ಮೈಸೂರು : 4 ಪಟ್ಟಣ ಪಂಚಾಯಿತಿಗಳು, 1 ನಗರಸಭೆ, 8 ಗ್ರಾಮ ಪಂಚಾಯಿತಿಗಳ ಪ್ರದೇಶಗಳನ್ನು ಸೇರಿಸಿಕೊಂಡು ಗ್ರೇಟರ್ ಮೈಸೂರು ರಚನೆ ಮಾಡಲು ನಿರ್ಧರಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಬಿ.ಎಸ್.ಸುರೇಶ್ ತಿಳಿಸಿದರು.
ಸಭೆಯ ಬಳಿಕ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ನಗರಾಭಿವೃದ್ಧಿ ಸಚಿವ ಬಿ.ಎಸ್.ಸುರೇಶ್ ಅವರು, ನಗರಪಾಲಿಕೆಯು ಪ್ರಸ್ತುತ 86 ಚ.ಕಿ.ಮೀ ವಿಸ್ತೀರ್ಣ ಹೊಂದಿದ್ದು, ಗ್ರೇಟರ್ ಮೈಸೂರು ರಚನೆಯಾದರೆ 333.46 ಚ.ಕಿ.ಮೀ ವಿಸ್ತೀರ್ಣವನ್ನು ಹೊಂದಲಿದೆ. 2011ರ ಜನಗಣತಿ ಪ್ರಕಾರ 11,19,705 ಜನಸಂಖ್ಯೆ ಇದ್ದು, 2025ರ ಯೋಜಿತ 14.16,671 ಜನಸಂಖ್ಯೆಯನ್ನು ಹೊಂದಿದ್ದು, ಅಂದಾಜು 4 ಲಕ್ಷ ಜನಸಂಖ್ಯೆ ಹೆಚ್ಚಳವಾಗಲಿದೆ. ಮುಂದಿನ ದಿನಗಳಲ್ಲಿ ಕಸ ನಿರ್ವಹಣೆ, ಕುಡಿಯುವ ನೀರು, ಮೂಲಸೌಕರ್ಯ, ವಿದ್ಯುತ್ ವ್ಯವಸ್ಥೆ, ಸಂಪರ್ಕ ಒದಗಿಸಲಾಗುತ್ತದೆ. ಈ ಪ್ರಸ್ತಾವನೆಯನ್ನು ಮುಂದಿನ ಅಥವಾ ನಂತರದ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆಯಲಾಗುವುದು ಎಂದರು.
ಇದನ್ನೂ ಓದಿ:-ಎಚ್.ಡಿ ಕೋಟೆ | ಸಾಲ ಭಾದೆ : ಯುವ ರೈತ ಆತ್ಮಹತ್ಯೆ
ಸಚಿವ ಸಂಪುಟ ಸಭೆಯಲ್ಲಿ ಗ್ರೇಟರ್ ಮೈಸೂರು ರಚನೆಗೆ ಅನುಮೋದನೆಯಾದ ಮೇಲೆ ಡಿಸೆಂಬರ್ ಅಂತ್ಯದೊಳಗೆ ಎಲ್ಲಾ ರೀತಿಯ ಪ್ರಕ್ರಿಯೆಗಳನ್ನು ಮುಗಿಸಿ ಚಾಲ್ತಿ ಬರುವಂತೆ ನೋಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ನುಡಿದರು.
ಗ್ರೇಟರ್ ಮೈಸೂರು ಸೇರಿದಂತೆ ಮೈಸೂರು ನಗರದ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಸಿಎಂ ಅಧ್ಯಕ್ಷತೆಯಲ್ಲಿ ಎರಡು ಸಮಿತಿಗಳು ರಚನೆಯಾಗಲಿವೆ. ಮೊದಲನೆಯದಾಗಿ ಮೈಸೂರು ನಗರಪಾಲಿಕೆಯ ಅಭಿವೃದ್ಧಿ ಸಂಬಂಧ ಸಿಎಂ ಅಧ್ಯಕ್ಷತೆಯಲ್ಲಿ ಸಮಿತಿ ರಚನೆಯಾಗಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ ಉಪಾಧ್ಯಕ್ಷರಾಗಿರುವ ಸಮಿತಿಯಲ್ಲಿ ಶಾಸಕರು ಮತ್ತು ವಿಧಾನ ಪರಿಷತ್‌ನ ಸದಸ್ಯರು ಸದಸ್ಯರಾಗಲಿದ್ದು, ಗ್ರೇಟರ್ ಮೈಸೂರು ರಚನೆ ಸಂಬಂಧ ಅಗತ್ಯ ಸಲಹೆ ಸೂಚನೆಗಳನ್ನು ನೀಡಲಿದ್ದಾರೆ ಎಂದು ಮಾಹಿತಿ ನೀಡಿದರು.
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…
ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…
ಬೆಂಗಳೂರು: ಆರ್.ಅಶೋಕ್ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್…
ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…
ಬೆಂಗಳೂರು: ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ…
ಮೈಸೂರು: ಪಕ್ಷದಲ್ಲಿ ಎಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.…