Mysore
17
few clouds

Social Media

ಮಂಗಳವಾರ, 03 ಫೆಬ್ರವರಿ 2026
Light
Dark

ಸರ್ಕಾರ ಐದು ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ : ಸಿಎಂ ಸಿದ್ದರಾಮಯ್ಯ

Government will be rock solid for five years CM Siddaramaiah

ಮೈಸೂರು : ನಾನು ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಬ್ಬರೂ ಒಟ್ಟಾಗಿದ್ದೇವೆ, ಯಾರೂ ಏನೂ ಹೇಳಿದರು ನಮ್ಮ ಮಧ್ಯೆ ಭಿನ್ನಾಭಿಪ್ರಾಯವಿಲ್ಲ. ಸರ್ಕಾರ ಐದು ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ ಎಂದು ಮುಖ್ಯಮಂತ್ರಿಗಳು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಅವರು ಇಂದು ಮೈಸೂರು ವಿಮಾನನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಸುರ್ಜೆವಾಲಾ ಅಭಿಪ್ರಾಯ ಪಡೆಯಲಿದ್ದಾರೆ: ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕಾರ್ಯದರ್ಶಿ ಸುರ್ಜೆವಾಲಾ ಅವರು ರಾಜ್ಯಕ್ಕೆ ಭೇಟಿ ನೀಡುತ್ತಿರುವ ಬಗ್ಗೆ ಮಾತನಾಡಿ ಅವರು ಅಭಿಪ್ರಾಯ ಕೇಳಿ, ಅವರ ಕೆಲಸವನ್ನು ಮಾಡುತ್ತಾರೆ ಎಂದರು.

ಬಿಜೆಪಿ ಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು: ಸಿದ್ದರಾಮಯ್ಯ ಅವರು ಈ ಬಾರಿಯ ದಸರಾ ಉದ್ಘಾಟಿಸುವುದಿಲ್ಲ ಎಂದು ಬಿಜೆಪಿಯವರು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಶ್ರೀರಾಮುಲು ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದಾರೆ. ಅವರು ಹೇಗೆ ಭವಿಷ್ಯ ನುಡಿಯುತ್ತಾರೆ ಎಂದು ಪ್ರಶ್ನಿಸಿದರು.

Tags:
error: Content is protected !!