Mysore
20
broken clouds

Social Media

ಗುರುವಾರ, 13 ನವೆಂಬರ್ 2025
Light
Dark

ಮೈಸೂರು: ಯದುವೀರ್‌ ಪರ ಮತ ಶಿಕಾರಿ ನಡೆಸಿದ ಜಿ.ಡಿ ದೇವೇಗೌಡ

ಮೈಸೂರು: ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಶಾಸಕ ಜಿ.ಟಿ ದೇವೇಗೌಡ ಅವರು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಪರವಾಗಿ ಮತ ಶಿಕಾರಿ ಮಾಡಿದ್ದಾರೆ.

ಭೋಗಾದಿಯ ಎರಡನೇ ಹಂತದಲ್ಲಿ ಇಂದು ಜ.ಟಿ ದೇವೇಗೌಡರು, ಯದುವೀರ್‌ ಪರ ಮತಯಾಚಿಸಿದರು. ಇನ್ನು ಚಾಮುಂಡೇಶ್ವರಿ ಕ್ಷೇತ್ರದ ವಿವಿಧ ವಾರ್ಡಗಳಲ್ಲಿ ಪ್ರಚಾರಕ್ಕೆ ಹೋದ ಕಡೆಯಲ್ಲಾ ಯದುವೀರ್‌ ಅವರಿಗೆ ಉತ್ತಮ ಬೆಂಬಲ ದೊರೆಯುತ್ತಿದೆ.

ಜಿಟಿಡಿ-ಯದುವೀರ್‌ ರೋಡ್‌ ಶೋಗೆ ಬಿಜೆಪಿ, ಜೆಡಿಎಸ್‌ ಕಾರ್ಯಕರ್ತರು ವ್ಯಾಪಕವಾಗಿ ಬೆಂಬಲ ನೀಡುತ್ತಿದ್ದಾರೆ. ರಾಜ್ಯದಲ್ಲಿ ಮೊದಲ ಹಂತದ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಂತೆಯೇ ಭರ್ಜರಿ ಪ್ರಚಾರ ಆರಂಭಿಸಿರುವ ಬಿಜೆಪಿ ಅಭ್ಯರ್ಥಿಗೆ ಉತ್ತಮ ಸ್ಪಂದನೆ ದೊರೆಯುತ್ತಿದೆ.

Tags:
error: Content is protected !!