ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು ಜಾ.ದಳ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಪಟ್ಟಣದಲ್ಲಿ ಶುಕ್ರವಾರ ಜನರೊಂದಿಗೆ ಜನತಾದಳ ಸಮಾವೇಶವನ್ನು ಉದ್ಘಾಟಿಸಿ ಮಾತಾಡಿದ ಅವರು, ರಾಜ್ಯ ಸರ್ಕಾರ ಜನಪರ ಆಡಳಿತ ನೀಡುವಲ್ಲಿ ಸಂಪೂರ್ಣ ವಿಫಲವಾಗಿದೆ. ರಾಜ್ಯ ಸರ್ಕಾರ ಸಾಲದ ಹೊರೆಯ ಬಜೆಟ್ ಮಂಡಿಸಿದೆ. ಆ ಮೂಲಕ ರಾಜ್ಯದ ಪ್ರತಿಯೊಬ್ಬ ಜನಸಾಮಾನ್ಯರ ಮೇಲೆ ಸಾಲದ ಹೊರೆ ಹೊರಿಸಿದ್ದಾರೆ.
ಒಂದೆಡೆ ಮಾನವ – ವನ್ಯಪ್ರಾಣಿಗಳ ಸಂಘರ್ಷದಿಂದ ಪ್ರತಿ ವರ್ಷ ಅನೇಕ ರೈತರು ಬಲಿಯಾಗುತ್ತಿದ್ದಾರೆ. ಅಲ್ಲದೆ, ಅವರು ಬೆಳೆದ ಬೆಳೆಗಳು ನಾಶವಾಗುತ್ತಿವೆ. ಕಾಡುಪ್ರಾಣಿಗಳ ಹಾವಳಿಯಿಂದ ಸಂತ್ರಸ್ತರಾದ ರೈತ ರೈತ ಕುಟುಂಬಗಳಿಗೆ ದೊಡ್ಡ ಮೊತ್ತದ ಪರಿಹಾರ ನೀಡಲು ಸರ್ಕಾರದ ಬಳಿ ಹಣವೇ ಇಲ್ಲ. ಆದರೆ, ಸರ್ಕಾರ ಜನರ ತೆರಿಗೆ ಹಣವನ್ನು ಬೇರೆ ರಾಜ್ಯಗಳಿಗೆ ಕೋಟಿಗಟ್ಟಲೆ ನೀಡುತ್ತಿರುವುದು ವಿಪರ್ಯಾಸವಾಗಿದೆ ಎಂದರು.
ಮಾನವ ಮತ್ತು ಪ್ರಾಣಿಗಳ ಸಂಘರ್ಷಕ್ಕೆ ಪ್ರತಿ ವರ್ಷ ಅಪಾರ ನಷ್ಟವಾಗುತ್ತಿದ್ದು, ಇದನ್ನು ನಿಯಂತ್ರಿಸಲು ಮುಖ್ಯಮಂತ್ರಿಗಳು ಮತ್ತು ಅರಣ್ಯ ಸಚಿವರು ವಿಫಲರಾಗಿದ್ದಾರೆ. ಗ್ರಾಮಗಳೂ ಅಭಿವೃದ್ಧಿ ಕಾಣದೆ ಮೂಲಸೌಕರ್ಯ ವಂಚಿತವಾಗಿದ್ದು, ಜನಸಾಮಾನ್ಯರ ಆದಷ್ಟು ಬೇಗ ಈ ಸರ್ಕಾರವನ್ನು ಕಿತ್ತೊಗೆಯಬೇಕೆಂಬ ಆಶಾಭಾವನೆ ಹೊಂದಿದ್ದಾರೆ ಎಂದರು.
ಶಾಸಕರಾದ ಜಿ.ಟಿ.ಹರೀಶ್ ಗೌಡ, ಮಂಚೇಗೌಡ, ಮಾಜಿ ಶಾಸಕರಾದ ಸಾ.ರಾ.ಮಹೇಶ್. ಕೆ.ಮಹಾದೇವ, ಮೈ ಮುಲ್ ಮಾಜಿ ಅಧ್ಯಕ್ಷ ಪ್ರಸನ್ನ, ಕೆ.ಎಂ.ಕೃಷ್ಣನಾಯಕ, ಜಿಲ್ಲಾಧ್ಯಕ್ಷ ಅಶ್ವಿನ್ ಕುಮಾರ್, ತಾಲ್ಲೂಕು ಅಧ್ಯಕ್ಷ ರಾಜೇಂದ್ರ, ಗೋಪಾಲಸ್ವಾಮಿ, ಕಾಳಿಹುಂಡಿ ಸಿದ್ದೇಗೌಡ, ನರಸಿಂಹೇಗೌಡ, ಯೋಗನರಸಿಂಹಗೌಡ, ಬೆಳಗನಳ್ಳಿ ಶಿವರಾಜ, ಕರವೇ ನಟರಾಜ್, ಮಹೇಶ್ ಗುಂಡತ್ತೂರು, ಪ್ರಕಾಶ್, ಸೋಲಾರ್ ಪ್ರದೀಪ ಮತ್ತಿತರರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ 416ನೇ ನಾಡಹಬ್ಬ ದಸರಾ…
ಬಳಸಿದ ಅಡುಗೆ ಎಣ್ಣೆಯನ್ನು ಸರಕಾರವೇ ಸಂಗ್ರಹಿಸಿ ಜೈವಿಕ ಇಂಧನವಾಗಿ (ಬಯೋಡೀಸೆಲ) ಪರಿವರ್ತಿಸುವ ಯೋಜನೆ ಪ್ರಶಂಸನೀಯ. ಪುನರಾವರ್ತಿತ ಎಣ್ಣೆ ಬಳಕೆಯಿಂದ ಹೊರಹೊಮ್ಮುವ…
ಅನ್ನ ಬೆಂದಿದೆಯೋ ಇಲ್ಲವೋ ಎಂಬುದನ್ನುಪರೀಕ್ಷಿಸಲು ಪಾತ್ರೆಯ ಅನ್ನವನ್ನು ಮುಟ್ಟಿ ನೋಡಬೇಕಿಲ್ಲ. ಒಂದು ಅಗುಳನ್ನು ಪರೀಕ್ಷಿಸಿದರೆ ಸಾಕು. ಅಂತೆಯೇ ಮೈಸೂರಿನಲ್ಲಿ ಸಂಚಾರ…
ಮಾರುಕಟ್ಟೆಯಲ್ಲಿ ನಕಲಿ ಔಷಧಿಗಳ ಮಾರಾಟ ಹೆಚ್ಚಾಗುತ್ತಿರುವುದು ಅಂತಕ ಮೂಡಿಸಿದೆ. ಬ್ರಾಂಡೆಡ್ ಹೆಸರಿನಲ್ಲಿ ಸೂಕ್ತ ಪ್ರಮಾಣದಲ್ಲಿ ರಾಸಾಯನಿಕಗಳಿಲ್ಲದ ಅಥವಾ ಹಾನಿಕಾರಕ ಘಟಕಾಂಶಗಳಿರುವ…
ಗುಂಡ್ಲುಪೇಟೆ : ತಾಲ್ಲೂಕಿನ ಬಾಚಹಳ್ಳಿಗ್ರಾಮದ ನಿವಾಸಿ, ಹರಿಕಥೆ ಮೇಷ್ಟ್ರು ಮಾದೇಶ(55) ಅವರು ಶನಿವಾರ ರಾತ್ರಿ ನಿಧನರಾದರು. ಚಿಕ್ಕನಿಂದಲೇ ಕಲೆಯನ್ನು ಮೈಗೂಡಿಸಿಕೊಂಡಿದ್ದ…
ದೆಹಲಿ ಕಣ್ಣೋಟ, ಶಿವಾಜಿ ಗಣೇಶನ್ ಅವರ ವಾರದ ಅಂಕಣ ಜನರು ಮತ್ತು ಯುವಕರು ದಿಕ್ಕೆಟ್ಟ ಆಡಳಿತದ ವಿರುದ್ಧ ಸಿಡಿದು ಬೀದಿಗಿಳಿದಿದ್ದಾರೆ…