ಮೈಸೂರು: ಇದಕ್ಕೆಲ್ಲ ನಾನು ಹೆದರುವುದಿಲ್ಲ, ನಾವು ಇದನ್ನೆಲ್ಲ ಎದುರಿಸಲು ಸಿದ್ಧರಾಗಿದ್ದೇವೆ. ತಪ್ಪು ಮಾಡಿದ್ದರೆ ತಾನೇ ಹೆದರುವುದು. ರಾಜ್ಯಪಾಲರು ಕೇಂದ್ರ ಬಿಜೆಪಿ ಸರ್ಕಾರದ ಕೈಗೊಂಬೆಯಾಗಿ ವರ್ತಿಸಿದ್ದಾರೆ ಎಂದು ಮುಡಾ ಹಗರಣ ಸಂಬಂದ ರಾಜ್ಯಪಾಲರು ಶೋಕಾಸ್ ನೋಟಿಸ್ ನೀಡಿರುವ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಆಕ್ರೋಶಭರಿತ ಮಾತುಗಳನ್ನಾಡಿದರು..
ನಗರದಲ್ಲಿ ಶುಕ್ರವಾರ(ಆ.2) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 136 ಶಾಸಕರ ಬೆಂಬಲದಿಂದ ಮುಖ್ಯಮಂತ್ರಿ ಆದವನು ನಾನು. ಸರ್ಕಾರ ಅಸ್ಥಿರಗೊಳಿಸಲು ಅವರೆಲ್ಲಾ ಯತ್ನಿಸುತ್ತಿದ್ದಾರೆ. ರಾಜ್ಯಪಾಲರಿಗೆ ಸಲಹೆ ನೀಡುವವರು ಯಾರು? ರಾಜಭವನ ಹಾಗೂ ರಾಜ್ಯಪಾಲರ ಅಧಿಕಾರಿ ದುರ್ಬಳಕೆ ಮಾಡಿಕೊಂಡಿದ್ದಾರೆ. ರಾಜ್ಯಪಾಲರ ನೋಟಿಸ್‌ಗೆ ನಾನೇಕೆ ಹೆದರಲಿ. ಅಶೋಕ್ ಹೆದರಿರಬೇಕು ಅವರಿಗೆ ಭಯ ನನಗಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಟಿ.ಜೆ ಅಹ್ರಾಂ ಒಬ್ಬ ಬ್ಲಾಕ್ ಮೇಲರ್. ಜುಲೈ 26ರ ಬೆಳಿಗ್ಗೆ 11:30 ಕ್ಕೆ ದೂರು ಕೊಡುತ್ತಾನೆ. ಆ ದೂರಿನ ಪರಾಮರ್ಶೆ ಮಾಡದೆ ಆ ದಿನ ಸಂಜೆ ಶೋಕಾಸ್ ನೋಟಿಸ್ ರೆಡಿ ಇದೆ ಬಂದು ಪಡೆದುಕೊಳ್ಳಿ ಎಂದು ನಮ್ಮ ಅಧಿಕಾರಿ ಎಲ್‌ಕೆ ಅತೀಕ್ ಗೆ ಹೇಳುತ್ತಾರೆ. ಜೊಲ್ಲೆ, ಮುರುಗೇಶ್ ನಿರಾಣಿ, ಜರ್ನಾರ್ದನ ರೆಡ್ಡು ವಿರುದ್ಧದ ದೂರು ಇನ್ನೂ ಹಾಗೆಯೇ ಇವೆ. ಅವರಿಗೆ ಇಲ್ಲದ ಶೋಕಾಸ್ ನೋಟಿಸ್‌ನ್ನು ನನಗೆ ತರಾತುರಿಯಲ್ಲಿ ಕೊಟ್ಟಿದ್ದಾರೆ ಎಂದರು.
ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…
ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…
ಮಂಡ್ಯ: ಇದೇ ಅಕ್ಟೋಬರ್.11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…
ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್…