ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮಹತ್ವದ ಐದು ಗ್ಯಾರೆಂಟಿಗಳಲ್ಲಿ ನಾಲ್ಕನೇ ಗ್ಯಾರೆಂಟಿಯಾದ ಗೃಹಲಕ್ಷ್ಮಿಯೋಜನೆಗೆ ಇಂದು ಚಾಲನೆ ನೀಡಲಾಗುತ್ತದೆ. ಸಾಂಸ್ಕೃತಿಕ ನಗರಿ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಬೃಹತ್ ಕಾರ್ಯಕ್ರಮ ಆಯೋಜಿಸಲಾಗಿದ್ದು ರಾಜ್ಯಸಭೆ ವಿಪಕ್ಷ ನಾಯಕ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಸಂಸದ ರಾಹುಲ್ ಗಾಂಧಿ ಯೋಜನೆ ಚಾಲನೆ ನೀಡಲಿದ್ದಾರೆ.
ಈ ಬೃಹತ್ ಕಾರ್ಯಕ್ರಮದಿಂದ ಟ್ರಾಫಿಕ್ ಜಾಮ್ ಆಗದಂತೆ ತಡೆಯಲು ಸುತ್ತಮತ್ತಲಿನ ಪ್ರಮುಖ ರಸ್ತೆಗಳಲ್ಲಿ ಸಾರ್ವಜನಿಕ ಸಂಚಾರಕ್ಕೆ ಬದಲಿಮಾರ್ಗ ಸೂಚಿಸಲಾಗಿದೆ. ಆದರೆ ಸಂಚಾರಿ ಮಾರ್ಗ ಬದಲಾಗಿರುವುದಕ್ಕೆ ಸಾರ್ವಜನಿಕರು ವಿರೋಧ ವ್ಯಕ್ತಪಡಿಸಿದ್ದಾರೆ.
ನಾವು ಬದಲಿ ರಸ್ತೆಯನ್ನು ಬಳಸಿಕೊಂಡು ಹೋಗಲು ಸಾಧ್ಯವಿಲ್ಲ ಎಂದು ಪೊಲೀಸರ ಜೊತೆ ವಾಗ್ವಾದ ಮಾಡುತ್ತಿದ್ದಾರೆ. ಈ ವೇಳೆ ಪೊಲೀಸರು ಸವಾರರಿಗೆ ಮನವೊಲಿಸಿ ಬೇರೆ ಮಾರ್ಗದಲ್ಲಿ ಕಳುಹಿಸುವಷ್ಟರಲ್ಲಿ ಪೊಲೀಸರು ಹೈರಾಣ ಆಗುತ್ತಿದ್ದಾರೆ. ಇನ್ನು ಕಾರ್ಯಕ್ರಮದ ಸುತ್ತಮುತ್ತ ವಾಹನ ಸಂಚಾರಕ್ಕೆ ಜಿಲ್ಲಾ ಸಂಚಾರ ಪೊಲೀಸ್ ಇಲಾಖೆ ನಿರ್ಬಂಧಿಸಿ ಮುಂಚೆಯೇ ಆದೇಶ ಹೊರಡಿಸಿತ್ತು. ಆದರೂ ಕೂಡ ಜನರು ಸಂಚರಿಸುತ್ತಿದ್ದಾರೆ.
ಕಾರ್ಯಕ್ರಮದಲ್ಲಿ ಲಕ್ಷಾಂತರ ಜನ ಭಾಗವಹಿಸುವ ಹಿನ್ನೆಲೆಯಲ್ಲಿ ಬೆಳಿಗ್ಗೆ 8 ರಿಂದ ಸಂಜೆ 6ರವರೆಗೆ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಕೆಎಸ್ಆರ್ಟಿಸಿ ಬಸ್ ಸೇರಿದಂತೆ ಎಲ್ಲ ವಾಹನಗಳಿಗೆ ಪರ್ಯಾಯ ಮಾರ್ಗ ನಿಗದಿ ಮಾಡಲಾಗಿದೆ. ಜೊತೆಗೆ ಮಹಾರಾಜ ಕಾಲೇಜು ಸುತ್ತಮುತ್ತಲಿನ ರಸ್ತೆಗಳಲ್ಲಿ ಪಾರ್ಕಿಂಗ್ ನಿಷೇಧಿಸಲಾಗಿದೆ. ಕಾರ್ಯಕ್ರಮಕ್ಕೆ ಬರುವ ವಾಹನಗಳ ಪಾರ್ಕಿಂಗ್ಗೆ ಮೈಸೂರು ನಗರದ ವಿವಿಧ ಮೈದಾನಗಳಲ್ಲಿ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ ಎಂದು ಮೈಸೂರು ಪೊಲೀಸ್ ಕಮಿಷನರ್ ರಮೇಶ್ ಬಾನೋತ್ ಮಾಹಿತಿ ನೀಡಿದ್ದರು.
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…
ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…
ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ…
ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್…
ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…