Mysore
21
broken clouds

Social Media

ಸೋಮವಾರ, 26 ಜನವರಿ 2026
Light
Dark

ಧರ್ಮಸ್ಥಳ ಕಬಳಿಸಲು ಸರ್ಕಾರ ಯತ್ನ : ಪ್ರತಾಪ್‌ ಸಿಂಹ ಆರೋಪ

prathap simha

ಮೈಸೂರು : ಧರ್ಮಸ್ಥಳದಲ್ಲಿ ಸಾವಿರಾರು ಕೊಲೆ ಆಗಿದೆ ಎನ್ನುತ್ತಿದ್ದಾರೆ. ಇದು ವಾಸ್ತವದಲ್ಲಿ ಸಾಧ್ಯನಾ?, ಇದೆಲ್ಲಾ ಧರ್ಮಸ್ಥಳ ಕಬಳಿಸಲು ಮಾಡಿರುವ ಯತ್ನ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಆರೋಪಿಸಿದ್ದಾರೆ. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಸರ್ಕಾರ ಡಾ.ವೀರೇಂದ್ರ ಹೆಗ್ಗಡೆ ಅವರನ್ನು ಅರೋಪಿ ಎಂದು ತೀರ್ಮಾನ ಮಾಡಿ ಅದಕ್ಕೆ ಬೇಕಾದ ಸಾಕ್ಷಿ ಈಗ ಹುಡುಕುತ್ತಿದೆ ಎಂದರು.

ನೂರಾರು ಕೊಲೆ ಮಾಡಿಸಲು ಧರ್ಮಸ್ಥಳದ ಧರ್ಮಾಧಿಕಾರಿ ದಾವೂದ್ ಇಬ್ರಾಹಿಂ ಥರ ದೊಡ್ಡ ಡಾನಾ? ಹಿಂದೂ ಸಮಾಜ ಪ್ರಜ್ಞಾವಂತಿಕೆ ಕಳೆದು ಕೊಂಡಿದೆ. ಧರ್ಮಸ್ಥಳ ಟಾರ್ಗೆಟ್ ಮಾಡಿರುವುದು ಹಿಂದೂ ಸಮಾಜಕ್ಕೆ ಅರ್ಥವಾಗುತ್ತಿಲ್ಲ. ಧರ್ಮಸ್ಥಳದ ಬಗ್ಗೆ ಅಪನಂಬಿಕೆ ಮೂಡಿಸುವ ಕೆಲಸವನ್ನು ಇಸ್ಲಾಂ ಧರ್ಮದ ಯಾವನೋ ಒಬ್ಬ ಮಾಡುತ್ತಿದ್ದಾನೆ. ಅದನ್ನು ಹಿಂದೂಗಳು ನಂಬುತ್ತಿದ್ದಾರೆ. ಆರೋಪಿಯನ್ನು ಮೊದಲೇ ನಿರ್ಧರಿಸಿ ಅದಕ್ಕೆ ಬೇಕಾದ ಸಾಕ್ಷಿ ಹುಡುಕುತ್ತಿರುವ ಮೊದಲ ಪ್ರಕರಣ ಇದು ಎಂದರು.

ಸೌಜನ್ಯ ಪರ ಅರ್ಜಿ ಸಲ್ಲಿಸುವೆ ಧರ್ಮಸ್ಥಳ ದೇವಸ್ಥಾನಕ್ಕೆ ಮೀನು ತಿಂದು ಹೋಗಿ ಜನರ ಭಾವನೆಗೆ ಧಕ್ಕೆ ತಂದವರು ಈಗ ಅಲ್ಲಿನ ನಂಬಿಕೆ ಮೂಡಿಸಲು ತನಿಖೆ ಮಾಡಿಸುತ್ತಿದ್ದಾರೆ. ಸೌಜನ್ಯ ಪ್ರಕರಣಕ್ಕೂ ಈಗ ನಡೆಯುತ್ತಿರುವ ಹುಡುಕಾಟಕ್ಕೂ ಸಂಬಂಧವೇ ಇಲ್ಲ. ಸರ್ಕಾರ ಧರ್ಮಸ್ಥಳವನ್ನು ಕಬಳಿಸಲು ಈ ಪ್ರಯತ್ನ ಆರಂಭ ಮಾಡಿದೆ ಎಂದರು.

ಅನಾಮಿಕನ ಪೂರ್ವಾಪರ ಮೊದಲು ಬಹಿರಂಗ ಪಡಿಸಲಿ. ಸೌಜನ್ಯ ಪ್ರಕರಣದಲ್ಲಿ ಮೂರು ಸಂಸ್ಥೆಗಳು ತನಿಖೆ ನಡೆಸಿವೆ. ಇನ್ನೂ ಯಾವುದಾದರೂ ತನಿಖೆ ಆಗಬೇಕಿದ್ದರೆ ಸೌಜನ್ಯ ತಾಯಿ ನನಗೆ ಹೇಳಲಿ. ನಾವೇ ಅವರ ಪರ ನ್ಯಾಯಾಲಯಕ್ಕೆ ಅರ್ಜಿ ಹಾಕುತ್ತೇವೆ ಎಂದು ಹೇಳಿದರು.

Tags:
error: Content is protected !!