹೆಚ್ಚು ನಿವಾಸಿಗಳ…
ಬೆಂಗಳೂರು : ಬ್ಯಾನರ್ ಕಟ್ಟುವ ವಿಷಯದಲ್ಲಿ ಕಳೆದ ರಾತ್ರಿ ಬಳ್ಳಾರಿ ನಗರದಲ್ಲಿ ನಡೆದ ಘಟನೆಯ ಕುರಿತು ಉಚ್ಚ ನ್ಯಾಯಾಲಯದ ಹಾಲಿ…
ಬೆಂಗಳೂರು : ಬಳ್ಳಾರಿಯಲ್ಲಿ ಗುರುವಾರ ರಾತ್ರಿ ವಾಲ್ಮೀಕಿ ಬ್ಯಾನರ್ ವಿಚಾರದಲ್ಲಿ ನಡೆದ ಎರಡು ಗುಂಪುಗಳ ಘರ್ಷಣೆ ವೇಳೆ ಫೈರಿಂಗ್ ಆಗಿ…