ಮೈಸೂರು

ಹುಣಸೂರಿನಲ್ಲಿ ಚಿನ್ನ ದೋಚಿದ್ದ ಪ್ರಕರಣ: ಬಿಹಾರದಲ್ಲಿ ಖದೀಮರು ಅರೆಸ್ಟ್‌

ಹುಣಸೂರು: ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಆಭರಣ ಮಳಿಗೆಯೊಂದರಲ್ಲಿ ಡಿಸೆಂಬರ್.‌28ರಂದು ನಡೆದ 10 ಕೋಟಿ ಮೌಲ್ಯದ ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಬಿಹಾರ ರಾಜ್ಯದ ಬಾಗಲ್ಪುರ್‌ ಜಿಲ್ಲೆಯ ಪಂಕಜ್‌ ಕುಮಾರ್, ದರ್ಬಾಂಗ್‌ ಜಿಲ್ಲೆಯ ಹೃಷಿಕೇಶ್ ಸಿಂಗ್‌ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ಕರ್ನಾಟಕ ಪೊಲೀಸರು ಬಿಹಾರದ ಎಸ್‌ಟಿಎಫ್‌ ಜಂಟಿ ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ.

ಬಂಧಿತರಿಂದ ಚಿನ್ನಾಭರಣ ಮಳಿಗೆಯಲ್ಲಿ ಕಳವು ಮಾಡಿದ್ದ ಉಂಗುರ, ಚಿನ್ನದ ಸರ, ಒಂದು ಲಕ್ಷ ರೂಪಾಯಿ ನಗದು, ಬೈಕ್‌ನ್ನು ವಶಕ್ಕೆ ಪಡೆಯಲಾಗಿದೆ.

ಪಂಕಜ್‌ ಕುಮಾರ್‌ ವಿರುದ್ಧ ಕರ್ನಾಟಕ, ಬಿಹಾರ, ಜಾರ್ಖಂಡ್‌, ರಾಜಸ್ಥಾನ ರಾಜ್ಯಗಳಲ್ಲಿ ಕೊಲೆ ಕಳ್ಳತನ ಸೇರಿದಂತೆ ಹಲವು ಪ್ರಕರಣ ದಾಖಲಾಗಿದೆ. ಹೃಷಿಕೇಶ್‌ ವಿರುದ್ಧ ಬಿಹಾರದಲ್ಲಿ ನಾಲ್ಕು ಕ್ರಿಮಿನಲ್‌ ಪ್ರಕರಣ ದಾಖಲಾಗಿದೆ.

ಈ ದರೋಡೆಕೋರರನ್ನು ಪತ್ತೆ ಹಚ್ಚಲು ಪೊಲೀಸರು ಐದು ವಿಶೇಷ ತಂಡಗಳನ್ನು ರಚಿಸಿದ್ದರು. ದರೋಡೆ ನಡೆದ ಸಂದರ್ಭದಲ್ಲಿ ಆರೋಪಿಗಳ ಚಲನವಲನಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸ್ಪಷ್ಟವಾಗಿ ದಾಖಲಾಗಿದ್ದವು, ಇದು ತನಿಖೆಗೆ ಪ್ರಮುಖ ಸುಳಿವು ನೀಡಿತು.

ಈ ಘಟನೆ ವೇಳೆ ಖದೀಮರು ಹಗಲು ಹೊತ್ತಿನಲ್ಲೇ ಚಿನ್ನದಂಗಡಿಗೆ ನುಗ್ಗಿ, ಸುಮಾರು 10 ಕೋಟಿ ರೂ.ಗೂ ಅಧಿಕ ಮೌಲ್ಯದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದರು. ಈ ಘಟನೆಯು ಹುಣಸೂರು ನಗರದಲ್ಲಿ ಆತಂಕಕ್ಕೆ ಕಾರಣವಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ತನಿಖೆ ಮುಂದುವರಿದಿದ್ದು, ಉಳಿದ ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ 150 ನೆಕ್ಲೆಸ್‌, 70 ಉಂಗುರ, 64 ಬಳೆ, 65 ಚಿನ್ನದ ಸರ, 19 ಕರಿಮಣಿ ಸರ, 13 ವಜ್ರದ ಉಂಗುರ, 17 ಕಿವಿಯೋಲೆ, 12 ಲಾಕೆಟ್‌, 12 ಕಾಲುಚೈನು, 8 ಬ್ರೇಸ್‌ಲೈಟ್‌ ಕಳುವಾಗಿದೆ ಎಂದು ಅಂಗಡಿ ಮಾಲೀಕ ದೂರು ನೀಡಿದ್ದರು. ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಬಿಹಾರದಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

4 hours ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

4 hours ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

4 hours ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

4 hours ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

4 hours ago