ಮೈಸೂರು

ಬಿಎ, ಎಲ್‌ಎಲ್‌ಬಿ ವಿದ್ಯಾರ್ಥಿನಿ ಪ್ರತಿಕ್ಷ ಪಾವಸ್ಕರ್‌ಗೆ ಸಿಎಂ ಸಿದ್ದರಾಮಯ್ಯ ಹೆಸರಿನ ಚಿನ್ನದ ಪದಕ

ಮೈಸೂರು: ಬಿಎ, ಎಲ್‌ಎಲ್‌ಬಿ ಐದು ವರ್ಷದ ಪದವಿ ವ್ಯಾಸಂಗದಲ್ಲಿ ಅತಿ ಹೆಚ್ಚು ಅಂಕಗಳಿಸಿ ಉತ್ತೀರ್ಣರಾಗಿದ್ದ ಪ್ರತಿಕ್ಷ ಪಾವಸ್ಕರ್‌ ಅವರು ಸಿದ್ದರಾಮಯ್ಯ 75ನೇ ಅಮೃತ ಮಹೋತ್ಸವದ ಚಿನ್ನದ ಪದಕ ಹಾಗೂ ಘಟಿಕೋತ್ಸವ ಪ್ರಮಾಣ ಪತ್ರವನ್ನು ಮುಡಿಗೇರಿಸಿಕೊಂಡಿದ್ದಾರೆ.

ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ.ಬಿಜೆ. ವಿಜಯ್ ಕುಮಾರ್ ಅಧ್ಯಕ್ಷತೆಯಲ್ಲಿ ಜಿಲ್ಲೆಯ ಪದಾಧಿಕಾರಿಗಳು 6.8.2022 ರಂದು ಸಭೆ ಸೇರಿ ಸಿದ್ದರಾಮಯ್ಯ ಅವರಿಗೆ 75 ವರ್ಷ ತುಂಬಿದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಮೈಸೂರು ವಿಶ್ವವಿದ್ಯಾನಿಲಯಕ್ಕೆ ಶಾಶ್ವತ ಚಿನ್ನದ ದತ್ತಿ ನೀಡುವ ನಿರ್ಣಯವನ್ನ ಅಂಗೀಕರಿಸಿತ್ತು.

ಈ ಅಂಗೀಕಾರದ ಅನ್ವಯ ಪ್ರತಿ ವರ್ಷ ಘಟಿಕೋತ್ಸವದ ವೇಳೆ ಬಿಎ, ಎಲ್‌ಎಲ್‌ಬಿ ಐದು ವರ್ಷದ ಪದವಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿ/ ವಿದ್ಯಾರ್ಥಿನಿಗೆ ಸಿದ್ದರಾಮಯ್ಯ 75 ಅಮೃತ ಮಹೋತ್ಸವ ಚಿನ್ನದ ಪದಕವನ್ನು ನೀಡಲಾಗುತ್ತಿತ್ತು. ಅಂತೆಯೇ 2024-25ನೇ ಶೈಕ್ಷಣಿಕ ವರ್ಷದಲ್ಲಿ ಪ್ರತಿಕ್ಷ ಪಾವಸ್ಕರ್ ಅವರಿಗೆ ಸಿದ್ದರಾಮಯ್ಯ ಹೆಸರಿನ ಚಿನ್ನದ ಪದಕವನ್ನು ನೀಡಲಾಗಿತ್ತು.

ಜಿಲ್ಲಾ ಕಾಂಗ್ರೆಸ್‌ ಸಮಿತಿ ಈ ವಿಷಯವನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ತಿಳಿಸಿದ್ದಾರೆ. ಈ ವಿಷಯ ತಿಳಿದ ತಕ್ಷಣವೇ ಸಿಎಂ ಸಿದ್ದರಾಮಯ್ಯ ಅವರು ಸ್ವತಃ ಪ್ರತಿಕ್ಷಾ ಅವರನ್ನು ತಮ್ಮ ಮೈಸೂರು ನಿವಾಸಕ್ಕೆ ಕರೆಸಿ ಅಭಿನಂದಿಸಿದ್ದಾರೆ.

ಈ ವೇಳೆ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿ, ನನ್ನ ಹೆಸರಿನಲ್ಲಿ ಚಿನ್ನದ ಪದಕದ ದತ್ತಿ ನೀಡಿದ್ದು ನನಗೆ ಗೊತ್ತಿರಲಿಲ್ಲ. ಆದರೆ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರತಿಭಾನ್ವಿತರನ್ನ ಪ್ರೋತ್ಸಾಹಿಸುವ ಈ ಉದ್ದೇಶ ತುಂಬಾ ಉತ್ತಮ ಬೆಳವಣಿಗೆಯಾಗಿದೆ ಎಂದರು. ಜೊತೆಗೆ ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯವೈಖರಿ ಹಾಗೂ ಕಳೆದ ಎಲ್ಲಾ ಚುನಾವಣೆಗಳಲ್ಲಿ ಪಕ್ಷದ ಶ್ರಮ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಪ್ರಾಮಾಣಿಕ ಹೋರಾಟದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಮಾರ್ಚ್ 15 ರಂದು ಶಂಕು ಸ್ಥಾಪನೆ

ಇದೇ ಸಂದರ್ಭದಲ್ಲಿ ಮೈಸೂರಿನ ರೈಲ್ವೆ ನಿಲ್ದಾಣದ ಪಕ್ಕದ ಖಾಲಿ ಜಾಗದಲ್ಲಿ ಕಾಂಗ್ರೆಸ್ ಭವನಕ್ಕೆ ಮುಂಬರುವ ಮಾರ್ಚ್ 15 ರಂದು ಶಂಕು ಸ್ಥಾಪನೆ ನೆರವೇರಿಸಲಾಗುತ್ತದೆ. ಅದಕ್ಕೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲು ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ. ಬಿಜೆ. ವಿಜಯಕುಮಾರ್ ಹಾಗೂ ಪದಾಧಿಕಾರಿಗಳಿಗೆ ಸೂಚನೆ ನೀಡಿದರು.

ಅರ್ಚನ ಎಸ್‌ ಎಸ್

Recent Posts

ಕಳೆದ 3 ವರ್ಷಗಳಲ್ಲಿ 88 ಪೊಲೀಸರು ಅಪರಾಧ ಕೃತ್ಯಗಳಲ್ಲಿ ಭಾಗಿ: ಸಚಿವ ಪರಮೇಶ್ವರ್‌

ಬೆಳಗಾವಿ: ರಾಜ್ಯದಲ್ಲಿ ಪೊಲೀಸ್‌ ಸಿಬ್ಬಂದಿಗಳೇ ದರೋಡೆ, ಕಳ್ಳತನ ಸೇರಿದಂತೆ ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು, ಬೇಲಿಯೇ ಎದ್ದು…

9 mins ago

ಪಾರಿವಾಳದ ಮಲ-ಮೂತ್ರದಿಂದ ಜನರಿಗೆ ಉಸಿರಾಟದ ತೊಂದರೆ: ಸಚಿವ ದಿನೇಶ್‌ ಗುಂಡೂರಾವ್‌ ಎಚ್ಚರಿಕೆ

ಬೆಂಗಳೂರು: ಪಾರಿವಾಳದ ಮಲ-ಮೂತ್ರದಿಂದ ಸೋಂಕು, ಉಸಿರಾಟದ ತೊಂದರೆಯಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು…

2 hours ago

ಕಳ್ಳತನ ಪ್ರಕರಣ: ಸ್ಯಾಂಡಲ್‌ವುಡ್‌ ನಿರ್ಮಾಪಕ ಹರ್ಷವರ್ಧನ್‌ ಅರೆಸ್ಟ್‌

ಕಾರವಾರ: ಪತ್ನಿ ಕಿಡ್ನ್ಯಾಪ್‌ ಮಾಡಿದ್ದ ಪ್ರಕರಣದಲ್ಲಿ ಬಂಧಿತನಾಗಿದ್ದ ನಿರ್ಮಾಪಕ ಹರ್ಷವರ್ಧನ್‌ ಇದೀಗ ಮನೆಗಳ್ಳತನ ಪ್ರಕರಣದಲ್ಲಿ ಬಂಧಿತನಾಗಿದ್ದಾನೆ. ಉತ್ತರ ಕನ್ನಡ ಜಿಲ್ಲೆಯ…

2 hours ago

ಶಿವಮೊಗ್ಗ ಜೈಲಿನಿಂದ ಮಾಸ್ಕ್‌ಮ್ಯಾನ್‌ ಚಿನ್ನಯ್ಯ ಬಿಡುಗಡೆ

ಶಿವಮೊಗ್ಗ: ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿರುವುದಾಗಿ ದೂರು ನೀಡಿ ಬಂಧಿತನಾಗಿದ್ದ ಮಾಸ್ಕ್‌ಮ್ಯಾನ್‌ ಚಿನ್ನಯ್ಯ ಈಗ ಜೈಲಿನಿಂದ ಬಿಡುಗಡೆಯಾಗಿದ್ದಾನೆ. ಚಿನ್ನಯ್ಯನಿಗೆ…

2 hours ago

ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ ರೇಪ್‌

ರಾಮನಗರ: ರಾಮನಗರದಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ ರೇಪ್‌ ಎಸಗಲಾಗಿದ್ದು, ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ವಿಕಾಸ್‌, ಪ್ರಶಾಂತ್‌, ಚೇತನ್‌…

3 hours ago

ಚಾಮರಾಜನಗರ| ಕಾಡಾನೆ ದಾಳಿ: ವ್ಯಕ್ತಿ ಸಾವು

ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹೂಗ್ಯಂ ವನ್ಯಜೀವಿ ವಲಯದ ಜಲ್ಲಿಪಾಳ್ಯ ಹತ್ತಿರ ಬೈಕ್‌ನಲ್ಲಿ…

3 hours ago