ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕಿಡಿಕಾರಿದ ಚಾಮುಂಡೇಶ್ವರಿ ಶಾಸಕ ಜಿ.ಟಿ ದೇವೇಗೌಡ ಬಹಿರಂಗ ಸವಾಲೊಂದನ್ನು ಹಾಕಿದ್ದಾರೆ.
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜಿಟಿಡಿ ಏನು ಕಡಿದು ಕಟ್ಟಿ ಹಾಕಿದ್ದಾರೆ? ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಮಾದ್ಯಮದವರೊಂದಿಗೆ ಪ್ರತಿಕ್ರಿಯಿಸಿದ ಜಿ.ಟಿ ದೇವೇಗೌಡ, ನೀವು ವರುಣ ಕ್ಷೇತ್ರಕ್ಕೆ ರಾಜೀನಾಮೆ ಕೊಡಿ. ನಾನು ಚಾಮುಂಡೇಶ್ವರಿ ಕ್ಷೇತ್ರಕ್ಕೆ ರಾಜೀನಾಮೆ ಕೊಡುತ್ತೇನೆ. ಇಬ್ಬರೂ ಚಾಮುಂಡೇಶ್ವರಿ ಕ್ಷೇತ್ರದ ಉಪಚುನಾವಣೆಗೆ ಕಣಕ್ಕಿಳಿಯೋಣ. ಯಾರು ಗೆಲ್ಲುತ್ತಾರೆ ನೋಡೋಣ ಬನ್ನಿ ಎಂದು ಸವಾಲು ಹಾಕಿದರು.
ಅಭಿವೃದ್ಧಿ ಅಂದ್ರೆ ಏನು ಎಂಬುದೇ ಸಿದ್ದರಾಮಯ್ಯಗೆ ಗೊತ್ತಿಲ್ಲ. ಅಭಿವೃದ್ಧಿ ಮಾಡದೇ ರಾಜಕೀಯದಲ್ಲಿ ಬೆಳದಿದ್ದಾರೆ ಎಂದರೆ ಅದು ಸಿದ್ದರಾಮಯ್ಯ ಮಾತ್ರ ಎಂದು ಟೀಕಿಸಿದರು.
ಎಷ್ಟು ದಿನ ಮುಖ್ಯಮಂತ್ರಿ ಆಗಿರ್ತಿರಿ, ಎಷ್ಟು ದಿನ ಅಧಿಕಾರದಲ್ಲಿ ಇರುತ್ತೀರಾ ನೋಡೋಣ. ನಮಗೆ ನೋವು ಕೊಡುತ್ತಲೇ ಇದ್ದೀರಿ. ಪದೇ ಪದೇ ಬಂದು ಯಾಕೆ ಈ ರೀತಿ ಚುಚ್ಚು ಮಾತುಗಳನ್ನು ಆಡುತ್ತೀರಿ? ಮೌನವಾಗಿ ಮರ್ಯಾದೆಯಿಂದ ಇರಿ. 35 ಸಾವಿರ ಮತಗಳ ಅಂತರದಿಂದ ನಿಮ್ಮನ್ನು ಸೋಲಿಸಿದ್ದಾಗಲೂ ನಿಮ್ಮ ಬಗ್ಗೆ ನಾನು ಅಗೌರವದಿಂದ ಮಾತಾಡಿಲ್ಲ ಎಂದರು.
ಚಾಮುಂಡೇಶ್ವರಿ ಕ್ಷೇತ್ರದಲ್ಲಿನ, ತಹಶೀಲ್ದಾರ್, ಬಿಇಒ ಮೊದಲಾದವರೆಲ್ಲರೂ ಮುಖ್ಯಮಂತ್ರಿ ಬಂಧುಗಳೇ. ಹೆಸರಿಗೆ ನಾನು ಅಲ್ಲಿ ಶಾಸಕ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಎಲ್ಲಾ ನಿಮ್ಮದೇ. ಗುತ್ತಿಗೆದಾರರು ಕಮೀಷನ್ ಅನ್ನು ನಿಮ್ಮ ಪುತ್ರನಿಗೆ ಕೊಡಬೇಕು. ಯತೀಂದ್ರ ಸಿದ್ದರಾಮಯ್ಯ ನಮ್ಮ ಕ್ಷೇತ್ರದಲ್ಲಿ ಕಮೀಷನ್ ಪಡೆಯುತ್ತಿದ್ದಾರೆ. ನಿಮ್ಮದು 60% ಕಮಿಷನ್ ಸರ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಕನ್ನಡ ಸಾಹಿತ್ಯ…