ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿಂದು ಭಕ್ತ ಕನಕದಾಸರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು.
ಮೈಸೂರಿನ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಮುಂಭಾಗ ಆಯೋಜಿಸಿದ್ದ ಮೆರವಣಿಗೆಗೆ ಶಾಸಕ ಜಿ.ಟಿ.ದೇವೇಗೌಡ ಅವರು ಚಾಲನೆ ನೀಡಿದರು.
ಬೆಳ್ಳಿ ರಥದಲ್ಲಿ ಕನಕದಾಸರ ಪ್ರತಿಮೆ ಇಟ್ಟು ಮೆರವಣಿಗೆ ಮಾಡಲಾಯಿತು. ಮೆರವಣಿಗೆಯಲ್ಲಿ ರಸ್ತೆಯುದ್ಧಕ್ಕೂ ಸಾಗಿದ ವಿವಿಧ ಕಲಾತಂಡಗಳು, ಟ್ಯಾಬ್ಲೋಗಳು ಎಲ್ಲರ ಗಮನ ಸೆಳೆದವು. ಜಿಲ್ಲಾಡಳಿತ ಹಾಗೂ ಕನಕದಾಸ ಜಯಂತಿ ಆಚರಣೆ ಸಮಿತಿಯಿಂದ ಆಯೋಜಿಸಿರುವ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಟಿ.ಎಸ್.ಶ್ರೀವತ್ಸ, ಕೆ.ಹರೀಶ್ ಗೌಡ, ಮಂಜೇಗೌಡ, ಮಾಜಿ ಶಾಸಕ ಎಂ.ಕೆ.ಸೋಮಶೇಖರ್, ಮರೀಗೌಡ, ಸುಬ್ರಹ್ಮಣ್ಯ ಸೇರಿದಂತೆ ಅನೇಕರು ಭಾಗಿಯಾಗಿದ್ದರು.





