ಮೈಸೂರು: ಮೈಸೂರು ಜಿಲ್ಲೆಯಲ್ಲಿರುವ ಕೆರೆಗಳ ಅಭಿವೃದ್ಧಿಗೆ ಅನುದಾನ ನೀಡುವ ಕುರಿತು ಹಾಗೂ ಕಬ್ಬಿಗೆ ಹೆಚ್ಚುವರಿ ದರ ನಿಗದಿಪಡಿಸುವಂತೆ ಒತ್ತಾಯಿಸಿ ಮೈಸೂರು ಜಿಲ್ಲಾಧಿಕಾರಿಗೆ ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು.
ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಅಪರ ಜಿಲ್ಲಾಧಿಕಾರಿ ಶಿವರಾಜ್ ಅವರಿಗೆ ಮನವಿ ಪತ್ರ ಸಲ್ಲಿಸಿ ಒತ್ತಾಯಿಸಲಾಯಿತು.
ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್, ಜಿಲ್ಲಾಧ್ಯಕ್ಷ ಸೋಮಶೇಖರ್, ಬರಡನಪುರ ನಾಗರಾಜ್, ವರಕೋಡು ನಾಗೇಶ್, ಲಕ್ಷ್ಮೀಪುರ ವೆಂಕಟೇಶ್, ಕುರುಬೂರು ಸಿದ್ದೇಶ್, ದೇವನೂರು ವಿಜಯೇಂದ್ರ, ಮಾರ್ಬಳ್ಳಿ ನೀಲಕಂಠಪ್ಪ ಸೇರಿದಂತೆ ಹಲವು ರೈತ ಮುಖಂಡರು ಉಪಸ್ಥಿತರಿದ್ದರು.





