lakshmi habbalkar
ಮೈಸೂರು : ಗೃಹಲಕ್ಷ್ಮೀ ಯೋಜನೆಯ ಆಗಸ್ಟ್ ತಿಂಗಳ ಬಾಕಿ ಹಣವನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ನೀಡಿದರು.
ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಮೂರು ದಿನಗಳ ಹಿಂದೆ ಜುಲೈ ತಿಂಗಳ ಹಣ ಪಾವತಿ ಮಾಡಿದ್ದೇವೆ, ದಸರಾ ಹಬ್ಬದ ಖರ್ಚಿಗಾಗಿ ಮಹಿಳೆಯರಿಗೆ ಹಣದ ಅವಶ್ಯಕತೆ ಇದೆ ಎಂಬುದು ನಮಗೆ ತಿಳಿದಿದೆ. ಆದ ಕಾರಣ ಆಗಸ್ಟ್ ತಿಂಗಳ ಬಾಕಿ ಹಣವನ್ನು ಮಹಿಳೆಯರ ಬ್ಯಾಂಕ್ ಖಾತೆಗೆ ಜಮಾ ಮಾಡುತ್ತೇವೆ, ಕೆಲವು ಸಂದರ್ಭದಲ್ಲಿ ಹಣ ಪಾವತಿ ವಿಳಂಬವಾಗಬಹುದು. ಆದರೆ ಬಾಕಿ ಉಳಿಸಿಕೊಳ್ಳುವುದಿಲ್ಲ ಎಂದರು.
ಮೈಸೂರು ದಸರಾ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಿದ್ದ ಬಾನು ಮುಷ್ತಾಕ್ ಅವರು ದಸರಾ ಸಾಂಪ್ರದಾಯಿಕ ಹಾಗೂ ಧಾರ್ಮಿಕ ಭಾವದ ಕಾರ್ಯಗಳಲ್ಲಿ ಭಾಗಿಯಾಗಿದ್ದಾರೆ. ಬೂಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆ ಮಾಡಿಸಿರುವುದು ಹಿರಿಮೆಯ ವಿಚಾರವಾಗಿದೆ ಎಂದರು. ಸಾಹಿತ್ಯಕ್ಕೆ ಜಾತಿ, ಧರ್ಮದ ಹಣೆಪಟ್ಟಿ ಕಟ್ಟಿದರೆ ಸಾಹಿತ್ಯ ಕ್ಷೇತ್ರವನ್ನು ಶ್ರೀಮಂತಗೊಳಿಸುವರು ಯಾರು ಎಂದು ಪ್ರಶ್ನಿಸಿದ ಸಚಿವರು, ಇನ್ನು ಮುಂದಾದರೂ ನಾಡಿನ ಸಾಂಸ್ಕೃತಿಕ ಉತ್ಸವಕ್ಕೆ ಯಾರೂ ಅಡ್ಡಿಪಡಿಸಬಾರದು ಎಂದು ಮನವಿ ಮಾಡಿದರು.
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಈ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸಲ್ಪಟ್ಟಿರುವ 14ನೇ ಆರೋಪಿ ಪ್ರದೋಷ್ ಹೇಳಿಕೆ ದಾಖಲಿಸುವ…
ಮಂಗಳೂರು: ಜನರಿಗೆ ಶುದ್ಧ ಆಹಾರ ಪೂರೈಸುವ ನಿಟ್ಟಿನಲ್ಲಿ ತಜ್ಞರ ತಂಡದ ತಪಾಸಣೆ ನಿರಂತರವಾಗಿ ನಡೆಯಲಿದ್ದು, ಎರಡನೇ ಬಾರಿ ಲೋಪಗಳು ಕಂಡು…
ಮಂಜು ಕೋಟೆ ಎಚ್.ಡಿ.ಕೋಟೆ: ನಾಯಕ ಸಮುದಾಯದ ಮುಖಂಡರಾದ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ತೆರವಾಗಿರುವ ಆ…
ಮದ್ದು ಅರೆಯಲಿ ಆಳುವವರು! ಬಗೆದಷ್ಟೂ ಬಯಲಾಗುತಿದೆ ಬ್ರಹ್ಮಾಂಡ ಭ್ರಷ್ಟಾಚಾರ ನೆಲದಾಳಕೂ ಬೇರೂರಿದೆ ಕೆಪಿಎಸ್‌ಸಿಯ ಕರ್ಮಕಾಂಡ! ಹಣವಂತರ ಆಡುಂಬಲವಿದು ಹರಣವಾಗುತಿದೆ ಬಡವನ…
ಮೈಸೂರಿನ ಕುವೆಂಪು ನಗರ ಕಾಂಪ್ಲೆಕ್ಸ್ ಹತ್ತಿರ ಇರುವ ಒಂದನೇ ಹಂತ (ಇಡಬ್ಲ್ಯು ಎಸ್) ೩ನೇ ಕ್ರಾಸ್ ಬಳಿ ರಸ್ತೆಯ ಒಂದು…
ಹೆಚ್. ಡಿ. ಕೋಟೆ ಮಿನಿ ವಿಧಾನಸೌಧ ಆಡಳಿತ ಕಚೇರಿ ಪಕ್ಕದಲ್ಲಿ ಸಾರ್ವಜನಿಕರಿಗಾಗಿ ಸಾಕಷ್ಟು ಹಣ ಖರ್ಚು ಮಾಡಿ ಶೌಚಾಲಯವನ್ನು ನಿರ್ಮಾಣ…