ಮೈಸೂರು

ಸರ್ಕಾರ ಆರ್ಥಿಕ ದಿವಾಳಿಯಾಗಿದ್ದು, ಈ ಬಗ್ಗೆ ಶ್ವೇತಪತ್ರ ಹೊರಡಿಸಬೇಕು: ಎಚ್‌ ವಿಶ್ವನಾಥ್‌

ಮೈಸೂರು: ಗ್ಯಾರೆಂಟಿ ಯೋಜನೆಗಳಿಂದ ರಾಜ್ಯ ಸರ್ಕಾರದ ದಿಕ್ಕು ತಪ್ಪಿದ್ದು, ಸರ್ಕಾರ ಆರ್ಥಿಕ ದಿವಾಳಿಯಾಗಿದೆ ಈ ಬಗ್ಗೆ ಕರ್ನಾಟಕ ರಾಜ್ಯ ಸರ್ಕಾರ ಕೂಡಲೇ ಶ್ವೇತಪತ್ರ ಹೊರಡಿಸಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಎಚ್‌. ವಿಶ್ವನಾಥ್‌ ಆಗ್ರಹಿಸಿದರು.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿರುವ ಅವರು, ಗ್ಯಾರೆಂಟಿ ಯೋಜನೆಗಳು, ಇತರೆ ಅಭಿವೃದ್ಧಿ ಕಾರ್ಯಗಳಿಗೆ ಬಳಕೆಯಾಗಿರುವ ಹಣದ ಬಗ್ಗೆ ಮಾಹಿತಿ ನೀಡಬೇಕು ಎಂದು ಹೇಳಿದರು.

ರಾಜ್ಯದಲ್ಲಿ ಕಾಂಗ್ರೆಸ್‌ ಆಡಳಿತ ನಡೆಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಜನಸಾಮಾನ್ಯ ರಿಗೆ ಏನು ಬೇಕೋ ಅದನ್ನು ಕೊಡುವುದನ್ನು ಬಿಟ್ಟು ಯಾವ್ಯಾವುದೋ ಉಚಿತ ಗ್ಯಾರಂಟಿಗಳನ್ನು ಘೋಷಣೆ ಮಾಡಿ ಇನ್ನೊಂದು ಕಡೆಯಿಂದ ಸುಲಿಗೆ ಮಾಡುತ್ತಿದೆ. ಅಲ್ಲದೆ ಸರ್ಕಾರವು ಸಾಲದ ಹೊರೆಯಿಂದ ತತ್ತರಿಸುತ್ತಿದೆ ಎಂದು ದೂರಿದರು. ಸರ್ಕಾರದ ವತಿಯಿಂದ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಬದಲುಹೊರಗುತ್ತಿಗೆ ಆಧಾರದ ಮೇಲೆ ಲಕ್ಷಾಂತರ ಜನರಿಂದ ಕೆಲಸ ಮಾಡಿಸುತ್ತಿದ್ದಾರೆ.

ಇಂತಹ ಗುತ್ತಿಗೆಗಳ ಟೆಂಡ‌ರ್ ಅನ್ನು ಸಚಿವರು, ಇತರೆ ರಾಜಕಾರಣಿಗಳ ಸಂಬಂಧಿ ಕರಿಗೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು. ಕಾರ್ಮಿಕ ಕಾನೂನು ಪ್ರಕಾರ ಯಾವುದೇ ಹೊರ ಗುತ್ತಿಗೆಯಡಿಯಲ್ಲಿಕಾರ್ಯ ನಿರ್ವಹಿಸುವ ವರಿಗೆ ಕನಿಷ್ಠ 18 ಸಾವಿರ ರೂ. ವೇತನ ಕೊಡ ಬೇಕೆಂಬ ನಿಯಮವಿದೆ. ಆದರೆ 12 ಸಾವಿರ ರೂ. ವೇತನ ಕೊಟ್ಟು ಉಳಿದ 6 ಸಾವಿರ ರೂ. ಗುತ್ತಿಗೆದಾರನ ಜೇಬಿಗೆ ಹೋಗುತ್ತಿದೆ ಎಂದು ದೂರಿದರು.

ಇನ್ನು ನಟ ದರ್ಶನ್‌ ವಿಚಾರಕ್ಕೆ ಸಂಬಂಧಿಸಿದಂತೆ 2014 ರಲ್ಲಿ ನಟ ದರ್ಶನ್‌ ನನ್ನ ಪರವಾಗಿ ಚುನಾವಣಾ ಪ್ರಚಾರ ಮಾಡಿದ್ದರು. ಆಗ ಅವರ ತಾಯಿ ಕಾಂಗ್ರೆಸ್‌ನಲ್ಲಿದ್ದರು. ನಾನೇಕೆ ದರ್ಶನ್‌ ವಿರುದ್ಧವಾಗಿ ಸಾಕ್ಷಿ ಹೇಳಬೇಕು. ನಮ್ಮ ನಟರೆಲ್ಲರಿಗೂ ಮಾದರಿಯಾಗಬೇಕು ಎಂದು ಉತ್ತರಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

1 hour ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

2 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

4 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

10 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

16 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

16 hours ago