ಮೈಸೂರು: ಮುಂದಿನ ಹತ್ತು ವರ್ಷವಾದ್ರೂ ನಮ್ಮ ಸರ್ಕಾರ ಅಲ್ಲಾಡಿಸೋಕೆ ಆಗಲ್ಲ. ಸರ್ಕಾರ ಉರುಳಿಸುತ್ತೇವೆ ಎನ್ನುವುದು ನಿಮ್ಮ ಭ್ರಮೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಮೈತ್ರಿ ಪಕ್ಷದ ನಾಯಕರ ವಿರುದ್ಧ ಗುಡುಗಿದರು.
ಶುಕ್ರವಾರ(ಆ.9) ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ಜನಾಂದೋಲನ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ರಾಜ್ಯದ ಜನರು ಹಾಗೂ ಸಂವಿಧಾನದ ರಕ್ಷಣೆಗಾಗಿ ನಾವು ಈ ಜನಾಂದೋಲನವನ್ನು ನಡೆಸುತ್ತಿದ್ದೇವೆ. ಬಿಜೆಪಿ-ಜೆಡಿಎಸ್‌ನವರದ್ದು ಪಾಪವಿಮೋಚನೆಯ ಯಾತ್ರೆಯಾಗಿದೆ ಎಂದರು.
ನಮ್ಮದು ಅಧರ್ಮಿಗಳ ವಿರುದ್ಧದ ಧರ್ಮಯುದ್ಧವಾಗಿದೆ. ಅಸತ್ಯದ ವಿರುದ್ಧದ ಸತ್ಯದ ಹೋರಾಟವಾಗಿದೆ. ಈ ಸರ್ಕಾರವನ್ನು ಹತ್ತು ತಿಂಗಳಲ್ಲಿ ತೆಗೆದು ಹಾಕುತ್ತೇವೆ ಎಂದು ಹೊರಟಿರುವವರ ವಿರುದ್ಧ ಬಡವರಿಗಾಗಿ ನಾವು ಹೋರಾಡುತ್ತಿದ್ದೇವೆ ಎಂದು ಹೇಳಿದರು.
ಹೇ.. ಮಿಸ್ಟರ್ ಕುಮಾರಸ್ವಾಮಿ, ಅಶೋಕ್, ವಿಜಯೇಂದ್ರ ನಿಮಗೆ ಸಿಎಂ ರಾಜೀನಾಮೆ ಬೇಕಾ.. ಈ ಬಂಡೆ ಸಿಎಂ ಸಿದ್ದರಾಮಯ್ಯ ಹಿಂದೆ ಇದ್ದಾನೆ… ನನ್ನೊಂದಿಗೆ 136ಜನ ಶಾಸಕರು ಇದ್ದಾರೆ. ನಾವೆಲ್ಲರೂ ಸಿದ್ದರಾಮಯ್ಯ ಅವರ ಜೊತೆಗಿದ್ದೇವೆ. ನಿಮ್ಮ ಕೈಯಲ್ಲಿ ಏನು ಮಾಡಲಾಗುವುದಿಲ್ಲ ಎಂದು ಗುಡುಗಿದರು.
ನನ್ನ ನೇತೃತ್ವದಲ್ಲಿ 136 ಸೀಟುಗಳನ್ನು ಪಡೆದಿದ್ದೇವೆ. ಅದೇ ಕುಮಾರಸ್ವಾಮಿ ನೇತೃತ್ವದಲ್ಲಿ 19 ಸೀಟು ಬಂದಿದೆ. ಈ ಸರ್ಕಾರ ತೆಗೆಯಲು ಏನೇ ಕುತಂತ್ರ ಮಾಡಿದರೂ ಆಗುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಕೆಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದರು.
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ…
ಭೇರ್ಯ ಮಹೇಶ್ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…
ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…
ಸರಗೂರು : ಪಟ್ಟಣ ಪಂಚಾಯಿತಿ ವ್ಯಾಪ್ತಿ ಯಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನ ಸಾಮಾನ್ಯರು ತತ್ತರಿಸಿ ಆತಂಕದಲ್ಲಿದ್ದರೂ ನಿಯಂ ತ್ರಣ…
ನುರಿತ ತಜ್ಞರ ತಂಡದಿಂದ ಕೆರೆ ಸ್ವಚ್ಛತೆ ಆರಂಭಿಸಲು ತಯಾರಿ ಮೈಸೂರು : ಪ್ರವಾಸಿಗರು ಹಾಗೂ ವಾಯುವಿಹಾರಿಗಳ ನೆಚ್ಚಿನ ತಾಣವಾದ ಕುಕ್ಕರಹಳ್ಳಿ…
ಮೈಸೂರು ನಗರದ ಪ್ರತಿಯೊಂದೂ ವಾರ್ಡ್ನ ಪ್ರತಿ ಮಾರ್ಗದಲ್ಲೂ ಮೈಸೂರು ಮಹಾ ನಗರ ಪಾಲಿಕೆಯಿಂದ ವಾರ್ಡ್ ಸಂಖ್ಯೆ, ವಾರ್ಡ್ನ್ನು ಪ್ರತಿನಿಧಿಸುವ ಪಾಲಿಕೆ…