Mysore
23
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಶಾಲೆಯಿಂದ ಮನೆಗೆ ಹಾಲಿನ ಪುಡಿ ಪ್ಯಾಕೇಟ್‌ ರವಾನೆ: ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದ ಮುಖ್ಯ ಶಿಕ್ಷಕ

ಎಚ್.ಡಿ.ಕೋಟೆ: ಮಕ್ಕಳ ಅಪೌಷ್ಠಿಕತೆ ಹೋಗಲಾಡಿಸಲು ಸರ್ಕಾರಿ ಶಾಲೆಯ ಮಕ್ಕಳಿಗೆ ಸರ್ಕಾರ ಹಾಲನ್ನು ನೀಡುತ್ತಿದೆ. ಆದರೆ ಇಲ್ಲೊಬ್ಬ ಶಿಕ್ಷಕ ಮಕ್ಕಳಿಗೆ ನೀಡುತ್ತಿದ್ದ ಹಾಲಿನ ಪುಡಿ ಪ್ಯಾಕೇಟ್‌ನ್ನು ಮನೆಗೆ ಕೊಂಡೊಯ್ಯುತ್ತಿದ್ದ ವೇಳೆ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದಾನೆ.

ಹೌದು ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ಪಟ್ಟಣದ ಸರ್ಕಾರಿ ಪ್ರಾಥಮಿಕ ಬಾಲಕಿಯರ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಮುಖ್ಯ ಶಿಕ್ಷಕ ಗಣೇಶ್‌ ಎಂಬಾತ ರೆಡ್‌ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾನೆ.

ಮಕ್ಕಳ ಅಪೌಷ್ಠಿಕತೆ ಹೋಗಲಾಡಿಸಲು ಸರ್ಕಾರ ಉಚಿತವಾಗಿ ನೀಡುವ ಒಟ್ಟು 10 ಹಾಲಿನ ಪುಡಿಗಳನ್ನು ಶಿಕ್ಷಕ ದ್ವಿಚಕ್ರ ವಾಹನದಲ್ಲಿ ಕೊಂಡೊಯ್ಯುತ್ತಿದ್ದ. ಈ ವೇಳೆ ಅನುಮಾನಗೊಂಡ ಸಾರ್ವಜನಿಕರು ಬೈಕ್‌ ಪರಿಶೀಲನೆ ನಡೆಸಿದಾಗ ವಿಷಯ ಗೊತ್ತಾಗಿದೆ.

ಈ ವೇಳೆ ಹಾಲಿನ ಪ್ಯಾಕೇಟ್‌ ಅವಧಿ ಮೀರಿದ್ದರಿಂದ ಮನೆಗೆ ಕೊಡೊಯ್ಯುತ್ತಿದ್ದೆ ಎಂದು ಶಿಕ್ಷಕ ಸ್ಪಷ್ಟೀಕರಣ ಕೊಡಲು ಮುಂದಾಗಿದ್ದನು. ಆದರೆ ಹಾಲಿನ ಪ್ಯಾಕೇಟ್‌ಗಳನ್ನು ಪರಿಶೀಲನೆ ನಡೆಸಿದಾಗ ಬರುವ ಡಿಸೆಂಬರ್‌ವರೆಗೂ ಹಾಲಿನ ಪುಡಿ ಬಳಕೆ ಮಾಡಲು ಅವಧಿ ಇರುವುದು ಖಾತರಿಯಾಗಿದೆ.

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳು ಹಾಲಿನ ಪುಡಿಗಳ ಸಮೇತ ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದಿದ್ದಾರೆ.

 

Tags: