ಮೈಸೂರು

ಬ್ಯಾಂಕಿಂಗ್‌ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌ | ಪರೀಕ್ಷೆಗೆ ತರಬೇತಿ; ಇಂದೇ ನೋಂದಾಯಿಸಿಕೊಳ್ಳಿ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಈ ಬಾರಿಯೂ ಬ್ಯಾಂಕಿಂಗ್‌ ಪರೀಕ್ಷೆಗಳಿಗೆ ತರಬೇತಿ ನೀಡಲೂ ನಿರ್ಧರಿಸಿದ್ದು, ಇದಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಿದೆ.

ವಿವಿಯ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರದ ವತಿಯಿಂದ ಈ ತರಬೇತಿ ನಡೆಯಲಿದ್ದು, 45 ದಿನಗಳ ತರಬೇತಿ ನೀಡಲು ಸಿದ್ದತೆ ಮಾಡಿಕೊಂಡಿದೆ. ಅದೂ ಉಚಿತವಾಗಿರಲಿದೆ. ಎಸ್‌ಬಿಐ ಸಹಿತ ವಿವಿಧ ಬ್ಯಾಂಕ್‌ಗಳ ಗುಮಾಸ್ತರು ಹಾಗೂ ಅಧಿಕಾರಿಗಳ ಹುದ್ದೆಗಳ ಪರೀಕ್ಷೆಗೆ ತರಬೇತಿ ನಡೆಯಲಿದೆ.

ಬ್ಯಾಂಕ್‌ ಪರೀಕ್ಷೆಯಲ್ಲಿ ಯಶಸ್ವಿಯಾದ ಅಭ್ಯರ್ಥಿಗಳು. ಈಗಾಗಲೇ ವಿವಿಧ ಬ್ಯಾಂಕ್‌ಗಳ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿ ಅಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿರುವವರು, ವಿಷಯ ತಜ್ಞರು ನಿತ್ಯ ಮೂರು ಗಂಟೆಗಳ ಕಾಲ ತರಬೇತಿ ನೀಡಲಿದ್ದಾರೆ. ಅದರಲ್ಲೂ ಪರೀಕ್ಷೆಗೆ ಬೇಕಾದ ಮಾದರಿಯಲ್ಲಿಯೇ ತರಬೇತಿ ಪರಿಣಾಮಕಾರಿಯಾಗಿ ನೀಡಲಾಗುತ್ತದೆ. ನಿವೃತ್ತ ಬ್ಯಾಂಕ್‌ ಅಧಿಕಾರಿಗಳು, ಬ್ಯಾಂಕಿಂಗ್‌ ಪರೀಕ್ಷೆಗಳಲ್ಲಿನ ವಿವಿಧ ವಿಷಯಗಳ ತಜ್ಞರು ಈ ಕೇಂದ್ರದೊಂದಿಗೆ ಒಡನಾಟ ಹೊಂದಿದ್ದು ವಿಷಯ ತಜ್ಞರಾಗಿ ಭಾಗಿಯಾಗಲಿದ್ಧಾರೆ. ಇದಲ್ಲದೇ ವಿಷಯಕ್ಕೆ ಸಂಬಂಧಿಸಿ ಅಭ್ಯರ್ಥಿಗಳಿಗೆ ಅನುಮಾನಗಳಿದ್ದರೆ ಅದನ್ನೂ ಬಗೆಹರಿಸಲು ಸಂವಾದಗಳನ್ನು ಆಯೋಜಿಸಲಾಗುತ್ತದೆ.

ತರಬೇತಿಯು ಮೈಸೂರಿನ ಕರಾಮುವಿ ಕಾವೇರಿ ಸಭಾಂಗಣದಲ್ಲೇ ತರಬೇತಿಗಳು ನಡೆಯಲಿದೆ. ಸಂಕ್ರಾಂತಿ ನಂತರ ಉದ್ಘಾಟನೆ ಕಾರ್ಯಕ್ರಮ ನಡೆಯಲಿದ್ದು, ಅಂದಿನಿಂದಲೇ ತರಗತಿಗಳು ಶುರುವಾಗಲಿವೆ. ಸತತ ಒಂದೂವರೆ ತಿಂಗಳ ಕಾಲ ನಿರಂತರವಾಗಿ ತರಬೇತಿ ನೀಡಲಾಗುತ್ತದೆ.

ತರಬೇತಿಯು ಉಚಿತವಾಗಿದ್ದು, ನೋಂದಣಿಗೆ 500 ರೂ.ಗಳನ್ನು ಮಾತ್ರ ವ್ಯಹಿಸಬೇಕಾಗುತ್ತದೆ. ಹೆಚ್ಚಿನ ವಿವರಗಳಿಗೆ ಕೇಂದ್ರದ ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ (ಮೊ.ಸಂ 9448800816) ಇಲ್ಲವೇ ಕಚೇರಿಯ ದೂರವಾಣಿ ಸಂಖ್ಯೆ 0821 2515944ನ್ನು  ಸಂಪರ್ಕಿಸಬಹುದು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಚಾ.ನಗರ | ಬೇಡರಪುರದಲ್ಲಿ ಮತ್ತೊಂದು ಚಿರತೆ ಸೆರೆ

ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…

7 hours ago

ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಿಸಿ : ಡಿಸಿ, ಸಿಇಓಗಳಿಗೆ ಮಧು ಬಂಗಾರಪ್ಪ ಸೂಚನೆ

ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…

7 hours ago

ಕಾರು-ಬೈಕ್‌ ನಡುರೆ ಭೀಕರ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು

ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…

7 hours ago

ವಾಣಿಜ್ಯ ಬಳಕೆಯ ಸಿಲಿಂಡರ್‌ ಪೂರೈಕೆಯಲ್ಲಿ ಶೇ20 ರಷ್ಟು ಹೆಚ್ಚಳ

ಹೊಸದಿಲ್ಲಿ : ಎಲ್‌ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…

8 hours ago

ಇರಾನ್‌ ಡ್ರೋನ್‌ ಉತ್ಪಾದನಾ ಘಟಕದ ಮೇಲೆ ಅಮೆರಿಕ ದಾಳಿ : ಚಿತ್ರ ಬಿಡುಗಡೆ

ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…

9 hours ago

ಹೊಸ ಜಾಹೀರಾತು ನೀತಿ ಮೂಲಕ ಪತ್ರಿಕೆಗಳ ದಮನಕ್ಕೆ ಮುಂದಾದ ಸರ್ಕಾರ : ಪುನರ್‌ ಪರಿಶೀಲನೆಗೆ ಒತ್ತಾಯ

ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…

9 hours ago