ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಈ ಬಾರಿಯೂ ಬ್ಯಾಂಕಿಂಗ್ ಪರೀಕ್ಷೆಗಳಿಗೆ ತರಬೇತಿ ನೀಡಲೂ ನಿರ್ಧರಿಸಿದ್ದು, ಇದಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಿದೆ.
ವಿವಿಯ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರದ ವತಿಯಿಂದ ಈ ತರಬೇತಿ ನಡೆಯಲಿದ್ದು, 45 ದಿನಗಳ ತರಬೇತಿ ನೀಡಲು ಸಿದ್ದತೆ ಮಾಡಿಕೊಂಡಿದೆ. ಅದೂ ಉಚಿತವಾಗಿರಲಿದೆ. ಎಸ್‌ಬಿಐ ಸಹಿತ ವಿವಿಧ ಬ್ಯಾಂಕ್‌ಗಳ ಗುಮಾಸ್ತರು ಹಾಗೂ ಅಧಿಕಾರಿಗಳ ಹುದ್ದೆಗಳ ಪರೀಕ್ಷೆಗೆ ತರಬೇತಿ ನಡೆಯಲಿದೆ.
ಬ್ಯಾಂಕ್ ಪರೀಕ್ಷೆಯಲ್ಲಿ ಯಶಸ್ವಿಯಾದ ಅಭ್ಯರ್ಥಿಗಳು. ಈಗಾಗಲೇ ವಿವಿಧ ಬ್ಯಾಂಕ್‌ಗಳ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿ ಅಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿರುವವರು, ವಿಷಯ ತಜ್ಞರು ನಿತ್ಯ ಮೂರು ಗಂಟೆಗಳ ಕಾಲ ತರಬೇತಿ ನೀಡಲಿದ್ದಾರೆ. ಅದರಲ್ಲೂ ಪರೀಕ್ಷೆಗೆ ಬೇಕಾದ ಮಾದರಿಯಲ್ಲಿಯೇ ತರಬೇತಿ ಪರಿಣಾಮಕಾರಿಯಾಗಿ ನೀಡಲಾಗುತ್ತದೆ. ನಿವೃತ್ತ ಬ್ಯಾಂಕ್ ಅಧಿಕಾರಿಗಳು, ಬ್ಯಾಂಕಿಂಗ್ ಪರೀಕ್ಷೆಗಳಲ್ಲಿನ ವಿವಿಧ ವಿಷಯಗಳ ತಜ್ಞರು ಈ ಕೇಂದ್ರದೊಂದಿಗೆ ಒಡನಾಟ ಹೊಂದಿದ್ದು ವಿಷಯ ತಜ್ಞರಾಗಿ ಭಾಗಿಯಾಗಲಿದ್ಧಾರೆ. ಇದಲ್ಲದೇ ವಿಷಯಕ್ಕೆ ಸಂಬಂಧಿಸಿ ಅಭ್ಯರ್ಥಿಗಳಿಗೆ ಅನುಮಾನಗಳಿದ್ದರೆ ಅದನ್ನೂ ಬಗೆಹರಿಸಲು ಸಂವಾದಗಳನ್ನು ಆಯೋಜಿಸಲಾಗುತ್ತದೆ.
ತರಬೇತಿಯು ಮೈಸೂರಿನ ಕರಾಮುವಿ ಕಾವೇರಿ ಸಭಾಂಗಣದಲ್ಲೇ ತರಬೇತಿಗಳು ನಡೆಯಲಿದೆ. ಸಂಕ್ರಾಂತಿ ನಂತರ ಉದ್ಘಾಟನೆ ಕಾರ್ಯಕ್ರಮ ನಡೆಯಲಿದ್ದು, ಅಂದಿನಿಂದಲೇ ತರಗತಿಗಳು ಶುರುವಾಗಲಿವೆ. ಸತತ ಒಂದೂವರೆ ತಿಂಗಳ ಕಾಲ ನಿರಂತರವಾಗಿ ತರಬೇತಿ ನೀಡಲಾಗುತ್ತದೆ.
ತರಬೇತಿಯು ಉಚಿತವಾಗಿದ್ದು, ನೋಂದಣಿಗೆ 500 ರೂ.ಗಳನ್ನು ಮಾತ್ರ ವ್ಯಹಿಸಬೇಕಾಗುತ್ತದೆ. ಹೆಚ್ಚಿನ ವಿವರಗಳಿಗೆ ಕೇಂದ್ರದ ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ (ಮೊ.ಸಂ 9448800816) ಇಲ್ಲವೇ ಕಚೇರಿಯ ದೂರವಾಣಿ ಸಂಖ್ಯೆ 0821 2515944ನ್ನು ಸಂಪರ್ಕಿಸಬಹುದು.