ಮೈಸೂರು :ದಸರಾ ಹಬ್ಬ ದ ಹಿನ್ನೆಲೆ ಇಲ್ಲಿನ ಬನ್ನಿಮಂಟಪ ಮೈದಾನದಲ್ಲಿ ಆರಂಭಗೊಳ್ಳಲಿರುವ ಪಂಜಿನ ಕವಾಯತು ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಗೈರು ಹಾಜರಾಗಲಿದ್ದಾರೆ. ಕೋವಿಡ್ 19 ಬಾಧಿತರಾಗಿರುವುದರಿಂದ ಅವರು ಪಾಲ್ಗೊಳ್ಳುತ್ತಿಲ್ಲ. ಈ ವಿಷಯವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಖಚಿತಪಡಿಸಿದ್ದಾರೆ. ಪಂಜಿನ ಕವಾಯತು ವೇಳೆ ರಾಜ್ಯಪಾಲರು ಗೌರವ ವಂದನೆ ಭಾಗವಹಿಸಿ ಗೌರವ ವಂದನೆ ಸ್ವೀಕರಿಸುವುದು ವಾಡಿಕೆ. ಆದರೆ ಈ ಬಾರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಅದನ್ನು ನಿರ್ವಹಿಸಲಿದ್ದಾರೆ. ಅವರೊಂದಿಗೆ ಕೇಂದ್ರ ಸಚಿವರು ರಾಜ್ಯ ಸಚಿವರು ಪಾಲ್ಗೊಳ್ಳಲಿದ್ದಾರೆ. ಇದರ ಅಧ್ಯಕ್ಷತೆ ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಅಧ್ಯಕ್ಷತೆ ವಹಿಸಲಿದ್ದಾರೆ.





