ಎಚ್.ಡಿ.ಕೋಟೆ: ಮಕ್ಕಳ ಅಪೌಷ್ಠಿಕತೆ ಹೋಗಲಾಡಿಸಲು ಸರ್ಕಾರಿ ಶಾಲೆಯ ಮಕ್ಕಳಿಗೆ ಸರ್ಕಾರ ಹಾಲನ್ನು ನೀಡುತ್ತಿದೆ. ಆದರೆ ಇಲ್ಲೊಬ್ಬ ಶಿಕ್ಷಕ ಮಕ್ಕಳಿಗೆ ನೀಡುತ್ತಿದ್ದ ಹಾಲಿನ ಪುಡಿ ಪ್ಯಾಕೇಟ್‌ನ್ನು ಮನೆಗೆ ಕೊಂಡೊಯ್ಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ.
ಹೌದು ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ಪಟ್ಟಣದ ಸರ್ಕಾರಿ ಪ್ರಾಥಮಿಕ ಬಾಲಕಿಯರ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಮುಖ್ಯ ಶಿಕ್ಷಕ ಗಣೇಶ್ ಎಂಬಾತ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾನೆ.
ಮಕ್ಕಳ ಅಪೌಷ್ಠಿಕತೆ ಹೋಗಲಾಡಿಸಲು ಸರ್ಕಾರ ಉಚಿತವಾಗಿ ನೀಡುವ ಒಟ್ಟು 10 ಹಾಲಿನ ಪುಡಿಗಳನ್ನು ಶಿಕ್ಷಕ ದ್ವಿಚಕ್ರ ವಾಹನದಲ್ಲಿ ಕೊಂಡೊಯ್ಯುತ್ತಿದ್ದ. ಈ ವೇಳೆ ಅನುಮಾನಗೊಂಡ ಸಾರ್ವಜನಿಕರು ಬೈಕ್ ಪರಿಶೀಲನೆ ನಡೆಸಿದಾಗ ವಿಷಯ ಗೊತ್ತಾಗಿದೆ.
ಈ ವೇಳೆ ಹಾಲಿನ ಪ್ಯಾಕೇಟ್ ಅವಧಿ ಮೀರಿದ್ದರಿಂದ ಮನೆಗೆ ಕೊಡೊಯ್ಯುತ್ತಿದ್ದೆ ಎಂದು ಶಿಕ್ಷಕ ಸ್ಪಷ್ಟೀಕರಣ ಕೊಡಲು ಮುಂದಾಗಿದ್ದನು. ಆದರೆ ಹಾಲಿನ ಪ್ಯಾಕೇಟ್‌ಗಳನ್ನು ಪರಿಶೀಲನೆ ನಡೆಸಿದಾಗ ಬರುವ ಡಿಸೆಂಬರ್‌ವರೆಗೂ ಹಾಲಿನ ಪುಡಿ ಬಳಕೆ ಮಾಡಲು ಅವಧಿ ಇರುವುದು ಖಾತರಿಯಾಗಿದೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳು ಹಾಲಿನ ಪುಡಿಗಳ ಸಮೇತ ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದಿದ್ದಾರೆ.
ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ಚಿನ್ನಯ್ಯ ಆರೋಪಿಸಿದ್ದ ಹಿನ್ನೆಲೆಯಲ್ಲಿ ಎಸ್‌ಐಟಿ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಯಲಾಗಿದೆ. ಹಣದ…
ಬೆಳಗಾವಿ: ಗ್ಯಾರಂಟಿಗಳ ಬಗ್ಗೆ ಸಿಎಲ್‌ಪಿಯಲ್ಲಿ ಚರ್ಚೆಯೇ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು. ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಶಾಸಕರು…
ಬೆಳಗಾವಿ: ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ…
ಬೆಳಗಾವಿ: ಶಾಸಕಾಂಗ ಪಕ್ಷದ ಸಭೆಯಲ್ಲಿ ಯಾರೂ ಕೂಡ ಗ್ಯಾರಂಟಿ ಯೋಜನೆಗಳನ್ನು ವಿರೋಧ ಮಾಡಿಲ್ಲ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.…
ಕೊಡಗು: ಆಸ್ತಿ ವಿಚಾರಕ್ಕೆ ಅಣ್ಣನ ಮಗನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕಾವಾಡಿಯಲ್ಲಿ ನಡೆದಿದೆ.…
ಬೆಳಗಾವಿ: ರಾಜ್ಯದಲ್ಲಿ ಶೀಘ್ರದಲ್ಲೇ ಅರ್ಹರಿಗೆ ಹೊಸ ಬಿಪಿಎಲ್ ಕಾರ್ಡ್ ವಿತರಣೆ ಮಾಡಲಾಗುವುದು ಎಂದು ಆಹಾರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಘೋಷಣೆ…